ಛತ್ತೀಸ್‌ಗಢ | ದಲಿತ ಬಾಲಕಿ ಅತ್ಯಾಚಾರ ಪ್ರಕರಣದ ಐವರು ಆರೋಪಿಗಳಿಗೆ ಮರಣ ದಂಡನೆ

Date:

Advertisements

ಛತ್ತೀಸ್‌ಗಢದ ಕೋಬ್ರಾ ಜಿಲ್ಲೆಯ ತ್ವರಿತ ವಿಶೇಷ ನ್ಯಾಯಾಲಯವೊಂದು ದಲಿತ ಸಮುದಾಯದ 16 ವರ್ಷದ ಬಾಲಕಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಆಕೆ ಹಾಗೂ ಆಕೆಯ 2 ಕುಟುಂಬಗಳನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮರಣ ದಂಡನೆ ವಿಧಿಸಿದೆ.

2021ರ ಜನವರಿ 29ರಂದು 16 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಆಕೆಯ ಮೃತದೇಹವನ್ನು ಕಾಡಿಗೆ ಎಸೆದಿದ್ದರು. ಅತ್ಯಾಚಾರದ ಬಗ್ಗೆ ದೂರು ದಾಖಲಿಸಿದ್ದ ಬಾಲಕಿಯ ಎರಡು ಕುಟುಂಬದ ಮೂವರು ಸದಸ್ಯರನ್ನು ಆರೋಪಿಗಳು ಹತ್ಯೆ ಮಾಡಿದ್ದರು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ವರಿತ ನ್ಯಾಯಾಲಯ ಮತ್ತೊಬ್ಬ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶರಾದ ಮಮತಾ ಬೋಜ್‌ವಾನಿ ಅವರು ಶಾಂತಾರಾಮ್‌, ಅಬ್ದುಲ್‌ ಜಬ್ಬಾರ್, ಅನಿಲ್‌ ಕುಮಾರ್, ಪ್ರದೇಶ್ ರಾಮ್ ಹಾಗೂ ಆನಂದ್‌ ರಾಮ್‌ ಎಂಬುವವರಿಗೆ ಕೊಲೆ, ಅತ್ಯಾಚಾರ, ಎಸ್‌ಸಿಎಸ್‌ಟಿ ದೌರ್ಜನ್ಯ ಹಾಗೂ ಇತರ ಐಪಿಸಿ ಸೆಕ್ಷನ್‌ ಕಾಯ್ದೆಯಡಿ ಮರಣ ದಂಡನೆ ಶಿಕ್ಷೆ ವಿಧಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕುಸಿಯುತ್ತಿರುವ ಸಾಮ್ರಾಜ್ಯದ ಹೊಸ ಅಧಿಪತಿ ಡೊನಾಲ್ಡ್ ಟ್ರಂಪ್

ಸರ್ಕಾರದ ಪರವಾಗಿ ವಿಶೇಷ ಅಭಿಯೋಜನ ಸುನಿಲ್‌ ಕುಮಾರ್ ಮಿಶ್ರಾ ಅವರು ವಾದ ಮಂಡಿಸಿದರು. ತೀರ್ಪನ್ನು ಜನವರಿ 17ರಂದು ನೀಡಲಾಗಿತ್ತಾದರೂ ಶಿಕ್ಷೆಯ ಪ್ರಮಾಣವನ್ನು ಇಂದು ಪ್ರಕಟಿಸಲಾಯಿತು. ಆರೋಪಿಗಳ ಅಮಾನವೀಯ, ಕ್ರೂರ ಕೃತ್ಯವು ಅತ್ಯಂತ ವಿಕೃತ ಹಾಗೂ ಹೇಡಿತನದ್ದಾಗಿದೆ ಎಂದು ತೀರ್ಪು ಪ್ರಕಟಿಸುವ ಸಂದರ್ಭದಲ್ಲಿ ನ್ಯಾಯಾಲಯ ತಿಳಿಸಿದೆ.

ಜನವರಿ 29, 2021ರಲ್ಲಿ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರವೆಸಗಿ ಕ್ರೂರವಾಗಿ ಹತ್ಯೆ ಮಾಡಿ ಆಕೆಯ ಮೃತದೇಹವನ್ನು ಕಾಡಿಗೆ ಎಸೆಯಲಾಗಿತ್ತು. ಆರೋಪಿಗಳು ಸಂತ್ರಸ್ತೆಯ ತಂದೆ, ತಾಯಿ ಹಾಗೂ ಕುಟುಂಬಕ್ಕೆ ಸೇರಿದ 4 ವರ್ಷದ ಮಗುವನ್ನು ಕೊಲೆ ಮಾಡಿದ್ದರು.

ಆರೋಪಿಗಳಲ್ಲಿ ಒಬ್ಬನಾದ ಶಾಂತಾರಾಮ್‌ ಎಂಬಾತ ಸಂತ್ರಸ್ತೆಯನ್ನು ಎರಡನೆ ಮದುವೆಗೆ ಬಲವಂತಪಡಿಸಿದ್ದ. ವಿವಾಹಕ್ಕೆ ಬಾಲಕಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ಸಿಟ್ಟಾಗಿ ತನ್ನ ಐವರು ಸಹಚರರೊಂದಿಗೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X