ದಾವಣಗೆರೆ | ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ವಿಚಾರ; ಯತ್ನಾಳ್ ಪರ ನಿಂತ ಜಯಮೃತ್ಯುಂಜಯ ಶ್ರೀ

Date:

Advertisements

ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ವಿಚಾರವು ರಾಜ್ಯದಲ್ಲಿ ವಾಕ್ಸಮರ, ಆರೋಪಗಳಿಗೆ ಕಾರಣವಾಗಿರುವ ಬೆನ್ನಲ್ಲೇ, ಬಸನಗೌಡ ಪಾಟೀಲ್ ಯತ್ನಾಳ್ ಹೆಸರು ಪ್ರಸ್ತಾಪಿಸದೇ, “ಪಂಚಮಸಾಲಿ ಸಮಾಜದ ನಾಯಕರಿಗೆ ಹೆಚ್ಚಿನ ಪ್ರಾಶಸ್ತ್ಯ ಸಿಗಬೇಕು” ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಶ್ರೀ ಪಂಚಮಸಾಲಿ ಸಮಾಜದ ನಾಯಕರ ಪರ ದನಿ ಎತ್ತಿದ್ದಾರೆ.

ದಾವಣಗೆರೆಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ತೆರಳುವ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು “ಬಿಜೆಪಿಯಲ್ಲಿ ಉನ್ನತ ಹುದ್ದೆಗಳನ್ನು ಪಂಚಮಸಾಲಿ ಸಮುದಾಯದ ನಾಯಕರಿಗೆ ನೀಡಬೇಕು. ಇದು ಮುಂದಿನ ದಿನಗಳಲ್ಲಿ ಬಿಜೆಪಿಗೆ ಒಳ್ಳೆಯದಾಗಲಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.‌

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಎಪಿಎಂಸಿ ಮಾರುಕಟ್ಟೆ ಬಂದ್‌ ಕರೆ ವಾಪಸ್; ಮೆಕ್ಕೆಜೋಳ ವ್ಯಾಪಾರಕ್ಕೆ ಸೂಚನೆ

Advertisements

“ಬಿಜೆಪಿ ಅಧಿಕಾರದಲ್ಲಿದ್ದಾಗ ಪಂಚಮಸಾಲಿ ಸಮುದಾಯದ ನಾಯಕರಿಗೆ ಸಚಿವ ಸ್ಥಾನ ಕೊಡಲಾಗಿತ್ತು. ಇದಕ್ಕೆ ಸಮುದಾಯವೂ ಕೂಡ ಕೃತಜ್ಞವಾಗಿದೆ. ಆದರೆ ಪಕ್ಷದ ಉನ್ನತ ಸ್ಥಾನಗಳನ್ನು ನಮ್ಮ ನಾಯಕರಿಗೆ ನೀಡಿಲ್ಲ. ಪಂಚಮಸಾಲಿ ಸಮಾಜವನ್ನು ಕೇವಲ ಮತ ಬ್ಯಾಂಕ್ ಮಾಡಿಕೊಂಡು ನೋಡಲಾಗಿದ್ದು, ಇದು ಬೇಸರದ ಸಂಗತಿ” ಎಂದು ಹೇಳಿದರು.

ಬಸವ ಜಯಮೃತ್ಯುಂಜಯ ಸ್ವಾಮೀಜಿಯವರು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಹೆಸರು ಪ್ರಸ್ತಾಪಿಸದೇ ಪರೋಕ್ಷವಾಗಿ ಬೆಂಬಲ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X