ರೋಗ ಬರುವ ಮುಂಚೆಯೇ ಸಮುದಾಯದ ಜನರಿಗೆ ಮಾಹಿತಿ ನೀಡಿ ಅವರ ಆರೋಗ್ಯ ಕಾಪಾಡುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಬಹಳ ಪ್ರಮುಖವಾದದ್ದು ಎಂದು ವಿಜಯಪುರ ತಾಲ್ಲೂಕು ಆರೋಗ್ಯಾಧಿಕಾರಿ ಎಸ್ ಡಿ ಕುಲಕರ್ಣಿ ಅಭಿಪ್ರಾಯಪಟ್ಟರು.
ಸಿಂದಗಿ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರದ ವತಿಯಿಂದ ಸಮುದಾಯ ಸಂಘಟನೆ ಕುರಿತು ಆಶಾ ಕಾರ್ಯಕರ್ತೆಯರಿಗೆ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಗಾರದಲ್ಲಿ ಮಾತನಾಡಿದ ಅವರು, ʼರೋಗಗಳ ನಿಯಂತ್ರಣ, ಸ್ವಚ್ಛತೆ, ಪೌಷ್ಠಿಕ ಆಹಾರ ಸೇವನೆ, ಸರಿಯಾದ ಸಮಯಕ್ಕೆ ಚಿಕಿತ್ಸೆ, ಶುದ್ಧ ನೀರು ಆಹಾರ ಸೇವನೆ ಸೇರಿದಂತೆ ಹಲವು ಮಾಹಿತಿಗಳನ್ನು ಸಮುದಾಯದ ಜನರಿಗೆ ಸಮಯಕ್ಕೆ ಸರಿಯಾಗಿ ತಲುಪಿಸುವುದರ ಜೊತೆಗೆ ಗರ್ಭಿಣಿ-ಬಾಣಂತಿಯರ ಆರೈಕೆಯಲ್ಲೂ ಆಶಾ ಕಾರ್ಯಕರ್ತೆಯರ ಪಾತ್ರ ಮುಖ್ಯವಾಗಿದೆ. ಸಾರ್ವಜನಿಕರೂ ಕೂಡ ಆಶಾ ಕಾರ್ಯಕರ್ತೆಯರು ನೀಡುವ ಮಾಹಿತಿಯನ್ನು ಪರಿಗಣಿಸಿ ಅವರು ಸರಿಯಾಗಿ ಕರ್ತವ್ಯ ನಿರ್ವಹಿಸಲು ಅನುವು ಮಾಡಿಕೊಡಬೇಕು ಎಂದರು.
ಸಂಗಮ ಸಂಸ್ಥೆ ನಿರ್ದೇಶಕ ಫಾ. ಸಂತೋಷ್ ಮಾತನಾಡಿ, ಇತ್ತೀಚಿನ ದಿನಮಾನಗಳಲ್ಲಿ ಹವಾಮಾನ ಬದಲಾವಣೆಯಿಂದ ಜನರ ಆರೋಗ್ಯದಲ್ಲಿ ಸಾಕಷ್ಟು ಏರುಪೇರು ಉಂಟಾಗುತ್ತಿದೆ. ಪ್ರಕೃತಿಯನ್ನು ಶುದ್ಧವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ. ಪರಿಸರ ಚೆನ್ನಾಗಿದ್ದರೆ ಜೀವಸಂಕುಲ ಆರೋಗ್ಯವಾಗಿರುತ್ತದೆ. ಪ್ರತಿಯೊಬ್ಬರೂ ಗಿಡ ಮರ ಬೆಳೆಸಿಕೊಳ್ಳುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಈ ಸುದ್ದಿ ಓದಿದ್ದೀರಾ?: ವಿಜಯಪುರ | ಕಾರ್ಮಿಕರ ಹಲ್ಲೆ ಪ್ರಕರಣ; ಶಿಸ್ತು ಕ್ರಮಕ್ಕೆ ಮನವಿ
ಕಾರ್ಯಾಗಾರದಲ್ಲಿ ವಿಜಯಕುಮಾರ ಬಂಟನೂರ, ತೇಜಸ್ವಿನಿ, ಮಲಕೃಪ ಹಲಗ್ನಿ, ಬಸವರಾಜ ಬಿಸನಾಳ, ರಾಜೀವ ಕುರಿಮನಿ, ಮಹೇಶ ಚವ್ಹಾಣ, ಉಮೇಶ, ಕಲಾವತಿ, ಸುಜಾತಾ, ಆಶಾ ಕಾರ್ಯಕರ್ತೆಯರು ಜನವೇದಿಕೆ ನಾಯಕರು, ಕಟ್ಟಡ ಕಾರ್ಮಿಕರು ಹಾಗೂ ಇತರರು ಇದ್ದರು.
