ಪಂಪ್‌ಸೆಟ್ ಆಫ್ ಮಾಡುವ ವೇಳೆ ವಿದ್ಯುತ್ ಪ್ರವಹಿಸಿ 12 ವರ್ಷದ ಬಾಲಕಿ ಮೃತಪಟ್ಟಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಡಹಳ್ಳಿ ಗ್ರಾಮದ ವಿದ್ಯಾ (12) ಮೃತ ದುರ್ದೈವಿ. ಮನೆಯಲ್ಲಿದ್ದ ನೀರಿನ ಪಂಪ್ ಸ್ವಿಚ್ ಆಫ್ ಮಾಡಲು ತೆರಳಿದ್ದ ವೇಳೆ ವಿದ್ಯುತ್ ಪ್ರವಹಿಸಿದೆ. ಒದ್ದೆ ಬಟ್ಟೆ ಧರಿಸಿದ್ದರಿಂದ ಹೆಚ್ಚು ಪರಿಣಾಮಕಾರಿಯಾಗಿ ವಿದ್ಯುತ್ ಶಾಕ್ ತಗುಲಿದೆ. ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯದಲ್ಲಿಯೇ ಬಾಲಕಿ ಮೃತಪಟ್ಟಿತ್ತು.
ಬಾಲಕಿ ತಂದೆಯ ಊರು ಚಾಮರಾಜನಗರ ತಾಲೂಕಿನ ಕುಮಚಳ್ಳಿ ಆಗಿದ್ದು, ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗ್ರಾಮದ ತಾತನ ಮನೆಗೆ ಬಾಲಕಿಯನ್ನು ಕರೆತರಲಾಗಿತ್ತು. ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಈ ಸುದ್ದಿ ಓದಿದ್ದೀರಾ? ಧಾರವಾಡ | ನೇಣು ಬಿಗಿದುಕೊಂಡು ಸಹೋದರಿಯರು ಆತ್ಮಹತ್ಯೆ