ಟ್ವಿಟರ್‌ ಬಯೋ ಬದಲಿಸಿದ ರಾಹುಲ್‌ ಗಾಂಧಿ

Date:

Advertisements
  • ಏಕವಿಲೋಮ ಅಲ್ಪ ವಿರಾಮ ಬಳಸಿ ಅರ್ಹ ಎಂದು ಬದಲಿಸಿಕೊಂಡ ರಾಹುಲ್‌ ಗಾಂಧಿ
  • ದೆಹಲಿಯ ರಾಜ್‌ಘಾಟ್‌ನಲ್ಲಿ ‘ಸಂಕಲ್ಪ ಸತ್ಯಾಗ್ರಹ’ ಕೈಗೊಂಡಿರುವ ಕಾಂಗ್ರೆಸ್   

ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಂಡ ಎರಡು ದಿನಗಳ ನಂತರ,ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ತಮ್ಮ ಟ್ವಿಟರ್ ಬಯೋವನ್ನು ಬದಲಿಸಿಕೊಂಡಿದ್ದಾರೆ. ಬಯೋದಲ್ಲಿ ‘ಅನರ್ಹ ಸಂಸದ’ ಎಂದು ಬರೆದುಕೊಂಡಿದ್ದಾರೆ.

‘ಅನ್‌’ಅರ್ಹ ಸಂಸದ'(ಡಿಸ್‌’ಕ್ವಾಲಿಫೈಡ್)ಎಂದು ಇಂಗ್ಲಿಷ್‌ನಲ್ಲಿ ಬದಲಿಸಿಕೊಂಡಿದ್ದರೂ ಏಕವಿಲೋಮ ಅಲ್ಪ ವಿರಾಮ ಬಳಸಿಕೊಂಡಿರುವುದರಿಂದ ‘ನಾನು ಅರ್ಹ’ ಎಂದು ಅರ್ಥ ನೀಡುತ್ತದೆ.  

ರಾಹುಲ್‌ ಅವರ ಅನರ್ಹ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಇಂದು (ಮಾರ್ಚ್‌ 26) ದೆಹಲಿಯ ರಾಜ್‌ಘಾಟ್‌ನಲ್ಲಿ  ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಒಂದು ದಿನದ ‘ಸಂಕಲ್ಪ ಸತ್ಯಾಗ್ರಹ’ ಮಾಡುತ್ತಿದೆ.

Advertisements

2019ರ ಲೋಕಸಭಾ ಚುನಾವಣೆಯ ವೇಳೆ ಕೋಲಾರದಲ್ಲಿ ನರೇಂದ್ರ ಮೋದಿಯವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಸೂರತ್ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಹುಲ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು, ಸೂರತ್ ನ್ಯಾಯಾಲಯ 30 ದಿನಗಳ ಜಾಮೀನು ಮಂಜೂರು ಮಾಡಿದೆ.

Rahul Gandhi twitter
Rahul-Gandhi-twitter.

ಈ ವಿಷಯಕ್ಕೆ ಸಂಬಂಧಿಸಿದಂತೆ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಉದ್ಯಮಿ ಅದಾನಿಯವರ ಭ್ರಷ್ಟ ವ್ಯವಹಾರದ ಸಂಬಂಧದ ವಿರುದ್ಧ ವಾಗ್ದಾಳಿ ನಡೆಸಿದರು.

“ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಯುತ್ತಿರುವುದು ಮತ್ತು ಪ್ರಧಾನಿ ನರೇಂದ್ರ ಮೋದಿ-ಅದಾನಿ ನಡುವಿನ ಸಂಬಂಧದ ಬಗ್ಗೆ ಪ್ರಶ್ನೆಗಳನ್ನು ಕೇಳಲು ಹೆದರುವುದಿಲ್ಲ. ನನ್ನ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ. ನಾಲ್ವರು ಸಚಿವರು ಮಾಡಿರುವ ಸುಳ್ಳು ಆರೋಪದ ವಿರುದ್ಧ ಲೋಕಸಭೆಯಲ್ಲಿ ಸ್ಪಷ್ಟನೆ ನೀಡಲು ಅವಕಾಶ ನೀಡುವಂತೆ ಸ್ಪೀಕರ್ ಜೊತೆ ವಿನಂತಿಸಿದ್ದೇನೆ. ಆದರೆ, ಅವರು ಮಾತನಾಡಲು ಅವಕಾಶ ನೀಡಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೌತಮ್ ಅದಾನಿ ನಡುವಿನ ಸಂಬಂಧ ಹೊಸದಲ್ಲ” ಎಂದೂ ಅವರು ಆರೋಪಿಸಿದ್ದಾರೆ.

“ಶೆಲ್ ಕಂಪನಿಗಳಿಂದ ಹೊರಬಂದ 20,000 ಕೋಟಿ ರೂಪಾಯಿ ಯಾರ ಹಣ ಎಂದು ನಾನು ಪ್ರಶ್ನೆಗಳನ್ನು ಕೇಳುವುದನ್ನು ನಿಲ್ಲಿಸುವುದಿಲ್ಲ. ರಾಷ್ಟ್ರದ ಧ್ವನಿಯನ್ನು ರಕ್ಷಿಸಲು ನಾನು ಇಲ್ಲಿದ್ದೇನೆ. ನನ್ನನ್ನು ಜೀವನ ಪರ್ಯಂತ ಜೈಲಿಗೆ ಹಾಕಿದರೂ ಅಥವಾ ಸದಸ್ಯತ್ವವನ್ನು ರದ್ದುಗೊಳಿಸಿದರೂ ಭಾರತದ ಜನರ ಪ್ರಜಾಸತ್ತಾತ್ಮಕ ಧ್ವನಿಯನ್ನು ರಕ್ಷಿಸಲು ನನ್ನ ಹೋರಾಟ ಮುಂದುವರೆಯುತ್ತದೆ. ನಾನು ಯಾರಿಗೂ ಹೆದರುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೌತಮ್ ಅದಾನಿ ನಡುವಿನ ಸಂಬಂಧದ ಬಗ್ಗೆ ಪ್ರಶ್ನೆಗಳನ್ನು ಕೇಳುವುದನ್ನು ನಿಲ್ಲಿಸುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X