ಉಡುಪಿ | ಧೀರಜ್ ಬೆಳ್ಳಾರೆಗೆ ಕರ್ನಾಟಕ ಅಚಿವರ್ಸ್ ಬುಕ್ ಅವಾರ್ಡ್

Date:

Advertisements

ಉಡುಪಿ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾದ ಧೀರಜ್ ಬೆಳ್ಳಾರೆ ಇವರಿಗೆ ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ಸ್ (KABR) ವತಿಯಿಂದ ಜನವರಿ 10, 2025 ರಂದು, ರಾಷ್ಟ್ರೀಯ ದಾಖಲೆ ಪ್ರಮಾಣಪತ್ರವನ್ನು ನೀಡಿ ಗೌರವಿಸಲಾಯಿತು . ಇವರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಕಳಂಜದ ಯುವ ಮತ್ತು ಉತ್ಸಾಹಭರಿತ ಬರಹಗಾರಾಗಿದ್ದು,”ಸ್ಟೇಟಸ್ ಕಥೆಗಳು” ಎಂಬ ಶೀರ್ಷಿಕೆಯ ಸರಣಿಯಡಿಯಲ್ಲಿ ಜುಲೈ 2020 ರಿಂದ ಡಿಸೆಂಬರ್ 2024 ವರೆಗೆ 1,635 ಸಣ್ಣ ಕಥೆಗಳನ್ನು ಬರೆಯುವ ಮೂಲಕ ಈ ಗಮನಾರ್ಹ ಸಾಧನೆಯನ್ನು ಮಾಡಿದ್ದಾರೆ.

ಈ ಕಥೆಗಳು ಕನ್ನಡ ವೆಬ್ಸೈಟ್ ನಲ್ಲಿ ನಿರಂತರವಾಗಿ ಪ್ರಕಟವಾಗುತ್ತಿದ್ದು, ನೈತಿಕ ಮೌಲ್ಯಗಳು, ಜೀವನ ಪಾಠಗಳು ಮತ್ತು ಪ್ರಬಲ ಸಾಮಾಜಿಕ ಸಂದೇಶಗಳನ್ನು ಉತ್ತೇಜಿಸಲು ಹೆಸರುವಾಸಿಯಾದ ಇವರ ಕಥೆಗಳು ಓದುಗರನ್ನು ಶ್ರೀಮಂತಗೊಳಿಸುವುದಲ್ಲದೆ, ಸಾಮಾಜಿಕ ಯೋಗಕ್ಷೇಮಕ್ಕೂ ಪ್ರಮುಖ ಕೊಡುಗೆ ನೀಡಿವೆ. ಇವರ ಮೊದಲ‌ ನೂರು ಕತೆಗಳನ್ನ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟಿಸಲಾಗಿದೆ.ಕತೆ ಬರವಣಿಗೆ ಜೊತೆ, ನಾಟಕ, ಅಭಿನಯದಲ್ಲೂ ತನ್ನ ಛಾಪು ಮೂಡಿಸುತ್ತಿರುವ ಬಹುಮುಖ ಪ್ರತಿಭೆ.

ಇವರ ಈ ಸಾಧನೆಗೆ ಸಂಸ್ಥೆಯ ಸಂಸ್ಥಾಪಕರು ಸಿಎ ಗೋಪಾಲಕೃಷ್ಣ ಭಟ್ ಹಾಗೂ ಶಿಕ್ಷಕ ಶಿಕ್ಷಕೇತರ ವೃಂದದವರು ಶುಭಹಾರೈಸಿದ್ದಾರೆ. ಮಣಿಮಜಲು ಗುರುವಪ್ಪ ಮತ್ತು ಸುಮತಿ ದಂಪತಿಗಳ ಪುತ್ರ. ಬಾಳಿಲ ವಿದ್ಯಾಬೋಧಿನಿ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ಳಾರೆಯ ಹಳೆಯ ವಿದ್ಯಾರ್ಥಿ.

Advertisements
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X