ಚಿತ್ರದುರ್ಗ | ಕಾನೂನು, ಸಂವಿಧಾನ ನಮ್ಮ ಧರ್ಮ ಗ್ರಂಥವಾಗಬೇಕು: ಹಿರಿಯ ವಕೀಲೆ ವಿಜಯಲಕ್ಷ್ಮಿ

Date:

Advertisements

ಪ್ರಜಾಪ್ರಭುತ್ವ ನಮ್ಮ ಧರ್ಮವಾಗಬೇಕು. ಕಾನೂನುಗಳು, ಸಂವಿಧಾನ ನಮ್ಮ ಧರ್ಮಗ್ರಂಥವಾಗಬೇಕು ಎಂದು ಹಿರಿಯ ವಕೀಲೆ ಎಂ ಎನ್ ವಿಜಯಲಕ್ಷ್ಮಿ ಕರೆ ನೀಡಿದರು.

ಚಿತ್ರದುರ್ಗ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಮೊಳಕಾಲ್ಮೂರು ಸಮಾಜ ಪರಿವರ್ತನಾ ಸೇವಾ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಮೊಳಕಾಲ್ಮೂರು ತಾಲೂಕಿನ ಕೋನಸಾಗರ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಕಾನೂನು ಜಾಗೃತಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

“ಭಾರತೀಯ ಕಾನೂನಿನಲ್ಲಿ ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿ ಮಾಡಲಾಗಿದೆ. ಶಿಕ್ಷಣದಿಂದ ನೈತಿಕ ಮೌಲ್ಯಗಳನ್ನು ಬಿತ್ತುವುದರಿಂದ ಉತ್ತಮ ಸಮಾಜವು ನಿರ್ಮಾಣವಾಗುತ್ತದೆ. ಉತ್ತಮ ಸಮಾಜ ನಿರ್ಮಾಣವಾದರೆ ಉತ್ತಮ ದೇಶ ನಿರ್ಮಿತವಾಗುತ್ತದೆ. ಆದ್ದರಿಂದ ಭಾರತೀಯ ಕಾನೂನಿನ ಒಳಗೆ ಶಿಕ್ಷಣವನ್ನು 14 ರಿಂದ 18 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಉಚಿತ ಮತ್ತು ಕಡ್ಡಾಯ ಮಾಡಲಾಗಿದೆ” ಎಂದು ತಿಳಿಸಿದರು.

Advertisements

“ಶಿಕ್ಷಣ ಒಂದು ದೇಶದ ಅಭಿವೃದ್ಧಿಯ ಬಾಗಿಲನ್ನು ತೆರೆಯುವ ಕೀಲಿ ಕೈಯಿದ್ದಂತೆ. ‘ಶಿಕ್ಷಣವೇ ಮಾನವನ ವಿಕಾಸದ ಹೆದ್ದಾರಿ’. ಹಾಗಾಗಿ ನಾವೆಲ್ಲರೂ ಶಿಕ್ಷಿತರಾಗುವುದರ ಮೂಲಕ, ಭಾರತೀಯ ಸಂವಿಧಾನದ ಮತ್ತು ಕಾನೂನಿನ ಘನತೆ ಗೌರವ ಸ್ವಾಭಿಮಾನವನ್ನು ಎತ್ತಿ ಹಿಡಿಯುವುದು ನಮ್ಮೆಲ್ಲರ ಕರ್ತವ್ಯವಾಗಬೇಕು” ಎಂದು ಕರೆ ನೀಡಿದರು.

Senior advocate Vijayalakshmi 1

“ಭಾರತದಲ್ಲಿ ಸಾಮಾಜಿಕ ಮೂಲ ಪಿಡುಗುಗಳಾದ ಬಾಲ್ಯ ವಿವಾಹ, ವರದಕ್ಷಿಣೆ, ಬಾಲಕಾರ್ಮಿಕ ಪದ್ಧತಿ ಹಾಗೂ ಜೀತಪದ್ಧತಿ ಸೇರಿದಂತೆ ಇನ್ನೂ ಮೊದಲಾದ ಅನಿಷ್ಟ ಪದ್ದತಿಗಳನ್ನು ಹೋಗಲಾಡಿಸಬೇಕಿದೆ. ಸಮಾನತೆ, ಮಹಿಳಾ ಹಕ್ಕುಗಳು ಮತ್ತು ಮಕ್ಕಳ ಹಕ್ಕುಗಳು, ಮೂಲಭೂತ ಹಕ್ಕುಗಳು, ಕರ್ತವ್ಯಗಳು, ರಾಜ್ಯನೀತಿ ನಿರ್ದೇಶಕ ತತ್ವಗಳು, ಇವುಗಳು ಸಂವಿಧಾನದ ಮತ್ತು ಕಾನೂನಿನ ಆಸ್ತಿಯಾಗಿವೆ. ಆದ್ದರಿಂದ ಇವುಗಳನ್ನು ರಕ್ಷಿಸುವುದು ನಮ್ಮೆಲ್ಲರ ಮೂಲಭೂತ ಕರ್ತವ್ಯವಾಗಬೇಕು” ಎಂದು ಅಭಿಪ್ರಾಯಪಟ್ಟರು.

“ಕಾನೂನುಗಳು ನಮ್ಮ ಸಂವಿಧಾನದ ಜೀವಾಳ. ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ. ಆದ್ದರಿಂದ ಸಂವಿಧಾನ ಮತ್ತು ಭಾರತೀಯ ಕಾನೂನಿನ ಆಶಯಗಳನ್ನು ಎತ್ತಿ ಹಿಡಿಯಬೇಕಾಗಿದೆ” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ವಿಚಾರ; ಯತ್ನಾಳ್ ಪರ ನಿಂತ ಜಯಮೃತ್ಯುಂಜಯ ಶ್ರೀ

ಸಮಾಜ ಪರಿವರ್ತನಾ ಚಳುವಳಿಯ ಎಸ್ ಪರಮೇಶ್ ಮಾತನಾಡಿ, “ಸೂರ್ಯನಿಲ್ಲದ ಜಗತ್ತನ್ನು ಹೇಗೆ ಊಹಿಸಿಕೊಳ್ಳಲೂ ಸಾಧ್ಯವಿಲ್ಲವೋ, ಹಾಗೆಯೇ ಕಾನೂನುಗಳು ಇಲ್ಲದ ದೇಶವನ್ನು ಊಹಿಸಿಕೊಳ್ಳುವುದೂ ಅಸಾಧ್ಯ. ಕಾನೂನುಗಳು ಒಂದು ದೇಶದ ರಕ್ಷಾ ಕವಚ ಇದ್ದಂತೆ. ಕಾನೂನುಗಳಿಂದಾಗಿ ಇಂದು ಭಾರತದಲ್ಲಿ ನಾವೆಲ್ಲರೂ ನೆಮ್ಮದಿಯಿಂದ ಜೀವಿಸುತ್ತಿದ್ದೇವೆ. ಕಾನೂನುಗಳಿಲ್ಲದೆ ಹೋದರೆ, ಇಡೀ ದೇಶ ಅಶಾಂತಿ, ದೌರ್ಜನ್ಯ, ದಬ್ಬಾಳಿಕೆ ಮೊದಲಾದವುಗಳಿಂದ ದೇಶ ಅವನತಿಯ ಹಂತಕ್ಕೆ ಸಾಗುತ್ತದೆ. ಆದ್ದರಿಂದ ಕಾನೂನುಗಳನ್ನು ಗೌರವಿಸಿ ಅವುಗಳನ್ನು, ಪಾಲಿಸಬೇಕಾಗಿರುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ಕಾನೂನುಗಳನ್ನು ನಾವೆಲ್ಲರೂ ರಕ್ಷಿಸೋಣ” ಎನ್ನುವ ಸಲಹೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಮ್ಮ, ಸಮಾಜ ಪರಿವರ್ತನಾ ಸೇವಾ ಸಂಸ್ಥೆಯ ಅಧ್ಯಕ್ಷ ಮರಿಸ್ವಾಮಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ವೀರೇಶ್, ಗ್ರಾಮ ಪಂಚಾಯಿತಿ ಸದಸ್ಯ ಪಾಲಯ್ಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಿವಣ್ಣ, ಶಿಕ್ಷಕ ಸಮಿವುಲ್ಲಾ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X