ಚಿಕ್ಕಬಳ್ಳಾಪುರ | ಮೂರನೇ ದಿನಕ್ಕೆ ಕಾಲಿಟ್ಟ ದಸಂಸ ಧರಣಿ

Date:

Advertisements

ದಲಿತರ ಮೂಲಭೂತ ಸಮಸ್ಯೆಗಳು ಮತ್ತು ದಲಿತರ ಮೇಲಿನ ದೌರ್ಜನ್ಯಗಳ ಬಗ್ಗೆ ಜಿಲ್ಲಾಡಳಿತ ನಿರ್ಲಕ್ಷ್ಯ ಹಾಗೂ ದಲಿತ ವಿರೋಧಿ ನೀತಿಯನ್ನು ಖಂಡಿಸಿ ಭೂಮಿ ಮತ್ತು ವಸತಿಗಾಗಿ ಒತ್ತಾಯಿಸಿ ಜಿಲ್ಲಾದ್ಯಂತ ಏಕಕಾಲಕ್ಕೆ ಹಮ್ಮಿಕೊಂಡಿರುವ ದಸಂಸ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹವು ಮೂರನೇ ಕಾಲಿಟ್ಟಿದೆ.

ಬಗರ್‌ಹುಕುಂ ಸಾಗುವಳಿ ಚೀಟಿ, ಭೂಮಿ ಮಂಜೂರಾತಿ, ಭೂರಹಿತರಿಗೆ ಭೂಮಿ ಮತ್ತು ವಸತಿ, ದಲಿತರ ಮೇಲಿನ ದೌರ್ಜನು ತಡೆಗಟ್ಟುವಿಕೆ, ಗೌರಿಬಿದನೂರು ತಾಲೂಕಿನ ಜೋಡಿ ಗ್ರಾಮಗಳ ಗೇಣಿದಾರರ ಭೂ ಸಮಸ್ಯೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ತಾಲೂಕು ಕಚೇರಿ ಮುಂಭಾಗ ದಸಂಸ ವತಿಯಿಂದ ಮೂರು ದಿನಗಳಿಂದ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದ್ದು, ಇದುವರೆಗೆ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಹೋರಾಟಗಾರರು ಅಸಮಾಧಾನ ವ್ಯಕ್ತಪಡಿಸಿದರು.

ಇದೇ ವೇಳೆ ಮಾತನಾಡಿದ ದಸಂಸ ಮುಖಂಡ, ಮಾಜಿ ಜಿಪಂ ಸದಸ್ಯ‌ ಕೆ ಸಿ ರಾಜಾಕಾಂತ್, ಕೇವಲ ಭರವಸೆಯ ಮಾತುಗಳಿಂದ ಯಾವುದೇ ಪ್ರಯೋಜನವಿಲ್ಲ. ನಮ್ಮ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸೂಕ್ತ ಪ್ರಗತಿಯಾಗಬೇಕು. ಆಗ ಮಾತ್ರವೇ ಧರಣಿ ಸತ್ಯಾಗ್ರಹವನ್ನು ಹಿಂಪಡೆಯಲಾಗುವುದು. ಜಿಲ್ಲಾಡಳಿತ ನಮ್ಮ ಬೇಡಿಕೆ ಈಡೇರಿಕೆಗೆ ಸೂಕ್ತ ಕ್ರಮವಹಿಸದ ಹೊರತು ಯಾವುದೇ ಕಾರಣಕ್ಕೂ ಧರಣಿ ಕೈಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

Advertisements

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಅಭಿವೃದ್ಧಿ ಮರೆತು, ಮುಖ್ಯಮಂತ್ರಿ ಚರ್ಚೆಯಲ್ಲಿ ತಲ್ಲೀನವಾದ ಸರಕಾರ; ಸಂಸದ ಡಾ.ಕೆ.ಸುಧಾಕರ್ ವಾಗ್ದಾಳಿ

ಪ್ರತಿಭಟನೆಯಲ್ಲಿ ದಸಂಸ ಜಿಲ್ಲಾ ಶಾಖೆಯ ಜಿಲ್ಲಾ ಸಂಚಾಲಕರಾದ ಸಿ ಬಿ ಗಂಗಪ್ಪ, ತಾಲೂಕು ಸಂಚಾಲಕ ಎನ್‌ ಪರಮೇಶ್‌, ತ್ಯಾಗರಾಜು, ಖಜಾಂಚಿ ಮುನಿನಾರಾಯಣಪ್ಪ, ಚಿನ್ನಪ್ಪ, ಮುನಿಕದಿರಪ್ಪ, ಕಣಿತಹಳ್ಳಿ ಮುನಿಯಪ್ಪ, ರಾಮಕೃಷ್ಣಪ್ಪ, ಮೂರ್ತಿ, ಲಕ್ಷ್ಮಯ್ಯ, ವೈ ನಾರಾಯಣ, ಶ್ರೀನಿವಾಸ್‌, ಕರಗಪ್ಪ, ಚೈತ್ರಾ, ಆಶಾ ಸೇರಿದಂತೆ ಮತ್ತಿತರರು ಹಾಜರಿದ್ದರು.

WhatsApp Image 2024 08 09 at 11.58.31 de404b09
+ posts

ಚಿಕ್ಕಬಳ್ಳಾಪುರ, ಕೋಲಾರ, ಬೆಂ.ಗ್ರಾಮಾಂತರ ಜಿಲ್ಲಾ ಸಂಯೋಜಕರು. ಪತ್ರಕರ್ತ, ಪರಿಸರ ಪ್ರೇಮಿ.

ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗಜ್ಜರಹಳ್ಳಿ ಗ್ರಾಮದವರು. 

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ವಿಜಯ್‌ ಕುಮಾರ್ ಗಜ್ಜರಹಳ್ಳಿ
ವಿಜಯ್‌ ಕುಮಾರ್ ಗಜ್ಜರಹಳ್ಳಿ
ಚಿಕ್ಕಬಳ್ಳಾಪುರ, ಕೋಲಾರ, ಬೆಂ.ಗ್ರಾಮಾಂತರ ಜಿಲ್ಲಾ ಸಂಯೋಜಕರು. ಪತ್ರಕರ್ತ, ಪರಿಸರ ಪ್ರೇಮಿ. ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗಜ್ಜರಹಳ್ಳಿ ಗ್ರಾಮದವರು. 

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X