ಉಡುಪಿ | ಕುಂದಾಪುರದಲ್ಲಿ ಹಿಟ್ ಅಂಡ್ ರನ್, ವಾಕಿಂಗ್ ಮಾಡುತ್ತಿದ್ದ ವ್ಯಕ್ತಿ ಸಾವು

Date:

Advertisements

ಉಡುಪಿ ಜಿಲ್ಲೆಯ ಕುಂದಾಪುರ ಬಸೂರು ಮೂರುಕೈ ಸಮೀಪದ ವಡೇರಹೋಬಳಿ ಎಂಬಲ್ಲಿ ಆಟೋ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದ ಬಗ್ಗೆ ವರದಿಯಾಗಿದೆ.

ಅಪಘಾತದ ಬಳಿಕ ರಿಕ್ಷಾ ಚಾಲಕ ನಿಲ್ಲಿಸದೆ ಪರಾರಿಯಾಗಿದ್ದು ಒಂದಷ್ಟು ಗಂಟೆಗಳ ಬಳಿಕ ಪೊಲೀಸ್‌ ಠಾಣೆಗೆ ಹೋಗಿ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

ಇಲ್ಲಿನ ವಡೇರಹೋಬಳಿ ಬೆಟ್ಟಾಗರ ಮನೆ ನಿವಾಸಿ ಸೋಮಯ್ಯ (61) ಮೃತರು ಎಂದು ಗುರುತಿಸಲಾಗಿದೆ.

Advertisements

ಸೋಮಯ್ಯ ಅವರು ನಿತ್ಯ ಬೆಳಿಗ್ಗೆ ವಾಕಿಂಗ್ ಮಾಡುವ ಹವ್ಯಾಸ ಹೊಂದಿದ್ದರು. ಬುಧವಾರವೂ ವಾಕಿಂಗ್ ತೆರಳಿದ್ದ ವೇಳೆ ರಿಕ್ಷಾ ಅಪಘಾತ ನಡೆಸಿ ಪರಾರಿಯಾಗಿದ್ದು ಗಾಯಗೊಂಡು ಗದ್ದೆಗೆ ಬಿದ್ದ ಸೋಮಯ್ಯ ಮೃತಪಟ್ಟಿದ್ದಾರೆ. ಒಂದಷ್ಟು ಸಮಯದ ನಂತರ ಅದೇ ದಾರಿಯಲ್ಲಿ ಪಾದಚಾರಿಯಾಗಿ ಬರುತ್ತಿದ್ದ ಸೋಮಯ್ಯ ಅವರ ಸಂಬಂಧಿಯೊಬ್ಬರು ಗದ್ದೆಯಲ್ಲಿ ವ್ಯಕ್ತಿ ಬಿದ್ದಿರುವುದನ್ನು ಕಂಡಿದ್ದು ಪರಿಶೀಲಿಸಿದಾಗ ಸೋಮಯ್ಯ ಎಂದು ತಿಳಿದುಬಂದಿದೆ. ಕೂಡಲೇ ಮನೆಗೆ ತೆರಳಿ ಸುದ್ದಿ ಮುಟ್ಟಿಸಿ ಮರಳಿಬಂದು ಕುಟುಂಬಿಕರ ಜೊತೆ ಆಸ್ಪತ್ರೆಗೆ ಕರೆದೊಯ್ದಿದ್ದು ಅಷ್ಟರಲ್ಲಾಗಲೇ ಸೋಮಯ್ಯ ಮೃತಪಟ್ಟಿರುವುದು ತಿಳಿದುಬಂದಿದೆ.

ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 05/2025 ಕಲಂ: 281, 106 BNS 134 (A&B) IMV ACT ರಂತೆ ಪ್ರಕರಣ ದಾಖಲಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ |  ಶೇ 1ರಷ್ಟು ಒಳಮೀಸಲಾತಿ ಕಲ್ಪಿಸಲು ಅಲೆಮಾರಿ ಸಮುದಾಯದ ಮುಖಂಡರು ಆಗ್ರಹ

"ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ರಾಜ್ಯ ಸರಕಾರ ಈಗ ಹಂಚಿಕೆ ಮಾಡಿರುವ ಒಳ...

ತರೀಕೆರೆ l ಸರ್ಕಾರಿ ಜಾಗದಲ್ಲಿ ಅಕ್ರಮ ಮಳಿಗೆ ನಿರ್ಮಾಣ ಆರೋಪ; ದಸಂಸ ಪ್ರತಿಭಟನೆ

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಅಕ್ರಮವಾಗಿ ಮಳಿಗೆ...

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ....

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

Download Eedina App Android / iOS

X