ಕೊಪ್ಪಳ | ಖಾಲಿ ಚೆಕ್ ಕೊಟ್ಟು ರೈತರಿಗೆ ವಂಚನೆ; ಸಿಕ್ಕಿಬಿದ್ದ ದಲ್ಲಾಳಿ

Date:

Advertisements

ಖಾಲಿ ಚೆಕ್‌ ನೀಡಿ ಭತ್ತ ಖರೀದಿಸಿ ಬಳಿಕ ರೈತರಿಗೆ ಹಣ ಕೊಡದೆ ವಂಚಿಸುತ್ತಿದ್ದ ದಲ್ಲಾಳಿಯೊಬ್ಬ ಕೊನೆಗೂ ಸಿಕ್ಕಿಬಿದ್ದು ರೈತರೇ ಗ್ರಾಮದಲ್ಲಿ ಕೂಡಿಹಾಕಿರುವ ಘಟನೆ ಗಂಗಾವತಿ ತಾಲ್ಲೂಕಿನ ಭಟ್ಟನರಸಾಪುರ ಗ್ರಾಮದಲ್ಲಿ ನಡೆದಿದೆ.

ದಲ್ಲಾಳಿ ಶರಣಬಸವ, ಎರಡು ವರ್ಷಗಳಿಂದ ರೈತರಿಗೆ ಸುಮಾರು 20 ಲಕ್ಷ ರೂ ಹಣ ಕೊಡದೇ ಖಾಲಿ ಚೆಕ್ ಕೊಟ್ಟು ರೈತರನ್ನು ಯಾಮಾರಿಸುತ್ತಿದ್ದ. ಚೆಕ್ ಬೌನ್ಸ್ ಆದ್ರೂ ಕ್ಯಾರೆ ಎನ್ನದೆ ತಿರುಗಾಡುತ್ತಿದ್ದ. ಈ ಬಗ್ಗೆ ಕನಕಗಿರಿ ಪೊಲೀಸರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ದಲ್ಲಾಳಿ ಜೊತೆ ಪೊಲೀಸರು, ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ಹೊರಗುತ್ತಿಗೆ ನೌಕರರ ಬೇಡಿಕೆ ಈಡೇರಿಕೆಗೆ ಒತ್ತಾಯ; ಅಹೋರಾತ್ರಿ ಧರಣಿ

Advertisements

ಇತ್ತ ತಮಗೆ ಬರಬೇಕಾದ ಹಣ ಬರುವವರೆಗೂ ದಲ್ಲಾಳಿಯನ್ನು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿರುವ ರೈತರು, ಶರಣಬಸವನನ್ನು ಎರಡು ದಿನಗಳಿಂದ ಗ್ರಾಮದಲ್ಲಿಯೇ ಕೂಡಿಹಾಕಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

Download Eedina App Android / iOS

X