ಬಾಲಿವುಡ್ ನಟ ಸೈಫ್ ಅಲಿ ಖಾನ್ ಕಸ ಅದನ್ನು ಎಸೆಯಬೇಕು ಎಂದು ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬಾಂಗ್ಲಾದೇಶಿಗರು ಮುಂಬೈನಲ್ಲಿ ಏನು ಮಾಡುತ್ತಿದ್ದಾರೆ ನೋಡಿ. ಅವರು ಸಲ್ಮಾನ್ ಖಾನ್ ಮನೆಗೆ ನುಗ್ಗಿದ್ದಾರೆ. ಬಹುಶಃ ಸಲ್ಮಾನ್ ಖಾನ್ ಅವರನ್ನು ಕರೆದುಕೊಂಡು ಹೋಗಲು ದಾಳಿಕೋರ ಬಂದಿರಬೇಕು. ಇದು ಒಳ್ಳೆಯದು, ಕಸವನ್ನು ತೆಗೆದುಕೊಂಡು ಹೋಗಬೇಕು ಎಂದು ಹೇಳಿದ್ದಾರೆ.
ಸಚಿವ ನಿತೇಶ್ ರಾಣೆ ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚೂರಿ ಇರಿತ ಪ್ರಕರಣದ ಬಗ್ಗೆ ಪ್ರಶ್ನೆಯನ್ನು ಎತ್ತಿದ್ದಾರೆ. ಸೈಫ್ ಅಲಿ ಖಾನ್ ಗೆ ಚೂರಿ ಇರಿತವಾಗಿದೆಯಾ ಅಥವಾ ಅವರು ನಿಜವಾಗಿಯೂ ನಟನೆ ಮಾಡುತ್ತಿದ್ದಾರಾ ಎಂದು ಪ್ರಶ್ನಿಸಿದ್ದಾರೆ.
ಬಾಂಗ್ಲಾದೇಶಿಗಳು ಮುಂಬೈನಲ್ಲಿ ಏನು ಮಾಡುತ್ತಿದ್ದಾರೆ ನೋಡಿ. ಅವರು ಸೈಫ್ ಅಲಿ ಖಾನ್ ಮನೆಗೆ ಪ್ರವೇಶಿಸಿದರು. ಅವರು ಮೊದಲು ರಸ್ತೆಗಳ ಕ್ರಾಸಿಂಗ್ ಗಳಲ್ಲಿ ನಿಲ್ಲುತ್ತಿದ್ದರು, ಈಗ ಅವರು ಮನೆಗಳಿಗೆ ಪ್ರವೇಶಿಸಲು ಪ್ರಾರಂಭಿಸಿದ್ದಾರೆ, ಬಹುಶಃ ಅವನು ಅವನನ್ನು(ಸೈಫ್) ಕರೆದುಕೊಂಡು ಹೋಗಲು ಬಂದಿರಬಹುದು. ಒಳ್ಳೆಯದು, ಕಸವನ್ನು ತೆಗೆದುಕೊಂಡು ಹೋಗಬೇಕು ಎಂದು ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಲ್ಕತ್ತಾದ ಭೀಭತ್ಸ ರೇಪ್-ಹತ್ಯೆ ತನಿಖೆಯಲ್ಲಿ ವಿಫಲವಾಯಿತೇ ಸಿಬಿಐ?
ಸೈಫ್ ಅಲಿ ಖಾನ್ ಆಸ್ಪತ್ರೆಯಿಂದ ಹೊರಗೆ ಬರುವುದನ್ನು ನಾನು ನೋಡಿದೆ. ಈ ವೇಳೆ ಅವರಿಗೆ ನಿಜವಾಗಿಯೂ ಚೂರಿಯಿಂದ ಇರಿಯಲಾಗಿದೆಯಾ ಅಥವಾ ನಟಿಸುತ್ತಿದ್ದಾನೋ ಎಂಬ ಅನುಮಾನ ಬಂದಿದೆ. ಅವರು ವಾಕಿಂಗ್ ಮಾಡುವಾಗ ಡ್ಯಾನ್ಸ್ ಮಾಡುತ್ತಿದ್ದರು ಎಂದು ನಿತೇಶ್ ರಾಣೆ ಹೇಳಿದ್ದಾರೆ.
ಕಳೆದ ವಾರ ಸೈಫ್ ಅಲಿ ಖಾನ್ ಅವರ ಬಾಂದ್ರಾ ನಿವಾಸದಲ್ಲಿ ಅವರ ಮೇಲೆ ಚೂರಿಯಿಂದ ಇರಿಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಾಂಗ್ಲಾದೇಶದ ಪ್ರಜೆ ಎಂದು ಹೇಳಲಾಗಿದೆ.
