- ಮೃತದೇಹದ ಕುತ್ತಿಗೆಗೆ ಬಟ್ಟೆ ಕಟ್ಟಿ ಫ್ಯಾನ್‌ಗೆ ನೇತು ಹಾಕಿ ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನ
- ಪದೇಪದೆ ಜಗಳವಾಗುತ್ತಿರುವ ಕಾರಣ ಬೇರೆಯಾಗಬೇಕು ಎಂದು ನಿರ್ಧರಿಸಿದ್ದ ಇಬ್ಬರೂ ಪ್ರೇಮಿಗಳು
ಬೆಂಗಳೂರಿನ ಜೀವನ್ ಭೀಮಾನಗರದ ಕೋಡಿಹಳ್ಳಿಯಲ್ಲಿ ಪ್ರಿಯಕರನೇ ತನ್ನ ಪ್ರಿಯತಮೆಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.
ಜೂನ್ 5ರಂದು ಈ ಘಟನೆ ನಡೆದಿದೆ. ಆಕಾಂಕ್ಷಾ ಮೃತ ದುರ್ದೈವಿ. ಅರ್ಪಿತ್ ಕೊಲೆ ಆರೋಪಿ. ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಕಾಂಕ್ಷಾ ಮೂಲತಃ ಹೈದರಾಬಾದದವರು. ಅರ್ಪಿತ ದೆಹಲಿ ಮೂಲದವರು. ಈ ಇಬ್ಬರು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ, ಇಬ್ಬರ ನಡುವೆ ಪ್ರೀತಿ ಹುಟ್ಟಿದೆ. ಬಳಿಕ ಇಬ್ಬರೂ ಕೂಡ ಒಂದೇ ಮನೆಯಲ್ಲಿ ವಾಸ ಮಾಡಲು ಆರಂಭಿಸಿದ್ದಾರೆ.
ಇತ್ತಿಚೆಗೆ ಕೆಲಸ ಬದಲಾವಣೆ ಮಾಡಿ ಬೇರೆ ಕಡೆ ಕೆಲಸ ಮಾಡುತ್ತಿದ್ದರು. ಇಬ್ಬರ ನಡುವೆ ಕಳೆದ ಕೆಲ ದಿನಗಳಿಂದ ಜಗಳವಾಗುತ್ತಿತ್ತು. ಪದೇಪದೆ ಜಗಳವಾಗುತ್ತಿರುವ ಕಾರಣ ಇಬ್ಬರೂ ಬೇರೆಯಾಗಬೇಕು ಎಂದು ನಿರ್ಧರಿಸಿದ್ದರು. ಕಳೆದ ದಿನ ಕೂಡ ಇಬ್ಬರ ನಡುವೆ ಜಗಳವಾಗಿತ್ತು.
ಈ ವೇಳೆ ಗಲಾಟೆ ತಾರಕ್ಕಕ್ಕೇರಿದು ಅರ್ಪಿತ ಆಕಾಂಕ್ಷಾಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಬಳಿಕ ಇದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಮೃತದೇಹದ ಕುತ್ತಿಗೆಗೆ ಬಟ್ಟೆ ಕಟ್ಟಿ ಫ್ಯಾನ್‌ಗೆ ನೇತು ಹಾಕಲು ಪ್ರಯತ್ನಿಸಿದ್ದಾನೆ. ಇದು ಸಾಧ್ಯವಾಗದ ಕಾರಣ ಹಾಗೆಯೇ ಮೃತದೇಹವನ್ನು ನೆಲದ ಮೇಲೆ ಬಿಟ್ಟು ಪರಾರಿಯಾಗಿದ್ದಾನೆ.
ಈ ಸುದ್ದಿ ಓದಿದ್ದೀರಾ? ‘ಗೃಹಜ್ಯೋತಿ’ ಗ್ಯಾರಂಟಿ ಪಡೆಯಲು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ
ಈ ಘಟನೆ ನಡೆದ ದಿನ ರಾತ್ರಿ ರೂಮೆಟ್ ಕೆಲಸ ಮುಗಿಸಿ ಬಂದು ನೋಡಿದಾಗ ಆಕಾಂಕ್ಷಾ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೊದಲು ಅನುಮಾನಾಸ್ಪದ ಸಾವು ಎಂದು ಅಂದುಕೊಂಡಿದ್ದರು. ಆದರೆ ಸ್ಥಳ ಪರಿಶೀಲನೆ ಬಳಿಕ ಕೊಲೆ ಎಂಬುದು ತಿಳಿದುಬಂದಿದೆ. ಇನ್ನು ಆರೋಪಿ ಅರ್ಪಿತ್‌ಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.