ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಸೆಲೂನ್‍ವೊಂದಕ್ಕೆ ನುಗ್ಗಿ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಸೇನೆಯ ಅಧ್ಯಕ್ಷ ಪ್ರಸಾದ್ ಅತ್ತಾವರನನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಗರದ ಬಿಜೈಯ ಮಸಾಜ್ ಸೆಂಟರ್‌ಗೆ ನುಗ್ಗಿ ದಾಂಧಲೆ ನಡೆಸಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿತ್ತು. ಈ ಪ್ರಕರಣದ ಆರೋಪಿ ರಾಮಸೇನಾ ಸ್ಥಾಪಕ ಪ್ರಸಾದ್ ಅತ್ತಾವರ ಮಾಧ್ಯಮಗಳ ಜೊತೆಗೆ ಮಾತನಾಡುತ್ತಿರುವಾಗಲೇ ಬಂಧಿಸಿ, ಕರೆದೊಯ್ದಿದ್ದಾರೆ.

ಪ್ರಸಾದ್ ಅತ್ತಾವರ ನೇತೃತ್ವದ ರಾಮಸೇನೆಯ ಹೆಸರಿನ ಸಂಘಟನೆಯ ಹತ್ತು ಜನ ಕಾರ್ಯಕರ್ತರು ಬಿಜೈ ಕೆಎಸ್‍ಆರ್‌ಟಿಸಿ ಬಳಿಯ ಕಲರ್ಸ್ ಯೂನಿಸೆಕ್ಸ್ ಸೆಲೂನ್ ಮೇಲೆ ದಾಳಿ ನಡೆಸಿದ್ದರು. ಸೆಲೂನ್‍ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿ, ಈ ದಾಳಿ ನಡೆಸಲಾಗಿತ್ತು.
ಇದನ್ನು ಓದಿದ್ದೀರಾ? ಮಂಗಳೂರು | ಇಡಿ ಅಧಿಕಾರಿ ಸೋಗಿನಲ್ಲಿ ದರೋಡೆ; ಆರೋಪಿಯ ಬಂಧನ
ಈ ದಾಳಿಯ ವೇಳೆ, ನಾಲ್ಕು ಜನ ಯುವತಿಯರು ಹಾಗೂ ಓರ್ವ ವ್ಯಕ್ತಿ ಸೆಲೂನ್‍ನಲ್ಲಿ ಇದ್ದರು. ಈ ವೇಳೆ ವ್ಯಕ್ತಿಯ ಮೇಲೆ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಅಲ್ಲದೇ ಪೀಠೋಪಕರಣ ಧ್ವಂಸ ಮಾಡಿದ್ದಾರೆ. ನಗರದಾದ್ಯಂತ ಇರುವ ಮಸಾಜ್ ಸೆಂಟರ್‌ಗಳನ್ನು ಮುಚ್ಚುವಂತೆ ಆಗ್ರಹಿಸಿದ್ದರು. ಘಟನೆಯ ಮಾಹಿತಿ ಪಡೆದ ಬಳಿಕ ಸ್ಥಳಕ್ಕೆ ಬರ್ಕೆ ಪೊಲೀಸರು ಭೇಟಿ ನೀಡಿ, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದರು.
