ಬೀದರ್ ನಗರದಲ್ಲಿ ಜನವರಿ 16 ರಂದು ಹಾಡು ಹಗಲೇ ಗುಂಡಿನ ದಾಳಿ ನಡೆಸಿ ಎಟಿಎಂ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿವಕುಮಾರ್ ಅವರನ್ನು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಮ್ ಖಾನ್ ಅವರು ಗುರುವಾರ ಬೆಳಿಗ್ಗೆ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಬೆಂಗಳೂರಿನಿಂದ ಹೈದರಾಬಾದ್‌ಗೆ ಆಗಮಿಸಿದ ಸಚಿವರು ಶಿವಕುಮಾರ ಅವರ ಕುಟುಂಬದ ಸದಸ್ಯರನ್ನು ಮತ್ತು ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಕುಮಾರ್ ಅವರನ್ನು ಭೇಟಿ ಮಾಡಿ ಧೈರ್ಯ ತುಂಬಿ, ಆರ್ಥಿಕ ಸಹಾಯ ಮಾಡಿದರು.
ಶಿವಕುಮಾರ್ ಈಗ ಅಪಾಯದಿಂದ ಪಾರಾಗಿದ್ದು, ಚಿಕಿತ್ಸಾ ವೆಚ್ಚದ ಬಗ್ಗೆ ಚಿಂತಿಸಬೇಡಿ ಎಂದು ಕುಟುಂಬಸ್ಥರಿಗೆ ಭರವಸೆ ನೀಡಿ, ಶಿವಕುಮಾರ್ ಅವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ವಿನಂತಿಸಿದರು.
ಗಾಯಾಳು ಶಿವಕುಮಾರ್ ಶೀಘ್ರ ಗುಣಮುಖರಾಗುವ ಭರವಸೆಯನ್ನು ವೈದ್ಯರು ನೀಡಿದ್ದಾರೆ. ದುರಂತಕ್ಕೆ ಕಾರಣರಾದ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕುಟುಂಬ ಸದಸ್ಯರಿಗೆ ಭರವಸೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ತೊಗರಿ ಬೆಲೆ ಕುಸಿತದಿಂದ ರೈತರು ಕಂಗಾಲು : ಸ್ಪಂದಿಸುವುದೇ ಸರ್ಕಾರ?
ಗಾಯಗೊಂಡವರು ಮತ್ತು ಮೃತರ ಕುಟುಂಬಗಳಿಗೆ ಸಕಾಲದಲ್ಲಿ ನೆರವು ನೀಡಲು ಸರ್ಕಾರ ಬದ್ಧವಾಗಿದೆʼ ಎಂದು ಸಚಿವರು ಭರವಸೆ ನೀಡಿದ್ದಾರೆ.