ವಿಜಯಪುರ | ಕೂಲಿ ಕಾರ್ಮಿಕರ ಮೇಲೆ ಹಲ್ಲೆ; ಕಾಂಗ್ರೆಸ್ ಎಸ್‌ಸಿ ಘಟಕ ಖಂಡನೆ

Date:

Advertisements

ವಿಜಯಪುರ ಹೊರವಲಯದ ಇಟ್ಟಂಗಿ ಭಟ್ಟಿಯಲ್ಲಿ ಮಾರಣಾಂತಿಕ ಹಲ್ಲೆಗೊಳಗಾದ ಕೂಲಿ ಕಾರ್ಮಿಕರನ್ನು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ(ಎಸ್‌ಸಿ) ಘಟಕದವರು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ರಮೇಶ ಗುಬ್ಬೇವಾಡ ಮಾತನಾಡಿ, “ಅಮಾಯಕ ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿರುವ ಇಟ್ಟಂಗಿ ಭಟ್ಟಿ ಮಾಲೀಕನನ್ನು ಗಡಿಪಾರು ಮಾಡಬೇಕು. ಅವನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಈ ರೀತಿಯ ಘಟನೆಗಳು ಮರುಕಳಿಸದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಕಾರ್ಮಿಕರಿಗೆ ಸೂಕ್ತ ರಕ್ಷಣೆ‌ ಒದಗಿಸಬೇಕು” ಎಂದು ಆಗ್ರಹಿಸಿದರು.

ವಿಜಯಪುರ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸುಭಾಷ ಕಾಲೇಬಾಗ ಮಾತನಾಡಿ, “ಹಲ್ಲೆಗೊಳಗಾದ ದಲಿತ ಕಾರ್ಮಿಕರಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿರುವ ಕಾರ್ಮಿಕರಿಗೆ ಸರ್ಕಾರ ಸೂಕ್ತ ಪರಿಹಾರ ಹಾಗೂ ‌ಸರ್ಕಾರ ಕಾರ್ಮಿಕರ ಕುಟಂಬಕ್ಕೆ ಜಮೀನು ಮಂಜೂರು ಮಾಡಬೇಕು. ಅವರಿಗೆ ಸೂಕ್ತ ರಕ್ಷಣೆಯನ್ನು ನೀಡಬೇಕು” ಎಂದು ಆಗ್ರಹಿಸಿದರು.

Advertisements

ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಮಾಧ್ಯಮ ವಕ್ತಾರ ಸಂಜೀವ ಚವ್ಹಾಣ ಮಾತನಾಡಿ, “ಹಲ್ಲೆ ನಡೆಸಿದವರು ಯಾವುದೇ ಧರ್ಮ, ಜಾತಿಗೆ ಸೇರಿದರೂ ಕೂಡ ಅವರು ಮಾಡಿರುವ ಕೃತ್ಯ ಖಂಡನೀಯ. ಮನುಷ್ಯತ್ವವಿರುವ ಯಾರೇ ಆಗಲಿ ಇಂತಹ ಕೃತ್ಯಗಳನ್ನು ಸಹಿಸಿಕೊಳ್ಳುವುದಿಲ್ಲ. ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು. ನೊಂದ ಕಾರ್ಮಿಕರಿಗೆ ಸೂಕ್ತ ನ್ಯಾಯ ಒದಗಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚಳ್ಳಕೆರೆ | ರಸ್ತೆ ಕಾಮಗಾರಿ ಸ್ಥಗಿತ; ಉಪಲೋಕಾಯುಕ್ತ ನ್ಯಾ. ಫಣೀಂದ್ರರಿಗೆ ದೂರು ನೀಡಲು ಸ್ಥಳೀಯರ ನಿರ್ಧಾರ

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯೆ ಆರತಿ ಶಹಾಪೂರ, ರಾಘವೇಂದ್ರ ವಡವಡಗಿ, ಮಲ್ಲಿಕಾರ್ಜುನ ಮಡ್ಡಿಮನಿ, ಲಕ್ಷ್ಮಣ ಚಲವಾದಿ, ವಿಠ್ಠಲ ಸಂದಿಮನಿ, ಪರಶುರಾಮ ಪಾರಣ್ಣವರ, ಯಲ್ಲಪ್ಪ ಬಂಡೆನ್ನವರ, ಸತೀಶ ದೊಡ್ಡಮನಿ, ಕೃಷ್ಣಾ ರತ್ನಾಕರ, ಸವಿತಾ ಧನರಾಜ, ನಾಗೇಂದ್ರಪ್ಪ ಮೇತ್ರಿ ಸೇರಿದಂತೆ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X