ಬೆಳಗಾವಿ ಜಿಲ್ಲೆಯಲ್ಲಿ ಖಾಸಗಿ ಹಣಕಾಸು ಸಂಸ್ಥೆಗಳ ಉಪಟಳ ತಪ್ಪಿಸಬೇಕು, ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಮಹಿಳೆಯರು ಮತ್ತು ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿದ ಬೆಳಗಾವಿ ತಾಲ್ಲೂಕಿನ ಯಮನಾಪುರ ಗ್ರಾಮದ ನಿವಾಸಿಗಳು, ಖಾಸಗಿ ಫೈನಾನ್ಸ್‌ಗಳ ಕಿರುಕುಳ ತಪ್ಪಿಸಿ, ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ಒದಗಿಸುವಂತೆ ಒತ್ತಾಯಿಸಿದರು.
ಮಹರ್ಷಿ ವಾಲ್ಮೀಕಿ ಮಹಿಳಾ ಸ್ವ- ಸಹಾಯ ಸಂಘದ ಮೂಲಕ ಸಬ್ಸಿಡಿ ಕೊಡಿಸುವುದಾಗಿ ನಂಬಿಸಿ, ಖಾಸಗಿ ಫೈನಾನ್ಸ್‌ಗಳಿಂದ ಸಾಲ ನೀಡಿದ್ದರು. ಈಗ ಯಾವುದೇ ಸಬ್ಸಿಡಿ ನೀಡದೆ ವಂಚಿಸಿದ್ದಾರೆ. ಖಾಸಗಿ ಫೈನಾನ್ಸ್‌ನವರು ಪ್ರತಿ ದಿನ ಮನೆಗೆ ಬಂದು, ಹಣ ಮರುಪಾವತಿಸುವಂತೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಕೂಲಿ ಮಾಡಿಕೊಂಡು ಉಪಜೀವನ ಸಾಗಿಸುತ್ತಿದ್ದೇವೆ. ಆರ್ಥಿಕ ಸಹಾಯ ಮಾಡುವ ಆಸೆ ತೋರಿಸಿ ಸ್ವ ಸಹಾಯ ಸಂಘ ಹಾಗೂ ಫೈನಾನ್ಸ್‌ಗಳು ಮೋಸ ಮಾಡುತ್ತಿವೆ. ಸಾವಿರಾರು ಮಹಿಳೆಯರು ಮೋಸ ಹೋಗಿದ್ದಾರೆ, ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇವೆ. ಆದರೂ ಫೈನಾನ್ಸ್ ಸಿಬ್ಬಂದಿ ನಿತ್ಯ ಮನೆಗೆ ಬಂದು ಕಿರುಕುಳ ನೀಡುತ್ತಿದ್ದಾರೆ. ಜಿಲ್ಲಾಡಳಿ ಮಧ್ಯಪ್ರವೇಶಿಸಿ ಪ್ರಕರಣ ಇತರ್ಥ ಆಗುವರೆಗೂ ಖಾಸಗಿ ಫೈನಾನ್ಸ್‌ಗಳು ಹಣ ಮರುಪಾವತಿಸಿಕೊಳ್ಳದಂತೆ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದರು.
ಈಸಂದರ್ಭದಲ್ಲಿ ಶಾಂತು ಬಾಗರಾಯಿ, ಶಾನೂ ಟೋಕಲಿ, ಹುಲೆಪ್ಪ ಬಂಬರಗಿ, ದಿವಾಕರ ಮಾಸೆನಟ್ಟಿ ಮತ್ತು ವಿವಿದ ಪ್ರಗತಿಪರ ಸಂಘಟನೆಗಳು ಹಾಗೂ ಮಹಿಳೆಯರು ಉಪಸ್ಥಿತರಿದ್ದರು.