ಬೀದರ್ನಲ್ಲಿ ಬಿರುಗಾಳಿ ಬೀಸಿದರೆ, ಕಲಬುರಗಿಯಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಜೂನ್ 6, 7 ರಂದು ಬಹುತೇಕ ದಕ್ಷಿಣ ಹಾಗೂ ಉತ್ತರ ಒಳನಾಡು ಸೇರಿದಂತೆ ಕರಾವಳಿಯಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಮಳೆಯ ಜತೆಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆಯನ್ನು ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಾಗಿರುವ ಹಾವೇರಿ, ಧಾರವಾಡ ಮತ್ತು ಬೆಳಗಾವಿಯ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ವಿಜಯನಗರ, ಬಳ್ಳಾರಿ, ಗದಗ, ಕೊಪ್ಪಳ ಮತ್ತು ಬಾಗಲಕೋಟೆಯಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು, ತುಮಕೂರು ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಸುದ್ದಿ ಓದಿದ್ದೀರಾ? ಕೊಡಗು | ಅರಣ್ಯ ಸಂಪತ್ತು ಸಂರಕ್ಷಣೆಯಿಂದ ಪರಿಸರ ಸಮತೋಲನ ಸಾಧ್ಯ: ಬಿಎನ್ಎನ್ ಮೂರ್ತಿ
ಕರಾವಳಿ ಜಿಲ್ಲೆಗಳಾದಂತಹ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಜಿಲ್ಲೆಗಳಾಗಿರುವ ಚಿಕ್ಕಮಗಳೂರಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.