ಹುಟ್ಟಿನಿಂದ ಸಿಗುವ ಪೌರತ್ವ ರದ್ದು: ಅಮೆರಿಕದಲ್ಲಿ ಹೆಚ್ಚಾದ ಸಿಸೇರಿಯನ್‌ ಹೆರಿಗೆ ಬೇಡಿಕೆ

Date:

Advertisements

ಅಮೆರಿಕದಲ್ಲಿರುವ ವಲಸಿಗರಲ್ಲಿ ಹುಟ್ಟಿನಿಂದ ಸಿಗುವ ಪೌರತ್ವ ಹಕ್ಕು ರದ್ದುಗೊಳ್ಳುವ ಭೀತಿ ಶುರುವಾಗಿದೆ. ಕಾಯ್ದೆ ಜಾರಿಗೆ ಬರುವ ಮುನ್ನವೇ ಹೆರಿಗೆ ಮಾಡಿಸಿಕೊಳ್ಳಲು ಗರ್ಭಿಣಿಯರು ಆಸ್ಪತ್ರೆಗಳತ್ತ ಧಾವಿಸುತ್ತಿದ್ದಾರೆ. ಇವರಲ್ಲಿ ಬಹುತೇಕರು ಭಾರತೀಯರು ಇದ್ದಾರೆಂದು ವರದಿ ತಿಳಿಸಿದೆ.

ಫೆ.20 ರೊಳಗೆ ಸಿಸೇರಿಯನ್‌ ಮೂಲಕ ಹೆರಿಗೆಗಾಗಿ ಅಮೆರಿಕದ ಹೆರಿಗೆ ಆಸ್ಪತ್ರೆಗಳಿಗೆ ಗರ್ಭಿಣಿಯರು ಆಗಮಿಸುತ್ತಿದ್ದಾರೆ. ಸುಮಾರು 20 ಭಾರತೀಯ ದಂಪತಿಗಳು ಸಿಸೇರಿಯನ್‌ಗೆ ಫೋನ್‌ ಕರೆ ಮಾಡಿದ್ದಾರೆಂದು ಭಾರತೀಯ ಮೂಲದ ವೈದ್ಯರೊಬ್ಬರು ತಿಳಿಸಿದ್ದಾರೆ.

ಎಂಟು ಅಥವಾ ಒಂಬತ್ತನೇ ತಿಂಗಳ ಗರ್ಭಿಣಿಯರು ವೈದ್ಯರಲ್ಲಿ ಸಿಸೇರಿಯನ್‌ಗಾಗಿ ಮನವಿ ಮಾಡಿಕೊಳ್ಳುತ್ತಿದ್ದಾರೆ. ಎರಡನೇ ಅಥವಾ ಮೂರನೇ ತ್ರೈಮಾಸಿಕ ಅವಧಿಯಲ್ಲಿರುವವರು ಕೂಡ ಇದೇ ಮಾರ್ಗವನ್ನು ಅನುಸರಿಸುವ ಸಾಧ್ಯತೆಯನ್ನು ಪರಿಶೀಲಿಸುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

Advertisements

ಆದರೆ ತಾಯಿ ಹಾಗೂ ಮಗುವಿಗೆ ಎದುರಾಗಬಹುದಾದ ವಿವಿಧ ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಈ ಪ್ರವೃತ್ತಿಯನ್ನು ವೈದ್ಯರು ಪ್ರೋತ್ಸಾಹಿಸುತ್ತಿಲ್ಲ ಎಂದು ಹೇಳಲಾಗಿದೆ. ಅವಧಿಪೂರ್ವ ಪ್ರಸವ ಎಂದರೆ 37 ವಾರಕ್ಕಿಂತ ಮೊದಲು ಆಗುವ ಹೆರಿಗೆ ಎಂದು ವಿಶ್ಲೇಷಿಸಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಇಂತಹ ಅವಧಿಪೂರ್ವ ಹೆರಿಗೆಯಿಂದಾಗುವ ಆರೋಗ್ಯ ಸಂಕೀರ್ಣತೆಗಳು ಐದು ವರ್ಷಕ್ಕಿಂತ ಕೆಳ ವಯಸ್ಸಿನ ಮಕ್ಕಳ ಸಾವಿಗೆ ಪ್ರಮುಖ ಕಾರಣವಾಗುತ್ತದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೈಕ್ರೋ ಫೈನಾನ್ಸ್‌ಗೆ ಬಲಿಯಾಗುತ್ತಿರುವ ಬಡವರು; ಸತ್ತಂತಿರುವ ಸರ್ಕಾರ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಾರ್ಯನಿರ್ವಾಹಕ ಆದೇಶದ ಅಡಿಯಲ್ಲಿ ವಲಸಿಗರ ಮಕ್ಕಳಿಗೆ ಜನ್ಮದತ್ತ ಪೌರತ್ವ ಫೆ.20 ರಂದು ರದ್ದುಗೊಳ್ಳಲಿದೆ. ಆ ನಂತರದಲ್ಲಿ ಹೊಸ ಕಾಯ್ದೆ ಜಾರಿಗೆ ಬರುವ ಸಾಧ್ಯತೆಯಿದೆ.

ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ತಕ್ಷಣ ಟ್ರಂಪ್ ಸಹಿ ಮಾಡಿದ ಕಾರ್ಯಕಾರಿ ಆದೇಶಗಳಲ್ಲಿ ಒಂದು ಅಮೆರಿಕದಲ್ಲಿ ಜನ್ಮದತ್ತ ಪೌರತ್ವ ಕೊನೆಗೊಳಿಸುವುದು. ಆದ್ದರಿಂದ, ಫೆ.19 ರವರೆಗೆ ಅಮೆರಿಕದ ನಾಗರಿಕರಲ್ಲದ ದಂಪತಿಗೆ ಜನಿಸಿದ ಮಕ್ಕಳು ಅಮೆರಿಕದ ಪ್ರಜೆಗಳಾಗುತ್ತಾರೆ. ನಂತರದ ದಿನಗಳಲ್ಲಿ ಜನಿಸುವ ಮಕ್ಕಳು ಅಮೆರಿಕದ ಪ್ರಜೆಯಾಗುವುದಿಲ್ಲ.

ಅಮೆರಿಕದಲ್ಲಿ ತಾತ್ಕಾಲಿಕ H-1B ಮತ್ತು L1 ವೀಸಾಗಳ ಮೇಲೆ ಕೆಲಸ ಮಾಡುತ್ತಿರುವ ಅನೇಕ ಭಾರತೀಯರಿದ್ದಾರೆ. ಅವರು ಅಮೆರಿಕದಲ್ಲಿ ಶಾಶ್ವತ ನಿವಾಸವನ್ನು ನೀಡುವ ಗ್ರೀನ್ ಕಾರ್ಡ್‌ಗಳಿಗೂ ಕಾಯುತ್ತಿದ್ದಾರೆ. ಅಮೆರಿಕದ ನಾಗರಿಕರು ಅಥವಾ ಗ್ರೀನ್ ಕಾರ್ಡ್ ಹೊಂದದ ದಂಪತಿಗೆ ಜನಿಸಿದ ಮಕ್ಕಳು ಹುಟ್ಟಿನಿಂದಲೇ ಅಮೆರಿಕದ ನಾಗರಿಕರಾಗುವುದಿಲ್ಲ ಎಂಬುದು ಹೊಸ ಕಾಯ್ದೆಯಲ್ಲಿ ತಿಳಿಸಲಾಗಿದೆ.

ಯಾರಾದರೂ ಅಮೆರಿಕದಲ್ಲಿ ಜನಿಸಿದರೆ ಅವರು ಅಮೆರಿಕದ ಪ್ರಜೆ. ಇಲ್ಲಿ ಪೋಷಕರ ವಲಸೆ ಸ್ಥಿತಿಗತಿಯನ್ನು ಪರಿಗಣಿಸಲಾಗುವುದಿಲ್ಲ. ಉದಾಹರಣೆಗೆ, ಪ್ರವಾಸಿ ವೀಸಾ ಅಥವಾ ಇನ್ಯಾವುದೇ ರೀತಿಯ ವೀಸಾ ಇರುವ ಭಾರತೀಯ ದಂಪತಿ ಅಮೆರಿಕದಲ್ಲಿ ಮಗುವಿಗೆ ಜನ್ಮ ನೀಡಿದರೆ, ಆ ಮಗು ಅಧಿಕೃತವಾಗಿ ಅಮೆರಿಕದ ಪ್ರಜೆಯಾಗುತ್ತದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ಹಿಂಸಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಜಾಮೀನು

ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೇ 9, 2023ರ ಹಿಂಸಾಚಾರ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

Download Eedina App Android / iOS

X