ದೇಶದಲ್ಲಿ ಬಿಜೆಪಿ ಜತೆ ಕೈಜೋಡಿಸದೇ ಇರುವ ಪಕ್ಷ ಇದೆಯಾ?: ಎಚ್‌ ಡಿ ದೇವೇಗೌಡ

Date:

Advertisements
  • ‘ಬಹುತೇಕ ವಿರೋಧ ಪಕ್ಷಗಳು ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡಿವೆ’
  • ‘ನನಗೆ ಈಗ 91 ವರ್ಷ, ಲೋಕಸಭೆ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ’

“ದೇಶದಲ್ಲಿ ಬಿಜೆಪಿ ಜತೆ ಕೈಜೋಡಿಸದೇ ಇರುವ ಯಾವುದಾದರೂ ಒಂದು ಪಕ್ಷ ಇದ್ದರೆ ತಿಳಿಸಿ. ನಂತರ ವಿರೋಧ ಪಕ್ಷಗಳ ಒಗ್ಗಟ್ಟಿನ ಬಗ್ಗೆ ಮಾತನಾಡೋಣ…” ಹೀಗೆ ಹೇಳಿದವರು ಮತ್ತಾರು ಅಲ್ಲ, ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಮತ್ತು ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ.

ಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ಒಪ್ಪಂದ ಮಾಡಿಕೊಳ್ಳಲಿದೆ ಎನ್ನುವ ಆರೋಪಗಳಿಗೆ ದೇವೇಗೌಡರು ಆಡಿದ ಮಾತು ಈಗ ಮತ್ತಷ್ಟು ಪುಷ್ಟಿ ನೀಡಿದೆ.

ಪಕ್ಷದ ಪ್ರಧಾನ ಕಚೇರಿ ಜೆ.ಪಿ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಿಜೆಪಿ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ನಡೆಸುತ್ತಿರುವ ಪ್ರಯತ್ನಕ್ಕೆ ಜೆಡಿಎಸ್‌ ಕೈ ಜೋಡಿಸಲಿದೆಯೇ” ಎಂದು ಪತ್ರಕರ್ತರು ಪ್ರಶ್ನಿಸಿದಾಗ ಮೇಲಿನ ರೀತಿ ಉತ್ತರಿಸಿದ್ದಾರೆ.

Advertisements

“ಬಹುತೇಕ ವಿರೋಧ ಪಕ್ಷಗಳು ಬಿಜೆಪಿ ಜತೆ ನೇರವಾಗಿ ಅಥವಾ ಪರೋಕ್ಷವಾಗಿ ಹೊಂದಾಣಿಕೆ ಮಾಡಿಕೊಂಡಿವೆ. ಕಾಂಗ್ರೆಸ್ಸಿನ ಕೆಲವು ನಾಯಕರೂ ಅವರಲ್ಲಿ ಸೇರಿದ್ದಾರೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಯ ಬಿತ್ತುವವರನ್ನು ಬದಿಗಿಟ್ಟು, ಜನತೆಗೆ ತಲುಪಿಸುವುದರತ್ತ ಸರ್ಕಾರ ಗಮನ ಹರಿಸಲಿ

“ಲೋಕಸಭೆ ಚುನಾವಣೆ ಬಗ್ಗೆ ಈಗಲೇ ಚಿಂತಿಸುವುದಿಲ್ಲ. ಸದ್ಯ ನಮ್ಮ ಮುಂದೆ ಬಿಬಿಎಂಪಿ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಿವೆ. ಜನಬೆಂಬಲ ನೋಡಿ ಲೋಕಸಭೆಯಲ್ಲಿ ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸಬೇಕು ಎಂಬುದರ ಬಗ್ಗೆ ನಿರ್ಧರಿಸುತ್ತೇವೆ” ಎಂದಿದ್ದಾರೆ.

“ನನಗೆ ಈಗ 91 ವರ್ಷ. ಬರುವ ಲೋಕಸಭೆ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ. ನನ್ನ ಬದಲು ಅಭ್ಯರ್ಥಿ ಯಾರು ಆಗಬೇಕು ಎಂಬುದನ್ನು ಪಕ್ಷ ನಿರ್ಧರಿಸುತ್ತದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

Download Eedina App Android / iOS

X