ಸಂಬಂಧಗಳ ಮೌಲ್ಯಗಳನ್ನು ಎತ್ತಿ ಹಿಡಿಯುವ ಸಾರ್ವಕಾಲಿಕ ಕೃತಿ ಬೆಟ್ಟದ ಜೀವ: ಪಿ ಶೇಷಾದ್ರಿ

Date:

Advertisements

ಡಾ. ಶಿವರಾಮ ಕಾರಂತ ಅವರ ‘ಬೆಟ್ಟದ ಜೀವ’ ಕೃತಿ ಮಾನವೀಯ ಸಂಬಂಧಗಳ ಮೌಲ್ಯಗಳನ್ನು ಅತ್ಯಂತ ಕಲಾತ್ಮಕವಾಗಿ ಹಿಡಿದಿಟ್ಟಿರುವ ಕೃತಿಯಾಗಿರುವುದರಿಂದಲೇ ಅದು ಇಂದಿಗೂ ಪ್ರಸ್ತುತವಾಗಿದೆ ಹಾಗೆಯೇ ಎಂದಿಗೂ ಪ್ರಸ್ತುತವಾಗಿರುತ್ತದೆ ಎಂದು ಚಲನಚಿತ್ರ ನಿರ್ದೇಶಕ ಪಿ ಶೇಷಾದ್ರಿ ಹೇಳಿದ್ದಾರೆ.

ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರಿನ ಸುರಾನಾ ಕಾಲೇಜಿನಲ್ಲಿ ಕನ್ನಡ ವಿಭಾಗದ ಸಹಯೋಗದೊಂದಿಗೆ ಆಯೋಜಿಸಿದ್ದ, ‘ಅಂಗಳದಲ್ಲಿ ತಿಂಗಳ ಪುಸ್ತಕ’ ಮಾಲಿಕೆಯಡಿ ಮಾತನಾಡುತ್ತಿದ್ದರು. ಪ್ರತೀ ತಿಂಗಳು ಒಂದು ಸಾಹಿತ್ಯ ಕೃತಿಯನ್ನು ಕುರಿತು ಒಬ್ಬ ಗಣ್ಯರು ಮಾತನಾಡುವ ಈ ಯೋಜನೆಯಡಿ ಇಂದು ಪಿ. ಶೇಷಾದ್ರಿ ಅವರು ಡಾ. ಶಿವರಾಮ ಕಾರಂತ ಅವರ ಬಹುಜನಪ್ರಿಯ ಕಾದಂಬರಿ ‘ಬೆಟ್ಟದ ಜೀವ’ ಕುರಿತು ಮಾತನಾಡುತ್ತಿದ್ದರು.

1935ರಲ್ಲಿ ಪ್ರಕಟವಾದ ಈ ಕಾದಂಬರಿ 90 ವರ್ಷಗಳ ನಂತರವು ಚರ್ಚೆಗೆ ಒಳಪಡುತ್ತಿದೆ ಎಂದರೆ ಅದಕ್ಕೆ ಕಾರಣ ಆ ಕೃತಿಯಲ್ಲಿರುವ ಮೌಲ್ಯಗಳು. ಸಂಬಂಧಗಳ ಸೂಕ್ಷ್ಮತೆಯನ್ನು ಅತ್ಯಂತ ಮನೋಜ್ಞವಾಗಿ ವರ್ಣಿತವಾಗಿರುವ ಈ ಕಾದಂಬರಿ ಅನೇಕ ರೂಪಕಗಳಿಗೆ ಮಾದರಿಯಾಗಿದೆ. ವೃದ್ಧ ತಂದೆ- ತಾಯಿಗಳು, ಮನೆ ಬಿಟ್ಟು ಹೋಗಿರುವ ಮಗ, ಆತ ಮರಳಿ ಬರಬಹುದೆನ್ನುವ ನಿರೀಕ್ಷೆ, ಜೊತೆಗಿರುವ ಸಂಬಂಧಿಗಳ ಆತಂಕ ಈ ಎಲ್ಲವೂ ‘ಬೆಟ್ಟದ ಜೀವ’ ಕೃತಿಯಲ್ಲಿ ಒಡಮೂಡಿದೆ. ಮನುಷ್ಯ ಜೀವನದ ಆಂತರಿಕ ತುಮುಲಗಳನ್ನು ತೆರೆದಿಡುವ ಈ ಕಾದಂಬರಿ ಇಂದಿಗೂ ಪ್ರಸ್ತುತವಾಗಿರುವುದು ಇದರ ಕಥಾವಸ್ತುವಿನಿಂದಲೇ ಎಂದು ಶೇಷಾದ್ರಿ ಹೇಳಿದರು.

Advertisements

ಪ್ರತೀ ಸಂಬಂಧಗಳ ಮಧ್ಯೆಯೂ ಒಂದು ಸಣ್ಣ ಗುಟ್ಟು ಇರುತ್ತದೆ. ಅದು ಮನುಷ್ಯನ ಬದುಕಿನ ಒಳನೋಟವನ್ನು ಪ್ರತಿನಿಧಿಸುತ್ತದೆ. ಹಾಗೆಂದು ಆ ಗುಟ್ಟುಗಳು ಹಾನಿಕಾರಕವಲ್ಲ. ಸಂಬಂಧಗಳ ಕಟ್ಟುವಿಕೆಗಾಗಿ ಉಳಿಸಿಕೊಂಡಂತಹುದು ಎಂದು ಶೇಷಾದ್ರಿ ಬಣ್ಣಸಿದರು.

ಅಂಕಲ್–ಆಂಟಿ ಎಂದು ಕರೆಯುವ ಪದ್ಧತಿಯನ್ನು ಬಿಟ್ಟು ಅಚ್ಚ ಕನ್ನಡದ ಸಂಬಂಧ ಸೂಚಕಗಳನ್ನು ಇಂದಿನ ಮಕ್ಕಳು ಬಳಸುವ ಪರಿಪಾಠವನ್ನು ಬೆಳೆಸಿಕೊಳ್ಳಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೈಕ್ರೋ ಫೈನಾನ್ಸ್‌ಗೆ ಬಲಿಯಾಗುತ್ತಿರುವ ಬಡವರು; ಸತ್ತಂತಿರುವ ಸರ್ಕಾರ

ಸಮಕಾಲೀನ ಸ್ಥಿತಿಗತಿಗಳ ಬಗ್ಗೆಯೂ ಅವಲೋಕನ ಮಾಡಿದ ಶೇಷಾದ್ರಿ ಅವರು ಪ್ರತಿಭಾ ಪಲಾಯನದ ಬಗ್ಗೆಯೂ ತಮ್ಮ ಅಸಮಾಧಾನ ತೋರಿದರು. ನಮ್ಮ ಮಕ್ಕಳು ನಮ್ಮ ದೇಶದಲ್ಲಿ ಉಳಿಯುವಂತಾಗಬೇಕು ಎಂದರು.

ಸಮಾರಂಭದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ಅವರು ಮಾತನಾಡಿ, ಶೇಷಾದ್ರಿ ಅವರ ಸಾಧನೆಯ ಕುರಿತು ಪ್ರಶಂಸೆ ವ್ಯಕ್ತಪಡಿಸಿದರು. ಕನ್ನಡ ಪುಸ್ತಕ ಪ್ರಾಧಿಕಾರ ಹೊಸ ಚಿಂತನೆಯೊಂದಿಗೆ ಯೋಜನೆಯನ್ನು ರೂಪಿಸಿದ್ದು ಸಾಹಿತ್ಯಾಸಕ್ತರು ಹಾಗೂ ವಿದ್ಯಾರ್ಥಿಗಳು ಅದರ ಲಾಭ ಪಡೆಯಬೇಕು ಎಂದರು. ಸಮಾರಂಭದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಪಿ. ಶೇಷಾದ್ರಿ ಅವರನ್ನು ಸನ್ಮಾನಿಸಲಾಯಿತು.

ಸುರಾನಾ ಕಾಲೇಜಿನ ಪ್ರಾಂಶುಪಾಲರಾದ ಡಾ. ವೀಣಾ ಕೆ.ಎನ್. ಸಮಾರಂಭದಲ್ಲಿ ಉಪಸ್ಥಿತರಿದ್ದರು. ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಸ್ವಾಗತಿಸಿದರು. ಸುರಾನಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ವತ್ಸಲಾ ಮೋಹನ್ ವಂದಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಎಮ್ಮೆ ಕೊಡಿಸುವುದಾಗಿ ಹೇಳಿ ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಲಕ್ಷಗಟ್ಟಲೆ ವಂಚನೆ

ಕನ್ನಡ ಸಿನಿಮಾದ ನಿರ್ದೇಶಕ ಪ್ರೇಮ್‌ ಅವರು ಎಮ್ಮೆಗಳನ್ನು ಖರೀದಿಸಲು ಮುಂದಾಗಿ ಮೋಸಕ್ಕೆ...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X