ಹಾಸನ | ಜ.26ರಂದು ಅರೇಹಳ್ಳಿಯಲ್ಲಿ 207ನೇ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ

Date:

Advertisements

ಗಣರಾಜ್ಯೋತ್ಸವದ ಅಂಗವಾಗಿ ಜನವರಿ26ರ ರಂದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅರೇಹಳ್ಳಿಯಲ್ಲಿ 207ನೇ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಿಸಲಾಗುವುದು ಎಂದು ದಲಿತ ಮುಖಂಡ ಅರೇಹಳ್ಳಿ ನಿಂಗರಾಜು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಭೀಮ ಕೋರೆಗಾಂವ್ ಯುದ್ಧ ದಲಿತರ ಸ್ವಾಭಿಮಾನದ ಪ್ರತೀಕವಾಗಿದೆ. ಕೇವಲ 500 ಮಂದಿ ಮಹರ್ ಸೈನಿಕರು 28,000 ಪೇಶ್ವೆ ಸೈನಿಕರನ್ನು ಬಗ್ಗುಬಡಿದ ವಿಜಯದ ದಿನವನ್ನು ಭೀಮಾ ಕೋರೇಗಾಂವ್ ವಿಜಯೋತ್ಸವವನ್ನಾಗಿ ಆಚರಿಸಲಾಗುತ್ತದೆ. ಅದರಂತೆ ಅರೇಹಳ್ಳಿಯಲ್ಲಿಯೂ ಪ್ರತಿ ವರ್ಷ ಈ ವಿಜಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿ” ಎಂದು ತಿಳಿಸಿದರು.

“ಜನವರಿ 26ರ ಬೆಳಿಗ್ಗೆ 11 ಗಂಟೆಗೆ ಅಂಬೇಡ್ಕರ್ ವೃತ್ತದ ಬಳಿಯಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಹೊರಡಲಿರುವ ಬೃಹತ್ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯ ಅಂಬೇಡ್ಕರ್ ಅಭಿಮಾನಿಗಳು ಹಾಗೂ ಅನುಯಾಯಿಗಳು ಭಾಗವಹಿಸಲಿದ್ದಾರೆ. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಲಿದ್ದು, ಅಂಬೇಡ್ಕರ್ ಭಾವಚಿತ್ರ ಹಾಗೂ ವಿಜಯ ಸ್ತಂಭದ ಮೆರವಣಿಗೆ ನಡೆಯಲಿದೆ” ಎಂದರು.

Advertisements

“ಅದೇ ದಿನ ಸಂಜೆ 6ರ ಸುಮಾರಿಗೆ ಪಟ್ಟಣದ ಪದವಿಪೂರ್ವ ಕಾಲೇಜು ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮಕ್ಕೆ ಬಾಬಾಸಾಹೇಬ್ ಅಂಬೇಡ್ಕರ್ ವಿಚಾರವಾದಿ ಬಿ ಗೋಪಾಲ್, ಅಂಬೇಡ್ಕರ್ ಅನುಯಾಯಿ ಹಾಗೂ ನಟ ಚೇತನ್ ಅಹಿಂಸಾ, ಹಾಸ್ಯನಟ ಸಾಧುಕೋಕಿಲ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ವಿಚಾರಧಾರೆಗಳು ಹಾಗೂ ಭೀಮ ಕೋರೆಗಾಂವ್ ವಿಜಯೋತ್ಸವ ವಿಚಾರಗಳನ್ನು ಹಂಚಿಕೊಳ್ಳಲಾಗುವುದು” ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಕೂಡ್ಲಿಗಿ | ಗೌರವ ಧನ ಹೆಚ್ಚಿಸುವಂತೆ ಸರ್ಕಾರಕ್ಕೆ ಅಂಗನವಾಡಿ ನೌಕರರ ಒತ್ತಾಯ: ಶಾಸಕರ ಮೂಲಕ ಪತ್ರ

“ಕಾರ್ಯಕ್ರಮದಲ್ಲಿ ಊಟ ಉಪಚಾರದ ವ್ಯವಸ್ಥೆ ಕಲ್ಪಿಸಲಾಗಿದ್ದು, ಭೀಮಾ ಕೋರೆಗಾಂವ್‌ ವಿಜಯೋತ್ಸವದ ಅದ್ದೂರಿ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯ ಅಂಬೇಡ್ಕರ್ ಅಭಿಮಾನಿಗಳು, ಸಾರ್ವಜನಿಕರು, ಅರೇಹಳ್ಳಿ ಗ್ರಾಮಸ್ಥರು ಹಾಗೂ ಆ ಭಾಗದ ಎಲ್ಲ ಮುಖಂಡರು, ಜನಪ್ರತಿನಿಧಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು” ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ವಿಜಯೋತ್ಸವ ಸಮಿತಿಯ ಅಧ್ಯಕ್ಷ ಎಸ್ ವಿರೂಪಾಕ್ಷ, ಲಿಂಗರಾಜು, ವಿಜಯೋತ್ಸವ ಸಮಿತಿಯ ಉಪಾಧ್ಯಕ್ಷ ಮಲ್ಲಿಕಾರ್ಜುನ್, ರಮೇಶ್, ಸಿದ್ದರಾಜು, ದಿನೇಶ್, ಸೋಮಶೇಖರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

Download Eedina App Android / iOS

X