ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಬಸ್ ನಿಲ್ದಾಣ ಬಳಿ ಇರುವ ವಿಶ್ವಗುರು ಬಸವಣ್ಣನವರ ಭಾವಚಿತ್ರ ಹರಿದು ಅವಮಾನ ಮಾಡಿದ್ದಾರೆ. ಕಿಡಿಗೇಡಿಗಳ ಕೃತ್ಯ ಖಂಡಿಸಿ ಸ್ಥಳೀಯ ಬಸವ ಅನುಯಾಯಿಗಳು ಶನಿವಾರ ಬೆಳಿಗ್ಗೆ ಬಸ್ ನಿಲ್ದಾಣ ಎದುರು ಪ್ರತಿಭಟನೆ ನಡೆಸಿದರು.
ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಭಾವಚಿತ್ರಕ್ಕೆ ಅಪಮಾನ ಮಾಡಿರುವುದು ಸಹಿಸುವುದಿಲ್ಲ. ಇದರಿಂದ ಬಸವ ಅನುಯಾಯಿಗಳಿಗೆ ನೋವುಂಟು ಮಾಡಿದೆ. ಕೂಡಲೇ ಆರೋಪಿಗಳನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪ್ರತಿಭಟನಾಕಾರರು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ವಿಷಯ ತಿಳಿದು ಸ್ಥಳೀಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವುದಾಗಿ ಭರವಸೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಗದಗ | ಫೈನಾನ್ಸ್ ಕಂಪನಿ ಕಿರುಕುಳ: ಕುಟುಂಬ ಸಮೇತ ಹೋಟೆಲ್ ಉದ್ಯಮಿ ನಾಪತ್ತೆ
ಪ್ರತಿಭಟನೆಯಲ್ಲಿ ವಿವಿಧ ಬಸವಪರ ಸಂಘಟನೆಗಳ ಪ್ರಮುಖರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಈ ಕುರಿತು ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ ಮಾಹಿತಿ: ಡಾ.ಅವಿನಾಶ ದೇವನೂರ