ಮೈಕ್ರೋ ಫೈನಾನ್ಸ್ ಹಾವಳಿ | ಸಿದ್ದರಾಮಯ್ಯ ಅವರ ಪ್ರಶ್ನೆಗಳಿಗೆ ಕಂಗಾಲಾದ ಫೈನಾನ್ಸ್ ಕಂಪನಿ ಪ್ರತಿನಿಧಿಗಳು

Date:

Advertisements

ಮೈಕ್ರೋ ಫೈನಾನ್ಸ್ ಹಾವಳಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಶನಿವಾರ ಬ್ಯಾಂಕಿಂಗ್, ಫೈನಾನ್ಸ್, ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿ, ಅಧಿಕಾರಿಗಳು ಹಾಗೂ ಸಚಿವರ ನೇತೃತ್ವದಲ್ಲಿ ಸಭೆ ನಡೆಸಿದರು.

ಸಭೆಯೊಳಗೆ ಮೈಕ್ರೋ ಫೈನಾನ್ಸ್ ಪ್ರತಿನಿಧಿಗಳಿಗೆ ಸಿದ್ದರಾಮಯ್ಯ ಅವರು ಖಾರವಾದ ಪ್ರಶ್ನೆಗಳನ್ನು ಮಾಡಿದರು. “ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ಸಾಲ ವಸೂಲಿಗೆ ಇಳಿಯುತ್ತಿರುವುದನ್ನು ನಿಯಂತ್ರಿಸಲು ಏನು ಮಾಡಿದ್ದೀರಿ? ಅಂಥಾ ಸಿಬ್ಬಂದಿ ವಿರುದ್ಧ ನಿಮ್ಮ ಸಂಸ್ಥೆಗಳಿಂದ ಏನು ಕ್ರಮ ಕೈಗೊಂಡಿದ್ದೀರಿ” ಎಂದು ಪ್ರಶ್ನಿಸಿದರು.

“ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನೀವು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ? ಕಾನೂನು ಕೈಗೆತ್ತಿಕೊಳ್ಳಲು ನಿಮ್ಮ ಸಿಬ್ಬಂದಿಗೆ ಅನುಮತಿ ಕೊಟ್ಟವರು ಯಾರು? ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತಿದ್ದೀರಾ? ರಿಸರ್ವ್ ಬ್ಯಾಂಕಿನ ಷರತ್ತು ಮತ್ತು ನಿಬಂಧನೆಗಳನ್ನು ಸಾಲಗಾರರಿಗೆ ಅವರ ಆಡು ಭಾಷೆಯಲ್ಲಿ ಅರ್ಥ ಮಾಡಿಸಿದ್ದೀರಾ? ಆರ್‌ಬಿಐ ನಿಯಮ ಮೀರಿ ಸಾಲ ಕೊಡುತ್ತಿದ್ದೀರಾ? ಮರುಪಾವತಿಯ ಕೆಪಾಸಿಟಿ ಗಮನಿಸದೆ ಒಬ್ಬರೇ ಸಾಲಗಾರರಿಗೆ ಪದೇ ಪದೆ ಸಾಲ ಕೊಡುತ್ತಿರುವುದು ಏಕೆ?ಸಾಲಗಾರರಿಗೆ ಸಾಲ ಕೊಡುವ ಮೊದಲು ಆಧಾರ್ KYC ಮಾಡಿಸುತ್ತಿಲ್ಲ ಏಕೆ? ಇದನ್ನು ಮಾಡಿಸಿದ್ದರೆ ಒಬ್ಬರೇ ಸಾಲಗಾರರಿಗೆ ಪದೇ ಪದೆ ಸಾಲ ಕೊಡುವುದು ತಪ್ಪುತ್ತಿತ್ತು” ಎಂದರು.

Advertisements

ನಿಮ್ಮ ವ್ಯವಹಾರ ಹೆಚ್ಚಿಸಿಕೊಳ್ಳಲು ನಿಯಮ ಮೀರಿ ಒಬ್ಬರೇ ಸಾಲಗಾರರಿಗೆ ಮೇಲಿಂದ ಮೇಲೆ ಸಾಲ ಕೊಡುತ್ತಿದ್ದೀರಿ. ಸಾಲ ತೀರಿಸಲು ಸಾಧ್ಯವಾಗದಿದ್ದಾಗ ನಿಯಮ ಬಾಹಿರ ಕ್ರಮಕ್ಕೆ ಮುಂದಾಗುತ್ತಿದ್ದೀರಿ. ಇದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಆರ್ ಬಿ ಐ ನಿಯಮಗಳನ್ನು ಉಲ್ಲಂಘಿಸಿ ಸಾಲ ನೀಡಿದ ಮೈಕ್ರೋ ಫೈನಾನ್ಸ್ ಕಂಪನಿಗಳ ಪರವಾನಗಿ ರದ್ದುಗೊಳಿಸಲು ಏನು ಕ್ರಮ ಕೈಗೊಂಡಿದ್ದೀರಿ” ಆರ್ ಬಿ ಐ ಅಧಿಕಾರಿಗಳಿಗೆ ಸಿಎಂ ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಯಚೂರು ಗ್ರಾಮೀಣ ಕೂಲಿಕಾರರ ಸತ್ಯಾಗ್ರಹ; ಸ್ವಾರ್ಥರಹಿತ ಜನಹಿತದ ಬೇಡಿಕೆಗಳು ಸರ್ಕಾರದ ಕಣ್ತೆರೆಸಲಿ ‌

ಒಬ್ಬರೇ ಸಾಲಗಾರರು ಬೇರೆ ಬೇರೆ ಗುರಿತಿನ ಚೀಟಿ ( ಐ ಡಿ ಕಾರ್ಡ್ ಗಳು) ಕೊಟ್ಟು ಸಾಲ ಪಡೆದಿರುವುದು ನಿಮ್ಮ ದಾಖಲೆಗಳಲ್ಲಿದೆ. ಆದರೆ ಸಾಲಗಾರರು ಈ ರೀತಿ ದುರುಪಯೋಗ ಪಡಿಸಿಕೊಳ್ಳುವುದನ್ನು ತಪ್ಪಿಸಲು ಯಾವ ಪದ್ಧತಿ ಪಾಲಿಸುತ್ತಿದ್ದೀರಿ ಎಂದು ಕೇಳಿದಾಗ ಆರ್ ಬಿ ಐ ಪರವಾನಗಿ ಪಡೆದಿರುವ ಕಂಪನಿಗಳು ನಿಯಮಬಾಹಿರ ವಸೂಲಿಗೆ ಇಳಿದಿಲ್ಲ, ಆ ರೀತಿ ಮಾಡುತ್ತಿರುವುದು ಪರವಾನಗಿ ಇಲ್ಲದ ಕಂಪನಿಗಳು ಎನ್ನುವ ಉತ್ತರ ಮೈಕ್ರೋ ಕಂಪನಿಯವರಿಂದ ಬಂತು.

ಇದಕ್ಕೆ ಸಚಿವ ಕೃಷ್ಣಬೈರೇಗೌಡರು, ಎಚ್.ಕೆ.ಪಾಟೀಲ್, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಕರಾರು ವ್ಯಕ್ತಪಡಿಸಿ, ಪರವಾನಗಿ ಇದ್ದವರೇ ಈ ರೀತಿ ಮಾಡುತ್ತಿದ್ದಾರೆ ಎನ್ನುವ ವರದಿ ನಮಗೆ ಗ್ರೌಂಡ್ ರಿಪೋರ್ಟ್‌ನಲ್ಲಿ ಬಂದಿದೆ. ಆದ್ದರಿಂದ ಬಡ ಜನರ ಹಿತಕಾಯಲು ನಾವು ನಿಯಮ ಉಲ್ಲಂಘಿಸುವ ಕಂಪನಿ ಎಂಡಿ ಗಳ ವಿರುದ್ಧ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಸಚಿವರು ಸಭೆಯಲ್ಲಿ‌ ಗುಡುಗಿದರು. ಫೈನಾನ್ಸ್ ಕಂಪನಿ ಪ್ರತಿನಿಧಿಗಳು ಒಂದು ಕ್ಷಣ ಕಂಗಾಲಾದರು.

ಮಹಿಳೆಯರ, ವೃದ್ಧರ ಮೇಲೆ ದಬ್ಬಾಳಿಕೆ ನಡೆಸಿರುವ ಪತ್ರಿಕಾ ವರದಿಗಳೂ ನಿತ್ಯ ಬರುತ್ತಿವೆ. ನಾನು ಇದನ್ನೆಲ್ಲಾ ಸಹಿಸುವುದಿಲ್ಲ. ನನ್ನ ಜನರ ರಕ್ಷಣೆಗೆ ನಾನು ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯಲ್ಲೇ ಕಠಿಣ ಎಚ್ಚರಿಕೆ ನೀಡಿದರು.

ಮೊದಲ ಹಂತದ ಸಭೆ ಬಳಿಕ ಬ್ಯಾಂಕಿಂಗ್, ಫೈನಾನ್ಸ್, ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳನ್ನು ಸಭೆಯಿಂದ ಹೊರಗಿರಲು ಹೇಳಿ, ಕಾನೂನು ಇಲಾಖೆ, ಗೃಹ ಇಲಾಖೆ, ಕಂದಾಯ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಎರಡನೇ ಹಂತದ ಸಭೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

Download Eedina App Android / iOS

X