ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ, ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು: ಸಿಎಂ ಸಿದ್ದರಾಮಯ್ಯ ಭರವಸೆ

Date:

Advertisements

ಮೈಕ್ರೋ ಫೈನಾನ್ಸ್‌ಗಳಿಂದ ಸಾಲ ಪಡೆಯುವವರ ಹಿತವನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ. ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ‌ ಕೈಗೊಳ್ಳಲಾಗುವುದು. ಸಾಲಗಾರರ ಹಿತವನ್ನು ಕಾಪಾಡುವ ದೃಷ್ಟಿಯಿಂದ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ರಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತು ಗೃಹ ಕಚೇರಿಯಲ್ಲಿ ಶನಿವಾರ ಉನ್ನತ ಮಟ್ಟದ ಸಭೆಯ ಬಳಿಕ ನಡೆಸಿದ ಬಳಿಕ ಸುದ್ದಿಗಾರರಿಗೆ ಸಿಎಂ ಮಾಹಿತಿ ನೀಡಿದರು.

“ಬೆದರಿಸಿ ಬಲವಂತದ ಸಾಲ ವಸೂಲಾತಿ ಒಪ್ಪಲು ಸಾಧ್ಯವಿಲ್ಲ.‌ ಬಡ ಸಾಲಗಾರರ ಹಿತವನ್ನು ಕಾಪಾಡಲು ಸರ್ಕಾರ ಕ್ರಮಗಳನ್ನು ಕೈಗೊಳ್ಳಲಿದೆ. ಯಾರಾದರೂ ಮೈಕ್ರೋ ಫೈನಾನ್ಸ್ ವ್ಯಕ್ತಿಗಳಿಂದ ಕಿರುಕುಳ ಎದುರಿಸುತ್ತಿದ್ದರೆ ಸ್ಥಳೀಯವಾಗಿ ಪೊಲೀಸರಿಗೆ ದೂರು ನೀಡಬೇಕು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಸಭೆ ನಡೆಸಿ ಈ ಕುರಿತು ಜನರಿಗೆ ಸೂಕ್ತ ತಿಳುವಳಿಕೆ, ಹಾಗೂ ಮೈಕ್ರೋ ಫೈನಾನ್ಸ್‌ ವ್ಯಕ್ತಿಗಳಿಗೆ ಎಚ್ಚರಿಕೆ ನೀಡಬೇಕು” ಎಂದು ಸೂಚಿಸಿದರು.

Advertisements

“ಬಲವಂತದ ಸಾಲ ವಸೂಲಾತಿ ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ, ಈ ಕುರಿತು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಸಾಧ್ಯವಾಗುವಂತೆ ಕಾನೂನಿನಲ್ಲಿ ಅವಕಾಶವಿದೆ. ಈಗಿರುವ ಕಾನೂನು ಇನ್ನಷ್ಟು ಬಲಪಡಿಸಲು ಕ್ರಮ ಕೈಗೊಳ್ಳುತ್ತೇವೆ. ಇದರಲ್ಲಿ ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡುತ್ತೇವೆ. ನೋಂದಣಿಯಾಗದ ಲೇವಾದೇವಿಗಾರರ ಮೇಲೆ ನಿಯಂತ್ರಣಕ್ಕೆ ಹೊಸ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ಮೈಕ್ರೋ ಫೈನಾನ್ಸ್ ಹಾವಳಿ | ಸಿದ್ದರಾಮಯ್ಯ ಅವರ ಪ್ರಶ್ನೆಗಳಿಗೆ ಕಂಗಾಲಾದ ಫೈನಾನ್ಸ್ ಕಂಪನಿ ಪ್ರತಿನಿಧಿಗಳು

“ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲು ಸೂಚಿಸಲಾಗಿದೆ. ಅಲ್ಲಿ ದೂರು ನೀಡಬಹುದು. ಪೊಲೀಸರು ಸ್ವಯಂಪ್ರೇರಿತರಾಗಿ ದೂರು ದಾಖಲಿಸಲು ಸೂಚನೆ ನೀಡಲಾಗಿದೆ. ಅನಿಯಂತ್ರಿತ ಸಾಲ ಚಟುವಟಿಕೆಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರ ಕರಡು ಸಿದ್ಧಪಡಿಸಿದೆ. ಈ ಕುರಿತು ಸಮಗ್ರ ಸಮಾಲೋಚನೆ ನಡೆಸಿ, ಸಾಲದ ಸುಳಿಯಲ್ಲಿ ಸಿಲುಕಿರುವವರ ಹಿತ ಕಾಪಾಡಲು ಕ್ರಮ. ಕಿರುಕುಳ ತಪ್ಪಿಸಲು ಸೂಕ್ತ ಕಾನೂನು ರಚಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು. ಸಾಲ ವಸೂಲಾತಿ ಕುರಿತಾಗಿ ಆರ್‌ ಬಿಐ ಹಲವು ಮಾರ್ಗಸೂಚಿ ಹೊರಡಿಸಿವೆ. ಸಂಜೆ 5ಗಂಟೆ ಬಳಿಕ ಮನೆಗೆ ಸಾಲ ವಸೂಲಾತಿಗೆ ಹೋಗಬಾರದು; ಬೆದರಿಕೆ ಹಾಕಬಾರದು. ವಸೂಲಾತಿಗೆ ಮೂರನೇ ವ್ಯಕ್ತಿಗಳನ್ನು ಬಳಸಿಕೊಳ್ಳಬಾರದು. ಇತ್ಯಾದಿ. ಇದನ್ನು ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳುತ್ತೇವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X