ನಂಜನಗೂಡು | ಬಸ್-ಟಿಪ್ಪರ್ ನಡುವೆ ಓವರ್​​ಟೇಕ್‌, ಮಹಿಳೆಯೊಬ್ಬರ ಕುತ್ತಿಗೆ ಕತ್ತರಿಸಿ ದಾರುಣ ಸಾವು

Date:

Advertisements

ಸಾರಿಗೆ ಬಸ್ ಮತ್ತು ಟಿಪ್ಪರ್ ನಡುವಿನ ಓವರ್​​ಟೇಕ್​ ವೇಳೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕ ಮಹಿಳೆಯೊಬ್ಬರು ಕುತ್ತಿಗೆ ಮತ್ತು ಕೈ ಕತ್ತರಿಸಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದ ಬಳಿ ಶನಿವಾರ ಸಂಭವಿಸಿದೆ.

ಬೇಗೂರು ಸಮೀಪದ ಆಲಹಳ್ಳಿ ಗ್ರಾಮದ ಶಿವಲಿಂಗಮ್ಮ (43) ಮೃತ ಮಹಿಳೆ ಎಂದು ತಿಳಿದು ಬಂದಿದೆ. ಅವರು ಮೈಸೂರಿನಿಂದ ಗುಂಡ್ಲುಪೇಟೆಗೆ ನಂಜನಗೂಡು ಮಾರ್ಗವಾಗಿ ತೆರಳುತ್ತಿದ್ದ ಸಾರಿಗೆ ಬಸ್​ನಲ್ಲಿ ಪ್ರಯಾಣಿಸುತ್ತಿದ್ದರು.

ಈ ಸಂದರ್ಭದಲ್ಲಿ ಸಿಂಧುವಳ್ಳಿ ಗ್ರಾಮದ ಬಳಿ ಮಹಿಳೆಯು ಬಸ್​​ನ ಕಿಟಕಿಯಿಂದ ಕತ್ತನ್ನು ಹೊರಹಾಕಿದ್ದು, ಅದೇ ಸಮಯದಲ್ಲಿ ಹಿಂದಿನಿಂದ ಬಂದ ಟಿಪ್ಪರ್ ಮತ್ತು ಸಾರಿಗೆ ಬಸ್ ನಡುವೆ ಕ್ಷಣಾರ್ಧದಲ್ಲಿ ಅಪಘಾತವಾಗಿದೆ. ಪರಿಣಾಮ ಶಿವಲಿಂಗಮ್ಮ ಕುತ್ತಿಗೆ ಮತ್ತು ಕೈ ಕಟ್ ಆಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಟಿಪ್ಪರ್ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ.

Advertisements

ನಂಜನಗೂಡು ಸಂಚಾರ ಪೊಲೀಸ್ ಠಾಣೆ ಪಿಎಸ್ಐ ಸಿದ್ದರಾಜು ಮತ್ತು ಸಿಬ್ಬಂದಿ ಮಹೇಂದ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸಾರಿಗೆ ಬಸ್ ವಶಕ್ಕೆ ಪಡೆದುಕೊಂಡಿದ್ದಾರೆ. ನಾಪತ್ತೆಯಾಗಿರುವ ಟಿಪ್ಪರ್ ವಾಹನವನ್ನು ಪತ್ತೆ ಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ. ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಜಿಲ್ಲಾಧ್ಯಂತ ಭತ್ತ,ರಾಗಿ ಖರೀದಿ ಕೇಂದ್ರ ಸ್ಥಾಪನೆ, ರೈತ ಸಂಘದ ಹೋರಾಟದ ಫಲ : ಹೊಸೂರು ಕುಮಾರ್

ಜಿಲ್ಲಾಧ್ಯಂತ ಭತ್ತ, ರಾಗಿ ಖರೀದಿ ಕೇಂದ್ರ ತೆರದಿದ್ದು, ಕನಿಷ್ಠ ಬೆಂಬಲ ಬೆಲೆ...

ಮೈಸೂರು | ಕಬಿನಿ ಕುಡಿಯುವ ನೀರು ಯೋಜನೆ; ಕಾಮಗಾರಿ ವೀಕ್ಷಿಸಿದ ಸಚಿವ ಹೆಚ್‌ ಸಿ ಮಹದೇವಪ್ಪ

ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ...

ಮೈಸೂರು | ರಸ್ತೆ ಅಪಘಾತ ತಡೆಗೆ ₹127 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ-766ರ ನವೀಕರಣ

ರಾಷ್ಟ್ರೀಯ ಹೆದ್ದಾರಿ-766ರಲ್ಲಿ ಎಂಟು ಅಪಘಾತ ವಲಯಗಳನ್ನು ಗುರುತಿಸಿ ₹127 ಕೋಟಿ ವೆಚ್ಚದಲ್ಲಿ...

ಮೈಸೂರು | ಹಂದಿಜೋಗಿ ಕುಟುಂಬ ಬೀದಿಪಾಲು; ʼಈ ದಿನ ವರದಿʼಗೆ ಎಚ್ಚೆತ್ತ ಅಧಿಕಾರಿಗಳು ಸ್ಥಳಕ್ಕೆ ಭೇಟಿ

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊರಳವಾಡಿ...

Download Eedina App Android / iOS

X