ಆರ್‌ಎಸ್‌ಎಸ್‌ ಸೇರುವಂತೆ ಸರ್ಕಾರಿ ಕಾಲೇಜು ಆಡಳಿತದಿಂದ ಒತ್ತಡ: ಹೈಕೋರ್ಟ್ ಮೊರೆಹೋದ ಉಪನ್ಯಾಸಕ

Date:

Advertisements

ಹಿಂದುತ್ವ ಕೋಮುವಾದಿ ಸಂಘಟನೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಸೇರುವಂತೆ ಸರ್ಕಾರಿ ಕಾಲೇಜಿನ ಉನ್ನತಾಧಿಕಾರಿಗಳು ಒತ್ತಾಯಿಸುತ್ತಿದ್ದಾರೆ. ಸೇರಲು ನಿರಾಕರಿಸಿದ್ದಕ್ಕೆ ಹಲ್ಲೆ ಎಸಗಿದ್ದಾರೆ ಎಂದು ಎಂದು ಆರೋಪಿಸಿ ಮಧ್ಯಪ್ರದೇಶದ ಉಪನ್ಯಾಸಕರೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಮಜೌಲಿಯಲ್ಲಿರುವ ಸರ್ಕಾರಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರೊಬ್ಬರು ಕಾಲೇಜು ಆಡಳಿತದ ವಿರುದ್ಧ ಮೊಕದ್ದಮೆ ದಾಖಲಿಸಿದ್ದಾರೆ. ಅವರ ಅರ್ಜಿಯನ್ನು ನ್ಯಾಯಮೂರ್ತಿ ವಿವೇಕ್ ಅಗರ್ವಾಲ್ ವಿಚಾರಣೆ ನಡೆಸಿದ್ದಾರೆ. ರಾಜ್ಯ ಸರ್ಕಾರವು ಪರಿಶೀಲನೆ ನಡೆಸಿ, ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಹಿನ್ನೆಲೆ ಅರ್ಜಿಯನ್ನು ವಿಲೇವಾರಿ ಮಾಡಿದೆ.

ಉಪನ್ಯಾಸಕನ ಆರೋಪದ ಕುರಿತು ತನಿಖೆ ನಡೆಸಲು ಸಿಧಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ (ಎಸ್‌ಪಿ) ಸರ್ಕಾರ ಆದೇಶಿಸಲಿದೆ. ಆರೋಪ ನಿಜವಾಗಿದ್ದರೆ, ಸರ್ಕಾರದ ಆದೇಶದ ಪ್ರತಿ ತಲುಪಿದ 7 ದಿನಗಳ ಒಳಗೆ ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಲಾಗುವುದು ಎಂದು ರಾಜ್ಯ ಸರ್ಕಾರದ ಪರ ವಕೀಲ ವಿ.ಎಸ್. ಚೌಧರಿ ಹೇಳಿದ್ದಾರೆ.

Advertisements

ಆರ್‌ಎಸ್‌ಎಸ್‌ ಸಿದ್ದಾಂತ ತನ್ನ ಕಕ್ಷಿದಾರನ ಸಿದ್ದಾಂತಕ್ಕೆ ಹೊಂದಾಣಿಕೆಯಾಗುವುದಿಲ್ಲ. ಆದ್ದರಿಂದ ಅವರು ಆ ಸಂಘಟನೆ ಸೇರಲು ಸಾಧ್ಯವಿಲ್ಲ. ಆರ್‌ಎಸ್‌ಎಸ್‌ ಸೇರಲು ನಿರಾಕರಿಸಿದ್ದಕ್ಕೆ ಕಾಲೇಜು ಅಧಿಕಾರಿಗಳು ತನ್ನ ಕಕ್ಷಿದಾರನಿಗೆ ಥಳಿಸಿ, ಬೆದರಿಕೆ ಹಾಕಿದ್ದಾರೆ ಎಂದು ಉಪನ್ಯಾಸಕನ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ತನ್ನ ಕಕ್ಷಿದಾರ (ಉಪನ್ಯಾಸಕ) ಈಗಾಗಲೇ ಎಸ್ಪಿ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ದೂರುಗಳನ್ನು ನೀಡಿದ್ದಾರೆ. ಆದರೆ ಅವರು ಯಾವುದೇ ಕ್ರಮಕೈಗೊಂಡಿಲ್ಲ ಎಂದು ವಕೀಲರು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X