ಪದ್ಮ ಪ್ರಶಸ್ತಿ 2025 | ಪುರಸ್ಕೃತರ ಪಟ್ಟಿ ಪ್ರಕಟ; ರಾಜ್ಯದ ವೆಂಕಪ್ಪ ಅಂಬಾಜಿಗೆ ಪದ್ಮಶ್ರೀ

Date:

Advertisements

ಕೇಂದ್ರ ಸರ್ಕಾರವು ಗಣರಾಜ್ಯೋತ್ಸವಕ್ಕೂ ಮುನ್ನಾದಿನ ಪದ್ಮ ಪ್ರಶಸ್ತಿ 2025 ಪುರಸ್ಕೃತರ ಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಗೊಂದಲಿ ಕಲಾವಿದ ವೆಂಕಪ್ಪ ಅಂಬಾಜಿ ಸೇರಿದಂತೆ ಹಲವು ಮಂದಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಬ್ರೆಜಿಲ್‌ನ ಹಿಂದೂ ಆಧ್ಯಾತ್ಮಿಕ ನಾಯಕ ಜೊನಾಸ್ ಮಾಸೆಟ್ಟಿ ಮತ್ತು ಭಾರತದ ಪರಂಪರೆಯ ಬಗ್ಗೆ ಬರೆಯುವ ವಿಚಾರದಲ್ಲಿ ಹೆಸರು ಮಾಡಿರುವ ದಂಪತಿಗಳಾದ ಹಗ್ ಮತ್ತು ಕೊಲೀನ್ ಗ್ಯಾಂಟ್ಜರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. ವೆಂಕಪ್ಪ ಅಂಬಾಜಿ ಅವರಿಗೂ ಪದ್ಮಶ್ರೀ ದೊರಕಿದೆ.

ಇದನ್ನು ಓದಿದ್ದೀರಾ? ಪದ್ಮಶ್ರೀ ಪುರಸ್ಕೃತ ವೃಕ್ಷಮಾತೆ ತುಳಸಿ ಗೌಡ ನಿಧನ

Advertisements

ದೇಶದ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳನ್ನು ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಎಂಬ ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ.

ಕಲೆ, ಸಾಮಾಜಿಕ ಕಾರ್ಯ, ಸಾರ್ವಜನಿಕ ವ್ಯವಹಾರಗಳು, ವಿಜ್ಞಾನ, ಎಂಜಿನಿಯರಿಂಗ್, ವ್ಯಾಪಾರ, ಕೈಗಾರಿಕೆ, ವೈದ್ಯಕೀಯ, ಸಾಹಿತ್ಯ, ಶಿಕ್ಷಣ, ಕ್ರೀಡೆ ಮತ್ತು ನಾಗರಿಕ ಸೇವೆಯಂತಹ ವೈವಿಧ್ಯಮಯ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ.

ಕರ್ನಾಟಕದ ವಿವಿಧ ಕ್ಷೇತ್ರಗಳ ಮೂವರು ಸಾಧಕರು ಪದ್ಮಶ್ರೀ ಗರಿ ಮುಡಿಗೇರಿಸಿಕೊಂಡಿದ್ದಾರೆ. ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತ, ವೆಂಕಪ್ಪ ಅಂಬಾಜಿ ಸುಗಟೇಕರ್‌, ವೈದ್ಯೆ ಡಾ.ವಿಜಯಲಕ್ಷ್ಮೀ ದೇಶಮಾನೆ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದವರು. ಕೊಪ್ಪಳ ಮೂಲದ ತೊಗಲುಗೊಂಬೆಯಾಟದ ಹಿರಿಯ ಕಲಾವಿದ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತ, ಬಾಗಲಕೋಟೆ ಜಿಲ್ಲೆಯ ಜಾನಪದ ಗಾಯಕ ವೆಂಕಪ್ಪ ಅಂಬಾಜಿ ಸುಗಟೇಕರ್‌ ಮತ್ತು ಕಲಬುರಗಿ ಮೂಲದವರಾಗಿರುವ ದೇಶದ ಹೆಸರಾಂತ ಕ್ಯಾನ್ಸರ್ ತಜ್ಞೆ, ರೋಗಿಗಳ ಪಾಲಿನ ಸಾಕ್ಷಾತ್ ಧನ್ವಂತರಿ ಎಂದೇ ಹೆಸರುವಾಸಿಯಾಗಿರುವ ಡಾ.ವಿಜಯಲಕ್ಷ್ಮೀ ದೇಶಮಾನೆ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.

ಗೋವಾದ 100 ವರ್ಷದ ಸ್ವಾತಂತ್ರ್ಯ ಹೋರಾಟಗಾರ, ಪುರುಷ ಪ್ರಧಾನ ಕ್ಷೇತ್ರದಲ್ಲಿ 150 ಮಹಿಳೆಯರಿಗೆ ತರಬೇತಿ ನೀಡಿದ ಪಶ್ಚಿಮ ಬಂಗಾಳದ ಧಕ್ ವಾದಕಿ ಮತ್ತು ಭಾರತದ ಮೊದಲ ಮಹಿಳಾ ಬೊಂಬೆ ಕಲಾವಿದರು ಪದ್ಮಶ್ರೀ ಪ್ರಶಸ್ತಿ ಪಡೆದ 30 ಮಂದಿಯಲ್ಲಿ ಸೇರಿದ್ದಾರೆ.

ಇದನ್ನು ಓದಿದ್ದೀರಾ? ಸಾವಯವ ಕೃಷಿಗೆ ಹೆಸರುವಾಸಿಯಾದ ಪದ್ಮಶ್ರೀ ಪುರಸ್ಕೃತೆ ಕಮಲಾ ಪೂಜಾರಿ ನಿಧನ

ಗೋವಾದ ಸ್ವಾತಂತ್ರ್ಯ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ ಲಿಬಿಯಾ ಲೋಬೊ ಸರ್ದೇಸಾಯಿ, ಪೋರ್ಚುಗೀಸ್ ಆಳ್ವಿಕೆಯ ವಿರುದ್ಧ ಜನರನ್ನು ಒಟ್ಟುಗೂಡಿಸಲು 1955 ರಲ್ಲಿ ಅರಣ್ಯ ಪ್ರದೇಶದಲ್ಲಿ ‘ವೋಜ್ ಡಾ ಲಿಬರ್ಡಾಬೆʼ (ಸ್ವಾತಂತ್ರ್ಯದ ಧ್ವನಿ) ಎಂಬ ಭೂಗತ ರೇಡಿಯೋ ಕೇಂದ್ರವನ್ನು ಸಹ ಸ್ಥಾಪಿಸಿದರು.

ಪುರುಷ ಪ್ರಧಾನ ಕ್ಷೇತ್ರದಲ್ಲಿ 150 ಮಹಿಳೆಯರಿಗೆ ತರಬೇತಿ ನೀಡುವ ಮೂಲಕ ಲಿಂಗ ತಾರತಮ್ಯವನ್ನು ಮುರಿದ ಪಶ್ಚಿಮ ಬಂಗಾಳದ 57 ವರ್ಷದ ಧಕ್ ವಾದಕ ಗೋಕುಲ್ ಚಂದ್ರ ದೇ ಕೂಡ ಪ್ರಶಸ್ತಿ ಪುರಸ್ಕೃತರಲ್ಲಿ ಒಬ್ಬರು. ದೇ ಸಾಂಪ್ರದಾಯಿಕ ವಾದ್ಯಕ್ಕಿಂತ 1.5 ಕೆಜಿ ಕಡಿಮೆ ತೂಕದ ಹಗುರವಾದ ಧಕ್ ಪ್ರಕಾರವನ್ನು ಸಹ ರಚಿಸಿದರು. ಹಾಗೆಯೇ ವಿವಿಧ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಭಾರತವನ್ನು ಪ್ರತಿನಿಧಿಸಿದರು. ಪಂಡಿತ್ ರವಿಶಂಕರ್ ಮತ್ತು ಉಸ್ತಾದ್ ಜಾಕಿರ್ ಹುಸೇನ್ ಅವರಂತಹ ಕಲಾವಿದರೊಂದಿಗೆ ಪ್ರದರ್ಶನ ನೀಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X