ರಾಯಚೂರು | ಕೃಷಿ ಉತ್ಪನ್ನಗಳ ಬೆಲೆ ಕುಸಿತ; ಪ್ರೋತ್ಸಾಹಧನ ನೀಡುವಂತೆ ರೈತರ ಒತ್ತಾಯ

Date:

Advertisements

ಕೃಷಿ ಉತ್ಪನ್ನಗಳ ಬೆಲೆ ಕುಸಿತವಾಗಿರುವ ಹಿನ್ನೆಲೆ ರೈತರಿಗೆ ಪ್ರೋತ್ಸಾಹಧನ ನೀಡಿ ಸರ್ಕಾರವೇ ರೈತರಿಂದ ಉತ್ಪನ್ನಗಳನ್ನು ಖರೀದಿ ಮಾಡಬೇಕು ಹಾಗೂ ಫಸಲ್ ಭೀಮಾ ಯೋಜನೆಯಡಿ ಆದ ಅಕ್ರಮದ ಬಗ್ಗೆ ತನಿಖೆ ಹಾಗೂ ನೈಜ ರೈತರ ಖಾತೆಗಳಿಗೆ ವಿಮೆ ಹಣ ಜಮಾ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸರ್ವೋದಯ ಕರ್ನಾಟಕ ಪಕ್ಷ ರಾಯಚೂರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತು.

ಜಿಲ್ಲೆಯ ರೈತರಿಗೆ ಕೃಷಿ ಚಟುವಟಿಕೆಗಳನ್ನು ನಡೆಸಲು ಮತ್ತು ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ಸಾಕಷ್ಟು ತೊಂದರೆಯಾಗುತ್ತಿದೆ. ರೈತರ ಸಮಸ್ಯೆಗಳ ಬಗ್ಗೆ ಹಲವು ಬಾರಿ ಹೋರಾಟ ಮಾಡುತ್ತಾ ಬಂದಿದ್ದರೂ, ಸಮಸ್ಯೆಗಳು ಮಾತ್ರ ಬಗೆಹರಿಯದೆ ಉಳಿದಿವೆ. ತುಂಗಭದ್ರಾ ಎಡದಂಡೆ ಕಾಲುವೆಗೆ ನೀರು ಬಾರದೇ ಕಾಲುವೆ ವ್ಯಾಪ್ತಿಯ ಮಾನ್ವಿ ಮತ್ತು ಸಿರವಾರ ಸೇರಿದಂತೆ ಇತರೆ ಭಾಗದ ರೈತರು ಜಮೀನುಗಳಿಗೆ ನೀರಿಲ್ಲದೇ ಕಂಗಾಲಾಗಿದ್ದಾರೆ ಎಂದು ಪಕ್ಷದ ಕಾರ್ಯಕರ್ತರು ಅಸಮಾಧಾನ ಹೊರಹಾಕಿದರು.

2023-24ನೇ ಸಾಲಿನ ಬರ ಪರಿಹಾರ ಸಂಪೂರ್ಣವಾಗಿ ರೈತರಿಗೆ ಸಿಗದೇ ಇರುವುದು, ಎಪಿಎಂಸಿಯಲ್ಲಿ ರೈತರಿಗೆ ದಿನನಿತ್ಯ ಮೋಸವಾಗುತ್ತಿರುವುದು, 2024-25ರ ಅತಿವೃಷ್ಟಿಗೆ ಪರಿಹಾರ ಬಾರದೇ ಇರುವುದು, ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದಿರುವುದು, ಫಸಲ್ ಭಿಮಾ ಯೋಜನೆಯಡಿ ರೈತರ ಖಾತೆಗೆ ಜಮಾ ಆಗಬೇಕಿದ್ದ ವಿಮೆ ಹಣ ಬೇರೆಯವರ ಖಾತೆಗೆ ಜಮೆಯಾಗಿರುವ ಬಗ್ಗೆ ಈಗಾಗಲೇ ಸಿರವಾರ, ಮಾನ್ವಿ ಹಾಗೂ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ, ತನಿಖೆ ನಿಧಾನಗತಿಯಲ್ಲಿ ಸಾಗುತ್ತಿದೆ. ಇದರಿಂದ ನೈಜ ರೈತರಿಗೆ ಅನ್ಯಾಯವಾಗುತ್ತಿದೆ. ಕೂಡಲೇ ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮವಹಿಸಬೇಕು ಎಂದು ಆಗ್ರಹಿಸಿದರು.

Advertisements

ಮೈಕ್ರೋ ಫೈನಾನ್ಸ್ ಸಾಲ ವಿತರಣೆ ನೆಪದಲ್ಲಿ ಬಡವರ ಮೇಲೆ ದೌರ್ಜನ್ಯ ಎಸಗುತ್ತಿದೆ. ಇದಕ್ಕೆ ಹಲವು ಅಮಾಯಕ ಜೀವಗಳು ಬಲಿಯಾಗಿವೆ. ಜಿಲ್ಲೆಯಲ್ಲಿ ಗ್ರಾಮೀಣ ಭಾಗಗಳಲ್ಲಿ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ರೈತರು ತಮ್ಮ ಉತ್ಪನ್ನಗಳನ್ನು ಮಾರಾಟಕ್ಕೆ ತರಲು ಸಮಸ್ಯೆಯಾಗುತ್ತಿದೆ ಕೂಡಲೇ ರಸ್ತೆ ದುರಸ್ತಿಗೆ ಮುಂದಾಗಬೇಕು. ತುಂಗಭದ್ರಾ ಎಡದಂಡೆ ನಾಲೆಯ ಮೈಲ್ 47, 69, 90 ಹಾಗೂ 104 ರಲ್ಲಿ ನಿಗಧಿತ ಗೇಜ್ ಕಾಯ್ದುಕೊಂಡು ಏಪ್ರಿಲ್ 10 ರವರೆಗೆ ನೀರು ಪೂರೈಸಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ?: ರಾಯಚೂರು | ಕೂಲಿ ಕಾರ್ಮಿಕರ ಅಹೋರಾತ್ರಿ ಗಣರಾಜೋತ್ಸವ

ಈ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷ ಚಾಮರಸ ಮಾಲೀಪಾಟೀಲ್, ಜಿಲ್ಲಾಧ್ಯಕ್ಷ ಜಾನ್‌ವೆಸ್ಲಿ, ಪ್ರಮುಖರಾದ ಪ್ರಭಾಕರ್ ಪಾಟೀಲ್, ವೀರೇಶ ಪಾಟೀಲ್, ಬೂದಯ್ಯ ಸ್ವಾಮಿ, ದೇವರಾಜ್ ನಾಯಕ, ನಿಂಗಪ್ಪ, ಹಾಜಿ ಮಸ್ತಾನ್, ಶಂಕ್ರಪ್ಪಗೌಡ, ಬಸನಗೌಡ ಮಾಲೀಪಾಟೀಲ್, ಯಂಕಪ್ಪ ಕಾರೋಬಾರಿ, ಸೂಗಯ್ಯ ಸ್ವಾಮಿ ಸೇರಿದಂತೆ ಇತರರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X