ಮಂಗಳೂರು | ಶಿಕ್ಷಿತರ ಪ್ರದೇಶಗಳಲ್ಲಿ ಮತದಾನ ಕುಂಠಿತಕ್ಕೆ ಬುದ್ಧಿವಂತಿಕೆ ಕೊರತೆ ಕಾರಣ: ನ್ಯಾ. ಮಲ್ಲಿಕಾರ್ಜುನ ಸ್ವಾಮಿ

Date:

Advertisements

ಚುನಾವಣೆಗಳಲ್ಲಿ ಶಿಕ್ಷಿತರು ಮತ್ತು ಶ್ರೀಮಂತರ ಪ್ರದೇಶಗಳಲ್ಲಿಯೇ ಕಡಿಮೆ ಪ್ರಮಾಣದಲ್ಲಿ ಮತದಾನ ನಡೆಯುತ್ತಿರುವುದು ಅವರಲ್ಲಿ ಪ್ರಜ್ಞೆ ಮತ್ತು ಬುದ್ಧಿವಂತಿಕೆ ಕೊರತೆಯ ದ್ಯೋತಕವಾಗಿದೆ ಎಂದು ಮಂಗಳೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಿನ್ನೆ (ಜ.25) ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, “ಮತದಾನ ಮಾಡಲು ಚುನಾವಣಾ ಆಯೋಗವು ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಿದ್ದರೂ ಮತದಾನ ಮಾಡಲು ಮುಂದೆ ಬಾರದಿರುವುದು ಸಂವಿಧಾನಕ್ಕೆ ಮಾಡುವ ಅಗೌರವವಾಗಿದೆ. ಬಡವರು ಮತ್ತು ಅಶಿಕ್ಷಿತರ ಪ್ರದೇಶಗಳಲ್ಲಿ ಮತದಾನ ಹೆಚ್ಚಿನ ಪ್ರಮಾಣ ನಡೆಯುತ್ತದೆ. ಆದರೆ, ಶಿಕ್ಷಿತರು ಮತ್ತು ಸಿರಿವಂತರ ಪ್ರದೇಶಗಳಲ್ಲಿ ಮತದಾನಕ್ಕೆ ಅಂತಹ ಉತ್ಸಾಹ ಇರುವುದಿಲ್ಲ. ಕೇವಲ ಶಿಕ್ಷಣ ಮಾತ್ರ ಇದ್ದರೆ ಸಾಲದು, ಪ್ರಜ್ಞೆ ಮತ್ತು ಬುದ್ಧಿವಂತಿಕೆ ಇರಬೇಕು” ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, “ಸವ೯ರಿಗೂ ಸಮಾನ ಮತದಾನದ ಹಕ್ಕನ್ನು ನೀಡಿದ ಜಗತ್ತಿನ ಮೊದಲ ದೇಶ ಭಾರತ. ಪ್ರಜಾಪ್ರಭುತ್ವದ ಹಳೆಯ ದೇಶಗಳಲ್ಲಿ ಉಳ್ಳವರಿಗೆ ಮಾತ್ರ ಸೀಮಿತವಾಗಿದ್ದ ಮತದಾನದ ಹಕ್ಕು, ಜನಸಾಮಾನ್ಯರಿಗೆ ಸಿಗಲು ಅಲ್ಲಿ ಸಾಕಷ್ಟು ಹೋರಾಟಗಳು ನಡೆಯಬೇಕಾಯಿತು. ಆದರೆ ಭಾರತದಲ್ಲಿ ಸಂವಿಧಾನ ಜಾರಿಗೆ ಬಂದ ಆರಂಭದಲ್ಲಿಯೇ ಎಲ್ಲರಿಗೂ ಮತದಾನದ ಹಕ್ಕು ದೊರೆಯಿತು. ಇತ್ತೀಚೆಗೆ ಜಿಲ್ಲೆಯಲ್ಲಿ ನಡೆದ ಲೋಕಸಭಾ ಚುನಾವಣೆ ಅಚ್ಚುಕಟ್ಟಾಗಿ ನಿವ೯ಹಿಸಲಾಗಿದೆ. ಮತದಾರರ ನೋಂದಣಿಗೆ ನಾಲ್ಕು ಅಹ೯ತಾ ದಿನಾಂಕ ನಿಗದಿಪಡಿಸಲಾಗಿದೆ. ಇದನ್ನು ಉಪಯೋಗಿಸಿ ಪ್ರತಿಯೊಬ್ಬರು ನೋಂದಣಿ ಮಾಡಬೇಕು” ಎಂದರು.

Advertisements
WhatsApp Image 2025 01 25 at 6.00.44 PM

ಕಾರ್ಯಕ್ರಮದಲ್ಲಿ ಹೊಸದಾಗಿ ಮತದಾರರ ಪಟ್ಟಿಗೆ ನೋಂದಾಯಿಸಿದ ಮತದಾರರಿಗೆ ಗುರುತಿನ ಚೀಟಿಯನ್ನು ವಿತರಿಸಲಾಯಿತು. ಬಳಿಕ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಈ ಸುದ್ದಿ ಓದಿದ್ದೀರಾ?: ಮಂಗಳೂರು | ವಾರಕ್ಕೆ 90 ಗಂಟೆ ಕೆಲಸ ಅವೈಜ್ಞಾನಿಕ ಹಾಗೂ ಅಮಾನವೀಯ; ಸೈಯ್ಯದ್ ಮುಜೀಬ್

ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾಯ೯ನಿವ೯ಹಣಾಧಿಕಾರಿ ಡಾ. ಆನಂದ್ ಅವರು ಮತದಾರರ ಪ್ರತಿಜ್ಞಾವಿಧಿ ಬೋಧಿಸಿದರು. ಜಿಲ್ಲಾ ವಾರ್ತಾಧಿಕಾರಿ ಬಿ ಎ ಖಾದರ್ ಶಾ,‌ ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಚುನಾವಣಾ ತಹಶೀಲ್ದಾರ್ ದಯಾನಂದ, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಮಂಜುಳಾ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X