ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ಸೂಕ್ತ ತನಿಖೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಈ ಕುರಿತು ಮಂಗಳವಾರ ಟಿಪ್ಪಣಿ ಹೊರಡಿಸಿರುವ ಅವರು, “ದಿನಾಂಕ 23/7/2022 ಮತ್ತು 24/7/2022 ರಂದು ನಡೆದ ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಭ್ರಷ್ಟಾಚಾರ ಅಕ್ರಮಗಳು ನಡೆದಿರುವುದಾಗಿ ವ್ಯಾಪಕವಾದ ದೂರುಗಳು ಸಲ್ಲಿಕೆಯಾಗಿವೆ. ಈ ಬಗ್ಗೆ ಕೂಡಲೇ ನಿರ್ದಾಕ್ಷಿಣ್ಯವಾಗಿ ಇಲಾಖೆ ತನಿಖೆ ತಪ್ಪಿತಸ್ಥರ ವಿವರಗಳೊಂದಿಗೆ 10 ದಿನದಲ್ಲಿ ವರದಿ ಸಲ್ಲಿಸಬೇಕು” ಎಂದು ಸೂಚಿಸಿದ್ದಾರೆ.
