ತುಮಕೂರು | ಅಮಾನಿಕೆರೆಯಲ್ಲಿ 25 ಕೋಟಿ ರೂ. ವೆಚ್ಚದ ಗಾಜಿನ ಸೇತುವೆ ನಿರ್ಮಾಣ : ಗೃಹ ಸಚಿವ ಪರಮೇಶ್ವರ್

Date:

Advertisements

 ಪ್ರವಾಸೋದ್ಯಮ ಅಭಿವೃದ್ಧಿಗಾಗಿ ನಗರದ ಅಮಾನಿಕೆರೆಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಗ್ಲಾಸ್ ಬ್ರಿಡ್ಜ್(ಗಾಜಿನ ಸೇತುವೆ) ನಿರ್ಮಾಣಕ್ಕೆ ನೀಲ ನಕ್ಷೆಯನ್ನು ಸಿದ್ಧಪಡಿಸಲಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ತಿಳಿಸಿದರು. 

 ತುಮಕೂರು ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ ತುಮಕೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು 200 ಕೋಟಿ ರೂ.ಗಳ ಅನುದಾನಕ್ಕೆ ಸರ್ಕಾರ ಅನುಮೋದನೆ ನೀಡಿದ್ದು, ಈ ಅನುದಾನದಲ್ಲಿ 25 ಕೋಟಿ ರೂ.ಗಳನ್ನು ಬಳಸಿಕೊಂಡು ಗಾಜಿನ ಸೇತುವೆಯನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು. 

1000957887

ಸ್ಮಾರ್ಟ್ ಸಿಟಿ ಯೋಜನೆಯಡಿ ಮಹಾನಗರ ಪಾಲಿಕೆ ವ್ಯಾಪ್ತಿಯ 5 ವಾರ್ಡುಗಳನ್ನು ಈಗಾಗಲೇ ಅಭಿವೃದ್ಧಿಪಡಿಸಲಾಗಿದ್ದು, ಉಳಿದ 30 ವಾರ್ಡುಗಳ ಅಭಿವೃದ್ಧಿಗಾಗಿ 200 ಕೋಟಿ ರೂ.ಗಳನ್ನು ವ್ಯಯಿಸಲಾಗುವುದು. ಈ ಅನುದಾನವನ್ನು ಬಳಸಿಕೊಂಡು ಬೆಂಗಳೂರಿನ ಲಾಲ್‌ಬಾಗ್ ಮಾದರಿಯಲ್ಲಿ ನಗರದ ಅಕ್ಕ-ತಂಗಿ ಕೆರೆ ಅಭಿವೃದ್ಧಿ, 137 ಕೋಟಿ ರೂ. ವೆಚ್ಚದಲ್ಲಿ 202 ರಸ್ತೆ ನಿರ್ಮಾಣ, ಅಮಾನಿಕೆರೆಯನ್ನು ಸ್ವಚ್ಛಗೊಳಿಸಿ ಮಕ್ಕಳಿಗಾಗಿ ಸಾಹಸ ಕ್ರೀಡೆಗೆ ಅವಕಾಶ ನೀಡುವುದರೊಂದಿಗೆ ಐಲ್ಯಾಂಡ್, ಬರ್ಡ್ ಪಾರ್ಕ್ ನಿರ್ಮಾಣ, 18 ಉದ್ಯಾನವನಗಳ ಅಭಿವೃದ್ಧಿ, ತಲಾ 6 ಕೋಟಿ ರೂ. ವೆಚ್ಚದಲ್ಲಿ ನಗರದ ಖಾಸಗಿ ಬಸ್ ನಿಲ್ದಾಣದ ಆಧುನೀಕರಣ ಹಾಗೂ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದ ಕಟ್ಟಡವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.

Advertisements

  ತುಮಕೂರು  ನಗರದ ಒಳಚರಂಡಿ ವ್ಯವಸ್ಥೆಗಾಗಿ ಪ್ರತ್ಯೇಕವಾಗಿ 50ಕೋಟಿ ರೂ.ಗಳನ್ನು ಮೀಸಲಿಡಲಾಗಿದೆಯಲ್ಲದೆ ಕರ್ನಾಟಕ ಗಣಿಬಾಧಿತ ಪರಿಸರದ ಪುನಃಶ್ಚೇತನ ನಿಧಿಯಡಿ 131 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾಸ್ಪತ್ರೆ ಕಟ್ಟಡವನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಗುವುದು ಎಂದು ತಿಳಿಸಿದರು.

 ನಗರದಲ್ಲಿ ವಧಾಗಾರ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನಾಗರಿಕರ ಆರೋಗ್ಯದ ಹಿತದೃಷ್ಟಿಯಿಂದ ನೈರ್ಮಲ್ಯತೆ(ಹೈಜೆನಿಕ್)ಯಿಂದ ಕೂಡಿದ ಮಾಂಸ ಮಾರಾಟ ಮಾರುಕಟ್ಟೆಯನ್ನು ನಿರ್ಮಿಸಲು ಪಾಲಿಕೆ ಮುಂದಾಗಿದೆ ಎಂದು ಹೇಳಿದರು.

 ರಾಜ್ಯದ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತುಮಕೂರಿನ ಆಸು-ಪಾಸಿನಲ್ಲಿ ನಿರ್ಮಿಸುವಂತೆ ಐಟಿಬಿಟಿ ಸಚಿವರಿಗೆ ಮನವಿ ಮಾಡಲಾಗಿದ್ದು, ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಾಗಲೇ ಜಿಲ್ಲೆಯ ವಸಂತ ನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಹೊಂದಿಕೊಂಡತೆ ರಾಷ್ಟ್ರೀಯ ಹೆದ್ದಾರಿ 48ರ ಸಮೀಪ 3,000 ಎಕರೆ ಹಾಗೂ ಶಿರಾ ತಾಲ್ಲೂಕಿನ ಸೀಬಿ ದೇವಸ್ಥಾನದ ಸಮೀಪ 5000 ಎಕರೆ ಭೂಮಿಯನ್ನು ಗುರುತಿಸಲಾಗಿದೆ. ಜಿಲ್ಲೆಗೆ ಅಂತಾರಾಷ್ಟ್ರೀಯ  ವಿಮಾನ ನಿಲ್ದಾಣವನ್ನು ಮಂಜೂರಾತಿ ನೀಡಬೇಕೆಂದು ಜಿಲ್ಲೆಯ ಎಲ್ಲಾ ಶಾಸಕರು, ಸಂಸದರು ಪಕ್ಷಾತೀತವಾಗಿ ಸರ್ಕಾರ ಮೇಲೆ ಒತ್ತಾಯ ತರಲಾಗುವುದು ಎಂದು ಹೇಳಿದರು.

1000957863

 ಜಿಲ್ಲೆಯಲ್ಲಿ ಹೆಲಿಕಾಪ್ಟರ್ ತಯಾರಿಕಾ ಘಟಕ ಕಾರ್ಯನಿರ್ವಹಿಸುತ್ತಿರುವ ಗುರುತಿಗಾಗಿ ನಗರದ ಹೃದಯಭಾಗದ ಟೌನ್‌ಹಾಲ್ ಪಕ್ಕದಲ್ಲಿ ಹೆಲಿಕಾಪ್ಟರ್ ಮಾದರಿಯನ್ನು ಇರಿಸಲಾಗುವುದು. ಪಾಲಿಕೆ ಆವರಣದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿ ನಿರ್ಮಿಸುವ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದ್ದು, ಸರ್ಕಾರದಿಂದ ಅನುಮತಿ ದೊರೆತ ನಂತರ ಪುತ್ಥಳಿಯನ್ನು ಸ್ಥಾಪಿಸಲಾಗುವುದು. ಪುತ್ಥಳಿಯನ್ನು ಸ್ಥಾಪನೆಗೆ ಶ್ರೀ ಸಿದ್ಧಾರ್ಥ ಸಂಸ್ಥೆಯಿಂದ 36 ಲಕ್ಷ ರೂ.ಗಳನ್ನು ಕೊಡುಗೆಯಾಗಿ ನೀಡಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ 2.50 ಲಕ್ಷ ಹುದ್ದೆಗಳು ಖಾಲಿಯಿದ್ದು, ಹಂತ-ಹಂತವಾಗಿ ಖಾಲಿ ಹುದ್ದೆಗಳ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದರಲ್ಲದೆ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಹಾಗೂ ಇಂಜಿನಿಯರಿAಗ್ ಕಾಲೇಜು ಮಂಜೂರು ಮಾಡುವ ಕುರಿತು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಲಾಗಿದ್ದು, ಶೀಘ್ರದಲ್ಲೇ ಮಂಜೂರಾತಿಯ ಹಸಿರು ನಿಶಾನೆ ದೊರೆಯಲಿದೆ ಎಂದರು.

ಟೌನ್‌ಹಾಲ್ ಸರ್ಕಲ್ ಸಮೀಪದ ರಸ್ತೆ ಬಳಿ ಇರುವ ದರ್ಗಾ ಮತ್ತು ಮಂದಿರ ತೆರವುಗೊಳಿಸುವ ಬಗ್ಗೆ ಯಾವುದೇ ಪ್ರಸ್ತಾವನೆ ನಮ್ಮ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದರು.

1000957881

 ಮೈಕ್ರೋ ಫೈನಾನ್ಸ್ ಸಮಸ್ಯೆ ಕುರಿತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದ್ದು, ಮೈಕ್ರೋಫೈನಾನ್ಸ್ಗಳಿಗೆ ಸಂಬಂಧಿಸಿದಂತೆ ಈಗಿರುವ ಕಾನೂನನ್ನು ಇನ್ನಷ್ಟು ಬಲಪಡಿಸಲು ಕ್ರಮ ಕೈಗೊಳ್ಳಲಾಗುವುದು. ಮೈಕ್ರೋ ಫೈನಾನ್ಸ್ಗಳು ಆರ್‌ಬಿಐ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಕಾನೂನು ಜಾರಿಗೆ ತರಲಾಗುವುದು. ಈಗಾಗಲೇ ರಾಜ್ಯದಲ್ಲಿ ಮೈಕ್ರೋಫೈನಾನ್ಸ್ನಿಂದ ಸಾಲ ಪಡೆದು ತೀರಿಸಲಾಗದೆ 7 ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿರುವ ಹಿನ್ನೆಲೆಯಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳು ಸಾಲದ ಹಣ ವಸೂಲಿ ಮಾಡಲು ಬಡವರಿಗೆ ತೊಂದರೆ ನೀಡಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅನಧಿಕೃತ ಮೈಕ್ರೋಫೈನಾನ್ಸ್ ಹಾವಳಿಯನ್ನು ಮಟ್ಟ ಹಾಕಲು ಜಿಲ್ಲಾಧಿಕಾರಿಗಳಿಗೆ

 ಹೆಚ್ಚಿನ ಅಧಿಕಾರ ನೀಡಲಾಗುವುದು ಎಂದು ಹೇಳಿದರು.

 ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲಿ ರಾಜ್ಯದ ಪಾಲು ಹೆಚ್ಚಿದ್ದರೂ ಕೇಂದ್ರವು ರಾಜ್ಯದ ಪಾಲನ್ನು ನೀಡದೆ ತಾರತಮ್ಯ ಮಾಡುತ್ತಿದೆ. ಈ ಬಾರಿ ಕೇಂದ್ರದ ಆಯ-ವ್ಯಯದಲ್ಲಿ ರಾಜ್ಯದ ಪಾಲಿನ ತೆರಿಗೆ ಹಣ ನೀಡುವ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗಾಗಿ 5300 ಕೋಟಿ ರೂ. ಬಿಡುಗಡೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದರು.   

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X