ಬೀದರ್‌ | ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಸಹಕರಿಸಿ; ಪ್ರಭು ಚವ್ಹಾಣ ಸೂಚನೆ

Date:

Advertisements
  • ಔರಾದ(ಬಿ) ತಾಲೂಕು ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆ
  • ಸರ್ಕಾರಿ ಕಚೇರಿಗಳು ಜನಸ್ನೇಹಿಯಾಗಿರುವಂತೆ ನಿರ್ದೇಶನ

ಕ್ಷೇತ್ರದ ಜನತೆ ನಾಲ್ಕನೇ ಅವಧಿಗೆ ಶಾಸಕನಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯ ಕೆಲಸಕ್ಕೆ ಅಧಿಕಾರಿಗಳು ಸಹಕರಿಸಬೇಕು ಎಂದು ಶಾಸಕ ಪ್ರಭು ಬಿ ಚವ್ಹಾಣ ಹೇಳಿದರು.

ಬೀದರ್ ಜಿಲ್ಲೆ ಔರಾದ(ಬಿ) ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಭಿವೃದ್ಧಿ ಕೆಲಸಗಳು ಸರಿಯಾಗಿ ನಡೆಯುವಲ್ಲಿ ಅಧಿಕಾರಿಗಳ ಪಾತ್ರ ಮಹತ್ತರವಾಗಿರುತ್ತದೆ. ಎಲ್ಲ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಬೇಕು. ಕೆಲವು ಕಚೇರಿಗಳಲ್ಲಿ ಸಿಬ್ಬಂದಿಯ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಅಂತವರನ್ನು ತೆಗೆದು ಇಲಾಖೆ ಕಚೇರಿಗಳನ್ನು ಜನಸ್ನೇಹಿಯಾಗಿಸಬೇಕು ಎಂದು ಸೂಚಿಸಿದರು.

Advertisements

ಮುಂಗಾರು ಹಂಗಾಮು ಆರಂಭವಾಗಲಿದ್ದು, ರೈತರು ಬಿತ್ತನೆ ಕೆಲಸಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ರೈತರಿಗೆ ಸಕಾಲಕ್ಕೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಪೂರೈಸುವ ಮೂಲಕ ಬಿತ್ತನೆ ಕೆಲಸ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಬಿತ್ತನೆ ಬೀಜ ಗಡಿ ರಾಜ್ಯಗಳಿಗೆ ಸಾಗಾಟವಾಗುವುದಕ್ಕೆ ಕಡಿವಾಣ ಹಾಕಬೇಕು ಎಂದು ನಿರ್ದೇಶನ ನೀಡಿದರು.

ರೈತರಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಕೊರತೆಯಾಗದ ರೀತಿಯಲ್ಲಿ ವ್ಯವಸ್ಥೆ ಮಾಡಿಕೊಳ್ಳಬೇಕು. ಎರಡು ತಿಂಗಳ ಹಿಂದೆ ಸುರಿದ ಅಕಾಲಿಕ‌ ಮಳೆಯಿಂದ ಬೆಳೆ ಹಾನಿಯಾದ ಎಲ್ಲ ರೈತರಿಗೆ ಶೀಘ್ರ ಪರಿಹಾರಧನ ಬಿಡುಗಡೆ ಮಾಡಲು ಕ್ರಮ ವಹಿಸಬೇಕು ಎಂದು ತಿಳಿಸಿದರು.

ಇಲಾಖೆಯಿಂದ ಎಲ್ಲ ರೀತಿಯ ತಯಾರಿಗಳನ್ನು ಮಾಡಿಕೊಂಡಿದ್ದು, ರೈತರ ಬೇಡಿಕೆಗೆ ಅನುಸಾರ ಬಿತ್ತನೆ ಬೀಜ ಮತ್ತು ರಸಗೊಬ್ಬರ ಲಭ್ಯವಿದೆ ಎಂದು ಕೃಷಿ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.

ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ನಡೆಸಿ, ಆಸ್ಪತ್ರೆಯಲ್ಲಿನ ಕೊರತೆಯ ಬಗ್ಗೆ ಇನ್ನೂ ದೂರುಗಳು ಬರುತ್ತಿದ್ದು, ಇವುಗಳನ್ನು ಸರಿಪಡಿಸಿ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಕಲ್ಪಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿಗೆ ನಿರ್ದೇಶನ ನೀಡಿದರು.

ಕ್ಷೇತ್ರದಲ್ಲಿರುವ ಎಲ್ಲ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಆಟದ ಮೈದಾನ, ಶೌಚಾಲಯಗಳ ನಿರ್ಮಾಣ ಮಾಡುವ ಬಗ್ಗೆ ಹಿಂದೆ ನಿರ್ದೇಶನ ನೀಡಿದ್ದೆ, ಇದನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.

ಶಾಲಾ ಕಾಲೇಜುಗಳು, ಅಂಗನವಾಡಿ ಕೇಂದ್ರಗಳು ಒಳಗೊಂಡು ಎಲ್ಲ ಸರ್ಕಾರಿ ಕಚೇರಿ ಆವರಣಗಳಲ್ಲಿ ಸಸಿಗಳನ್ನು ನೆಡುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ದಣಿವರಿಯದ ಜೀವಗಳ ಸ್ವಾಭಿಮಾನಿ ಬದುಕಿಗೆ ‘ಲಿಂಬು ಸೋಡಾ’ ಆಸರೆ

ಕುಡಿಯುವ ನೀರು ಪೂರೈಕೆ ಮತ್ತು ಸಣ್ಣ ನೀರಾವರಿ ಒಳಗೊಂಡು ಎಲ್ಲ ಇಲಾಖೆಗಳಲ್ಲಿ ಚಾಲ್ತಿಯಲ್ಲಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಆರಂಭವಾಗದಿರುವ ಕೆಲಸಗಳನ್ನು ಶೀಘ್ರ ಆರಂಭಿಸಬೇಕು. ಯಾವುದೇ ಕಾರಣಕ್ಕೂ ಅಭಿವೃದ್ಧಿ ಕೆಲಸಗಳು ಕುಂಠಿತವಾಗಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಜಗನ್ನಾಥ ಮೂರ್ತಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಕುಮಾರ ಘಾಟೆ, ತಹಶಿಲ್ದಾರ್‌ ಮಲ್ಲಿಕಾರ್ಜುನ, ನಾಗರಾಜ ಹಾಗೂ ನಾನಾ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X