ಬಳ್ಳಾರಿ | ಕಣವಿ ತಿಮ್ಮಲಾಪುರ ಗ್ರಾಮ ವ್ಯಾಪ್ತಿಯಲ್ಲಿ ಬಸ್ ಡಿಪೊ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

Date:

Advertisements

ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ದೇವಸಮುದ್ರ ಕ್ರಾಸ್ ಬಳಿಯ ಕಣವಿ ತಿಮ್ಮಲಾಪುರ ಗ್ರಾಮ ವ್ಯಾಪ್ತಿಯಲ್ಲಿ ಬಸ್ ಡಿಪೊ ನಿರ್ಮಿಸುವ ಸಲುವಾಗಿ ಶಾಸಕ ಜೆ ಎನ್ ಗಣೇಶ್ ಗ್ರಾಮದ ಸರ್ವೇ ನಂಬರ್ 254ರ 5 ಎಕರೆ ಭೂಮಿಯನ್ನು ಪರಿಶೀಲಿಸಿದರು.

“ತಾಲೂಕು ಕೇಂದ್ರವಾದ ಪಟ್ಟಣಕ್ಕೆ ಬಸ್ ಡಿಪೊ ತುಂಬಾ ಅಗತ್ಯವಿದೆ. ಕೆಕೆಆರ್‌ಡಿಬಿ ಇಲ್ಲವೆ ಜಿಲ್ಲಾ ಖನಿಜ ನಿಧಿಯಡಿ ಅನುದಾನ ಪಡೆಯಲು ಪ್ರಯತ್ನಿಸುವೆ. ಈ ನಿಟ್ಟಿನಲ್ಲಿ ಕೂಡಲೇ ಅಂದಾಜು ಪಟ್ಟಿಯನ್ನು ಸಿದ್ಧಪಡಿಸಿ” ಎಂದು ಸಾರಿಗೆ ಸಂಸ್ಥೆ ಅಧಿಕಾರಿಗಳಿಗೆ ಶಾಸಕ ಸೂಚಿಸಿದರು.

“ಬಸ್ ಡಿಪೊ ನಿರ್ಮಾಣಕ್ಕೆ ಅಂದಾಜು ₹8 ಕೋಟಿ ಅಗತ್ಯವಿದೆ. ಇದರಲ್ಲಿ ಶೆಡ್, ಯಾಂತ್ರಿಕ ವಿಭಾಗ, ಕಚೇರಿ ಕಟ್ಟಡ, ವಾಷಿಂಗ್, ಪೆಟ್ರೋಲ್ ಬಂಕ್ ಸೇರಿದಂತೆ ಅಗತ್ಯ ಕಟ್ಟಡ ನಿರ್ಮಿಸಬೇಕಾಗುತ್ತದೆ” ಎಂದು ಕುರುಗೋಡು ಡಿಪೊ ವ್ಯವಸ್ಥಾಪಕ ಚಂದ್ರಶೇಖರ್ ಅವರು ಶಾಸಕರಿಗೆ ಪ್ರಾಥಮಿಕ ಮಾಹಿತಿ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ? ರಾಮನಗರ | ಈ ದೇಶದ ರಾಷ್ಟ್ರೀಯ ಗ್ರಂಥ, ಪ್ರಜಾಪ್ರಭುತ್ವದ ಆತ್ಮ ಸಂವಿಧಾನ: ಸಚಿವ ರಾಮಲಿಂಗಾರೆಡ್ಡಿ

ಈ ವೇಳೆ ತಹಶೀಲ್ದಾರ್ ಎಸ್ ಶಿವರಾಜ, ಕಂದಾಯ ನಿರೀಕ್ಷಕ ವೈ ಎಂ ಜಗದೀಶ, ಗ್ರಾಮ ಲೆಕ್ಕಾಧಿಕಾರಿ ಮಂಜುನಾಥ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ ಷಣ್ಮುಖಪ್ಪ, ಮೆಟ್ರಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನೇಣ್ಕಿ ಗಿರೀಶ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X