ಗದಗ | ಸಂವಿಧಾನ ರಕ್ಷಣೆ ಮಾಡಬೇಕು: ಹಸನ ತಟಗಾರ

Date:

Advertisements

“ಸಂವಿಧಾನಕ್ಕೆ ದಕ್ಕೆ ತರುತ್ತಿರುವ ಮೂಲಭೂತವಾದಿಗಳಿಂದ ಸಂವಿಧಾನ ರಕ್ಷಣೆ ಮಾಡಬೇಕಿದೆ” ಎಂದು ಅಂಜುಮನ್ ಇಸ್ಲಾಂ ಕಮೀಟಿ ಅಧ್ಯಕ್ಷ ಹಸನಸಾಬ ತಟಗಾರ ಹೇಳಿದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಅಂಜುಮನ್ ಉರ್ದು ಕಾನ್ವೆಂಟ್ ಸ್ಕೂಲ್ ನಲ್ಲಿ 76 ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೇರವೇರಿಸಿ ಅವರು ಮಾತನಾಡಿದರು.

“ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಪ್ರಪಂಚದ ಬೇರೆ ಬೇರೆ ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ, ಭಾರತಕ್ಕೆ ಅದ್ಭುತವಾದ ಸಂವಿಧಾನ ರಚನೆ ಮಾಡಿಕೊಟ್ಟಿದ್ದಾರೆ. ಪ್ರಜಾಪ್ರಭುತ್ವವನ್ನು ಧರ್ಮ ಎಂದುಕೊಂಡು ಸಂವಿಧಾನವನ್ನು ಗೌರವಿಸಬೇಕು. ಸಂವಿಧಾನದಲ್ಲಿ ಅಡಕವಾಗಿರುವ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಪಾಲನೆ ಮಾಡಬೇಕು, ಮೂಲಭೂತದಿಗಳಿಂದ ಸಂವಿಧಾನ ರಕ್ಷಣೆ ಮಾಡಬೇಕಿದೆ” ಎಂದರು.

Advertisements

ಅಂಜುಮನ್ ಇಸ್ಲಾಂ ಕಮೀಟಿ ಮಾಜಿ ಕಾರ್ಯದರ್ಶಿಗಳಾದ ದಾವಲಸಾಬ ತಾಳಿಕೋಟಿ, ಮಾಸುಮಲಿ ಮದಗಾರ ಮಾತನಾಡಿ, “ದೇಶದಲ್ಲಿ ಜಾತಿ–ಧರ್ಮದ ಹೆಸರಿನಲ್ಲಿ ತಾರತಮ್ಯ ನೀತಿಯನ್ನು ಅನುಸರಿಸುವ ಮೂಲಕ ಸಂವಿಧಾನ ಮೂಲ ಆಶಯಗಳಿಗೆ ಧಕ್ಕೆ ತರಲಾಗುತ್ತಿದೆ. ಸಂವಿಧಾನದಲ್ಲಿ ಜಾತ್ಯತೀತ ರಾಷ್ಟ್ರ ಎಂಬ ಉಲ್ಲೇಖವಿದೆ. ಆದರೆ, ಇಂದು ದೇಶದಲ್ಲಿ ಇದಕ್ಕೆ ವಿರುದ್ಧವಾಗಿ ಧರ್ಮದ ಆಧಾರದಲ್ಲಿ ಆಡಳಿತ ನಡೆಯುತ್ತಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜಾತಿ–ಧರ್ಮಕ್ಕಿಂತ ಸಂವಿಧಾನವೇ ಮುಖ್ಯ. ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವ ಎಂಬ ಸಂವಿಧಾನದ ಮೂಲ ಆಶಯಗಳನ್ನು ರಕ್ಷಣೆ ಮಾಡಬೇಕಿದೆ. ಸಂವಿಧಾನದ ಮೌಲ್ಯಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದರು.

ಅಂಜುಮನ್ ಇಸ್ಲಾಂ ಕಮೀಟಿ ಕಾರ್ಯದರ್ಶಿ ಫಯಾಜ್ ತೋಟದ, ಭಾಷಾ ಮುದಗಲ್ಲ ಮಾತನಾಡಿದರು. ಜಾಮೀಯ ಮಸೀದಿ ಮೌಲಾನರಾದ ಶಹೀದ್ ರಜಾ ಸಾನಿಧ್ಯವನ್ನು ವಹಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಶಾಲಾ ವಿಧ್ಯಾರ್ಥಿಗಳಿಂದ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

ಕಾರ್ಯಕ್ರಮದಲ್ಲಿ ಮುಖಂಡರು ನಾಸೀರ ಸುರಪುರ, ದಾದೇಸಾಬ ಹಣಗಿ, ಇಮ್ರಾನ ಅತ್ತಾರ, ಮುಸ್ತಾಕ ಅಹ್ಮದ ಅಕ್ಕಿ, ಆರೀಫ್ ಮನಿಯಾರ, ದಾವಲಸಾಬ ಡಾಲಾಯತ, ಖಾಸಿಂಸಾಬ ಮುಚ್ಚಾಲಿ, ಶಾಮೀದ ಮಾಲ್ದಾರ, ಅಬ್ಬಾಸಲಿ ನಿಶಾನದಾರ ಮುಖ್ಯ ಶಿಕ್ಷಕಿ ಮಜನಬಿ ಹಣಗಿ, ಫಾತೀಮಾ ಕಡ್ಲಿಮಟ್ಟಿ ಸೇರಿದಂತೆ ಶಾಲಾ ಮಕ್ಕಳು,  ಪಾಲಕರು ಭಾಗವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X