ಪೊಲೀಸರ ರಕ್ಷಣೆಯಲ್ಲೇ ಮೈಕ್ರೊ ಫೈನಾನ್ಸ್ ಕಂಪನಿಗಳಿಂದ ಜನರಿಗೆ ತೊಂದರೆ: ಪ್ರಲ್ಹಾದ ಜೋಶಿ

Date:

Advertisements

ಫೈನಾನ್ಸ್ ಕಂಪನಿಗಳು ಸಾಲಗಾರರಿಗೆ ಪೊಲೀಸರ ರಕ್ಷಣೆ ಪಡೆದೇ ತೊಂದರೆ ಕೊಡುತ್ತಿವೆ ಎಂಬ ಮಾಹಿತಿ ಇದೆ. ಆದರೆ, ನಾನು ಪೊಲೀಸರ ಮೇಲೆ ಆರೋಪ ಮಾಡುವುದಿಲ್ಲ. ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿರುವುದರಿಂದಲೇ ಇದೆಲ್ಲವೂ ಆಗುತ್ತಿದೆ. ಜನರಿಗೆ ಕಿರುಕುಳ ನೀಡುವ ಪ್ರಕರಣಗಳು ನಡೆಯುತ್ತಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ದೂರಿದರು.

ನವದೆಹಲಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ನೋಂದಾಯಿತ ಮೈಕ್ರೊ ಫೈನಾನ್ಸ್ ಕಂಪನಿಗಳು ಮಾತ್ರವೇ ಆರ್‌ಬಿಐ ಮಾರ್ಗಸೂಚಿಗೆ ಒಳಪಡುತ್ತವೆ ಎಂಬುದನ್ನು ರಾಜ್ಯ ಸರ್ಕಾರ ಗಮನಿಸಬೇಕು. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಮುಖ್ಯಮಂತ್ರಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ನಿಯಮಗಳನ್ನು ಜಾರಿಗೆ ತರಬೇಕು’ ಎಂದು ಒತ್ತಾಯಿಸಿದರು.

‘ರಾಜ್ಯದಲ್ಲಿ ಏನೇ ನಡೆದರೂ ಅದಕ್ಕೆಲ್ಲಾ ಹಿಂದಿನ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಮೇಲೆ ಹಾಕುವ ಕೆಲಸವನ್ನು ಕಾಂಗ್ರೆಸ್‌ನವರು ಮಾಡುತ್ತಲೇ ಬಂದಿದ್ದಾರೆ. ಮಳೆ ಹೆಚ್ಚಾದರೂ, ಕಡಿಮೆಯಾದರೂ ಕೇಂದ್ರ ಹಾಗೂ ರಾಜ್ಯ ಬಿಜೆಪಿಯೇ ಕಾರಣ ಎನ್ನುತ್ತಾರೆ. ಇಂತಹ ಬಾಲಿಶ ಹೇಳಿಕೆಗಳನ್ನು ಕೊಡುವುದನ್ನು ಬಿಡಬೇಕು. ಅವರಿಗೆ ಜನರು ಅಧಿಕಾರ ಕೊಟ್ಟಿದ್ದಾರೆ, ಒಳ್ಳೆಯ ಕೆಲಸಗಳನ್ನು ಮಾಡಲಿ. ಅದನ್ನು ಬಿಟ್ಟು ಈ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಕಾಂಗ್ರೆಸ್ ನಾಯಕರು ಕುರ್ಚಿ ಜಗಳದಲ್ಲಿ ನಿರತರಾಗಿದ್ದಾರೆ’
ಎಂದು ಟೀಕಿಸಿದರು.

Advertisements

‘ಪೊಲೀಸರಿಗೆ ಅಧಿಕಾರ ಕೊಟ್ಟು ಅದರಲ್ಲಿ ಭ್ರಷ್ಟಾಚಾರ ಆಗಬಾರದು. ಸಮಿತಿ ರಚಿಸಿದರೆ ಅದಕ್ಕೆ ಪ್ರಾಮಾಣಿಕ ಅಧಿಕಾರಿಗಳನ್ನು ನೇಮಿಸಿ ಮೇಲ್ವಿಚಾರಣೆ ಮಾಡಬೇಕು. ಸಾಲಕ್ಕೆ ಇಂತಿಷ್ಟೆ ಬಡ್ಡಿ ವಿಧಿಸಬೇಕು ಎಂಬುದು ಆರ್‌ಬಿಐ ಮಾರ್ಗಸೂಚಿಯಲ್ಲಿದೆ. ಆದರೆ, ನೋಂದಾಯಿಸದ ಫೈನಾನ್ಸ್ ಕಂಪನಿಗಳು ಸಾಕಷ್ಟಿವೆ. ಅವುಗಳನ್ನು ರಾಜ್ಯ ಸರ್ಕಾರ ಕಟ್ಟುನಿಟ್ಟಾಗಿ ನಿಯಂತ್ರಿಸಬೇಕು’ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಚೋದನಕಾರಿ ಭಾಷಣ – ಆಯುಧ ಹಂಚಿಕೆ ಕಾನೂನು ಉಲ್ಲಂಘನೆಯಲ್ಲವೇ?

‘ಮುಡಾ ಪ್ರಕರಣದಲ್ಲಿ ಏನಾದರೂ ಮಾಡಿ ತಪ್ಪಿಸಿಕೊಳ್ಳಬೇಕೆಂದು ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ. ರಾಜ್ಯಪಾಲರ ಆದೇಶದ ವಿರುದ್ಧವಾಗಿ ಹೈಕೋರ್ಟ್‌ಗೆ ಹೋದರು. ಆದರೆ, ರಾಜ್ಯಪಾಲರ ನಡೆಯನ್ನು ಹೈಕೋರ್ಟ್‌ ತಪ್ಪು ಎನ್ನಲಿಲ್ಲ. ಆದರೂ ಸಿದ್ದರಾಮಯ್ಯ ಅನೈತಿಕವಾಗಿ ಅಧಿಕಾರದಲ್ಲಿ ಮುಂದುವರಿದಿದ್ದಾರೆ’ ಎಂದು ಆರೋಪಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಈ ಮೈಕ್ರೋ ಫೈನಾನ್ಸ್ ಮತ್ತು ಧರ್ಮಸ್ಥಳ ವಾರದ ಬಡ್ಡಿ ಗ್ರುಪ್ ಗಳು ನಿನ್ನೆ ಹುಟ್ಟಿಲ್ಲ,, ಹಲವು ವರ್ಷಗಳಿಂದ ನಡೆದಿವೆ, ಎರಡು ವರ್ಷಗಳ ಹಿಂದೆ ಈ ಮಂತ್ರಿಯ ಪಕ್ಷದ ಅಧಿಕಾರ ಇದ್ದಾಗ ಧರ್ಮಸ್ಥಳದ ವಾರದ ಬಡ್ಡಿಯ ಪ್ರಕರಣದಲ್ಲಿ ಆತ್ಮಹತ್ಯೆ ಸಹ ಆಗಿತ್ತು,, ಪ್ರತಿಯೊಂದು ವಿಷಯವನ್ನು ರಾಜಕೀಕರಣಗೊಳಿಸಿ ಕಾರಿಕೊಳ್ಳದೆ ಒಬ್ಬ ಕೇಂದ್ರ ಸಚಿವನಾಗಿ ಇಂಥಾ ಗಂಭೀರ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಜವಾಬ್ದಾರಿ ತೋರಿಸಬೇಕು,, ಎಷ್ಟೊಂದು ಕಳ್ಳೋದ್ಯಮಿಗಳು ಲಕ್ಷಾಂತರ ಕೋಟಿ ಸಾಲ ತೀರಿಸದೇ ದೇಶಬಿಟ್ಟು ಓಡಿ ಹೋದರು ಅವರನ್ನು ನಿಮ್ಮ ಅಧಿಕಾರವೇ ಕಳಿಸಿತೆಂದು ಹೇಳಬಹುದಾ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X