ಐಸಿಸಿ ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಬುಮ್ರಾ ಭಾಜನ: ಮೊದಲ ಭಾರತೀಯ ಬೌಲರ್‌ ಎಂಬ ಹಿರಿಮೆ

Date:

Advertisements

ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) 2024ರ ವರ್ಷದ ಟೆಸ್ಟ್ ಕ್ರಿಕೆಟಿಗನಾಗಿ ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರನ್ನು ಆಯ್ಕೆ ಮಾಡಿದೆ. 2024 ರಲ್ಲಿ ಸ್ಮರಣೀಯ ಪ್ರದರ್ಶನ ನೀಡಿದ್ದ ಜಸ್ಪ್ರೀತ್ ಬುಮ್ರಾ ಇದೀಗ ವರ್ಷದ ಟೆಸ್ಟ್ ಕ್ರಿಕೆಟಿಗರಾಗಿ ಆಯ್ಕೆಯಾಗಿದ್ದಾರೆ.

ಜಸ್ಪ್ರೀತ್ ಬುಮ್ರಾ ಕಳೆದ ವರ್ಷ ಟೆಸ್ಟ್ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಅದರಲ್ಲೂ ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತದ ಪರವಾಗಿ ಸ್ಥಿರ ಪ್ರದರ್ಶನ ನೀಡಿದ ಏಕೈಕ ಆಟಗಾರ ಬುಮ್ರಾ. ಇಡೀ ಸರಣಿಯಲ್ಲಿ ಬುಮ್ರಾ ತಮ್ಮ ಕರಾರುವಕ್ಕಾದ ದಾಳಿಯಿಂದ ಆಸೀಸ್ ಆಟಗಾರರನ್ನು ಕಟ್ಟಿಹಾಕದಿದ್ದರೆ, ಟೀಂ ಇಂಡಿಯಾ ಇಡೀ ಸರಣಿಯಲ್ಲಿ ಸಂಪೂರ್ಣ ಮುಖಭಂಗ ಅನುಭವಿಸುವ ಸಾಧ್ಯತೆಗಳಿದ್ದವು. ಆಸೀಸ್ ವಿರುದ್ಧದ ಪ್ರದರ್ಶನಕ್ಕಾಗಿ ಬುಮ್ರಾಗೆ ಸರಣಿ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತ್ತು. ಇದೀಗ ಐಸಿಸಿ, ಬುಮ್ರಾರನ್ನು ವರ್ಷದ ಟೆಸ್ಟ್ ಕ್ರಿಕೆಟಿಗನಾಗಿ ಆಯ್ಕೆ ಮಾಡಿದೆ.

ಜಸ್ಪ್ರೀತ್ ಬುಮ್ರಾ ಭಾರತವಲ್ಲದೆ, ವಿದೇಶಿ ಪರಿಸ್ಥಿತಿಗಳಲ್ಲಿಯೂ ಉತ್ತಮವಾಗಿ ಆಡಿದರು. 2023ರ ಕೊನೆಯಲ್ಲಿ ಬೆನ್ನು ನೋವಿನಿಂದ ಚೇತರಿಸಿಕೊಂಡ ನಂತರ ಟೆಸ್ಟ್‌ಗೆ ಮರಳಿದ್ದ ಬುಮ್ರಾ 2024 ರಲ್ಲಿ ಭಾರತದ ಅತ್ಯಂತ ಯಶಸ್ವಿ ಆಟಗಾರರಲ್ಲಿ ಒಬ್ಬರಾಗಿದ್ದರು. ತವರಿನ ಪರಿಸ್ಥಿತಿಯಲ್ಲಿ ಕಳೆದ ವರ್ಷ ಟೆಸ್ಟ್‌ನಲ್ಲಿ ಇಂಗ್ಲೆಂಡ್ ಮತ್ತು ಬಾಂಗ್ಲಾದೇಶ ವಿರುದ್ಧ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬುಮ್ರಾ ಮತ್ತೊಂದೆಡೆ, ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾದಲ್ಲಿಯೂ ಗಮನಾರ್ಹ ಪ್ರದರ್ಶನ ನೀಡಿದ್ದರು.

Advertisements

ಜಸ್ಪ್ರೀತ್ ಬುಮ್ರಾ 2024 ರಲ್ಲಿ ಒಟ್ಟು 13 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಈ ಅವಧಿಯಲ್ಲಿ ಅವರು 14.92 ಸರಾಸರಿಯಲ್ಲಿ 71 ವಿಕೆಟ್ ಪಡೆದರು. ಈ ಮೂಲಕ ಕಳೆದ ವರ್ಷ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಕೂಡ ಎನಿಸಿಕೊಂಡಿದ್ದರು. ಅವರನ್ನು ಬಿಟ್ಟರೆ ಬೇರಾವ ಬೌಲರ್‌ಗೂ 60 ವಿಕೆಟ್‌ಗಳ ಗಡಿ ಮುಟ್ಟಲು ಸಾಧ್ಯವಾಗಲಿಲ್ಲ.

ಈ ಸುದ್ದಿ ಓದಿದ್ದೀರಾ? ವಿರಾಟ್ ಕೊಹ್ಲಿ ದಾಖಲೆ ಮುರಿದ ದಕ್ಷಿಣ ಆಫ್ರಿಕಾದ ಸ್ಫೋಟಕ ಆಟಗಾರ

ಟೆಸ್ಟ್ ಇತಿಹಾಸದಲ್ಲಿ ಒಂದು ಕ್ಯಾಲೆಂಡರ್ ವರ್ಷದಲ್ಲಿ 70 ಕ್ಕೂ ಹೆಚ್ಚು ವಿಕೆಟ್‌ಗಳನ್ನು ಪಡೆದ 17 ಬೌಲರ್‌ಗಳ ಪೈಕಿ ಬುಮ್ರಾ ಮಾತ್ರ. ಕಡಿಮೆ ಸರಾಸರಿ ಹೊಂದಿರುವ ಬೌಲರ್ ಎನಿಸಿಕೊಂಡಿದ್ದಾರೆ​. ಇದರ ಜೊತೆಗೆ 2024ರ ವರ್ಷದಲ್ಲಿ 70 ಕ್ಕೂ ಹೆಚ್ಚು ಟೆಸ್ಟ್ ವಿಕೆಟ್‌ಗಳನ್ನು ಪಡೆದ ಭಾರತದ ನಾಲ್ಕನೇ ಬೌಲರ್ ಎಂಬ ಹೆಗ್ಗಳಿಕೆಗೂ ಬುಮ್ರಾ ಪಾತ್ರರಾಗಿದ್ದಾರೆ.

ಐಸಿಸಿ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಯನ್ನು ಗೆದ್ದ ಆರನೇ ಭಾರತೀಯ ಜಸ್ಪ್ರೀತ್ ಬುಮ್ರಾ. ಇದಕ್ಕೂ ಮುನ್ನ ರಾಹುಲ್ ದ್ರಾವಿಡ್, ಗೌತಮ್ ಗಂಭೀರ್, ವೀರೇಂದ್ರ ಸೆಹ್ವಾಗ್, ರವಿಚಂದ್ರನ್ ಅಶ್ವಿನ್ ಮತ್ತು ವಿರಾಟ್ ಕೊಹ್ಲಿ ಕೂಡ ಈ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಆದರೆ ಈ ಐವರು ಆಟಗಾರರು ಬ್ಯಾಟರ್‌ಗಳಾಗಿದ್ದು, ಐಸಿಸಿ ವರ್ಷದ ಟೆಸ್ಟ್ ಕ್ರಿಕೆಟಿಗರಾಗಿ ಆಯ್ಕೆಯಾದ ಭಾರತದ ಮೊದಲ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಜಸ್ಪ್ರೀತ್ ಬುಮ್ರಾ ಪಾತ್ರರಾಗಿದ್ದಾರೆ.

https://twitter.com/ICC/status/1883824797748170964
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X