ತುಮಕೂರು | ಅಂಬೇಡ್ಕರ್ ಮತ್ತು ವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ ಭೂಮಿ ಪೂಜೆ

Date:

Advertisements

ನಾವು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿಯನ್ನು ನಿರ್ಮಾಣ ಮಾಡಿಯೇ ತೀರುತ್ತೇವೆ. ಅನ್ಯಾಯದ ವಿರುದ್ಧ ಧ್ವನಿ ಎತ್ತಿ ಜಯಗಳಿಸಿದರೆ ಇತಿಹಾಸ ಸೃಷ್ಟಿಯಾಗುತ್ತದೆ. ಹೋರಾಟಗಳಲ್ಲಿ ನಾವು ಸತ್ತರೆ ನಮ್ಮ ಮುಂದಿನ ಪೀಳಿಗೆ ಕನಸುಗಳನ್ನು ಸಾಕಾರಗೊಳಿಸಲಿದೆ ಎಂಬ ನಂಬಿಕೆ ನಮಗಿದೆ ಎಂದು ಮುಖಂಡರಾದ ಹೆತ್ತೇನಹಳ್ಳಿ ಮಂಜುನಾಥ್ ಅವರು ತಿಳಿಸಿದರು.

ತುಮಕೂರು ತಾಲೂಕಿನ ಹೆಬ್ಬೂರು ಹೋಬಳಿಯಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಅವರ ಕಂಚಿನ ಪುತ್ಥಳಿ ನಿರ್ಮಾಣದ ಭೂಮಿ ಪೂಜೆಯನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಮಂಜುನಾಥ್, ಸಮ ಸಮಾಜಕ್ಕಾಗಿ ನಮ್ಮ ರಕ್ತದ ಕಣಕಣವೂ ಮಿಡಿಯುತ್ತಿದೆ. ಈ ನಾಡಿನ ಜನರಿಗಾಗಿ ನಮ್ಮ ಪ್ರಾಣ ತ್ಯಾಗಕ್ಕೂ ಸಿದ್ಧರಿದ್ದೇವೆ. ನಾವೆಲ್ಲರೂ ಜಾತಿ ಭೇದಗಳನ್ನು ಮರೆತು ಪರಸ್ಪರ ಕೈ ಹಿಡಿದು ಬದುಕೋಣ ಎಂದು ಸಾರಿದರು.

1000962647

ನಾವೆಲ್ಲಾ ಒಂದಾದಾಗ ಮಾತ್ರ ಈ ಸಾಮಾಜಿಕ ವ್ಯವಸ್ಥೆ ಸರಿಹೋಗುತ್ತದೆ. ಅಂಬೇಡ್ಕರ್ ಭಾರತದ ಕಣ್ತೆರೆಸಿದರು. ಆದರೆ, ಶ್ರೀವಾಲ್ಮೀಕಿ ಬದುಕಿನ ಮೌಲ್ಯಗಳನ್ನು ತಿಳಿಸಿಕೊಟ್ಟರು. ಇಂತಹ ದಾರ್ಶನಿಕರ ಮಾರ್ಗದರ್ಶನದಲ್ಲಿ ನಡೆಯಬೇಕು. ಆಗ ನಮ್ಮ ನಿಮ್ಮ ಬದುಕು ಸುಂದರವಾಗುತ್ತದೆ ಎಂದರು.

Advertisements

ಬಾಬಾ ಸಾಹೇಬ್ ಮತ್ತು ಮಹರ್ಷಿ ವಾಲ್ಮೀಕಿ ಪುತ್ಥಳಿ ನಿರ್ಮಾಣದ ಭೂಮಿ ಪೂಜೆಗೆ ಅಡೆತಡೆಗಳು ಎದುರಾದವು. ಈ ಅಡೆತಡೆಗಳ ಹಿಂದೆ ತಾಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಪಿಎಸ್‌ಐ ಭೈರೇಗೌಡ ಇದ್ದಾರೆ. ಅವೆಲ್ಲವುಗಳನ್ನು ಮೀರಿ ನಾವು ಪುತ್ಥಳಿ ನಿರ್ಮಾಣ ಮಾಡಲಿದ್ದೇವೆ ಎಂದು ಸವಾಲು ಎಸೆದರು.

ನಮ್ಮ ಮನೆಗಳನ್ನು ಮಾರಿಯಾದರೂ ಆದರ್ಶಗಳನ್ನು ಉಳಿಸಿಕೊಳ್ಳುತ್ತೇವೆ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ನಮ್ಮಿಂದ ಇದು ಸಾಧ್ಯವಾಗದಿದ್ದರೆ ನಮ್ಮ ಮಕ್ಕಳು ಮುಂದುವರೆಸುತ್ತಾರೆ. ನಾವು ಯಾರ ಕಟ್ಟಿಗೂ ಬಗ್ಗುವವರಲ್ಲ. ಇಲ್ಲಿ ಸೇರಿರುವವರು ಅಂಬೇಡ್ಕರ್ ಮತ್ತು ವಾಲ್ಮೀಕಿ ರಕ್ತದ ಕುಡಿಗಳು ಎಂದು ವಿರೋಧಿಗಳಿಗೆ ತೊಡೆತಟ್ಟಿ ಎಚ್ಚರಿಕೆ ನೀಡಿದರು.

ಪಾಲನಹಳ್ಳಿ ಕ್ಷೇತ್ರದ ಪೀಠಾಧ್ಯಕ್ಷರಾದ ಶ್ರೀ ಸಿದ್ದರಾಜು ಸ್ವಾಮೀಜಿ, ಶಿಡ್ಲೆಕೋಣದ ಶ್ರೀ ವಾಲ್ಮೀಕಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಸಂಜಯಕುಮಾರನಂದ ಸ್ವಾಮೀಜಿ, ಕುಣಿಗಲ್‌ನ ಅರೇ ಶಂಕರ ಮಠದ ಪೀಠಾಧ್ಯಕ್ಷರಾದ ಸಿದ್ದರಾಮ ಚೈತನ್ಯ ಸ್ವಾಮೀಜಿ, ಚಿಕ್ಕಣ್ಣ ಹಟ್ಟಿ ಕ್ಷೇತ್ರದ ಧರ್ಮದರ್ಶಿ ಶ್ರೀ ಪಾಪಣ್ಣ ಸ್ವಾಮೀಜಿ, ಇಸ್ಲಾಂ ಧರ್ಮಗುರುಗಳು ಹಾಗೂ ಸಮುದಾಯದ ಮುಖಂಡರ ಸಮ್ಮುಖದಲ್ಲಿ ಪುತ್ಥಳಿ ನಿರ್ಮಾಣದ ಭೂಮಿ ಪೂಜೆ ನೆರವೇರಿತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

Download Eedina App Android / iOS

X