ಮೈಸೂರು | ಸರ್ಕಾರಿ ಶಾಲೆ ಮುಚ್ಚಲು ಮುಂದಾಗಿರುವ ಕಾಂಗ್ರೆಸ್‌ ನಡೆಗೆ ಎಐಡಿಎಸ್‌ಒ ವಿರೋಧ

Date:

Advertisements

ರಾಜ್ಯದ ಸುಮಾರು 4200 ಕನ್ನಡ ಶಾಲೆಗಳನ್ನು ಮುಚ್ಚಲು ಮುಂದಾಗಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ಧೋರಣೆಗೆ ಎಐಡಿಎಸ್ಓ ತೀವ್ರ ವಿರೋಧ ವ್ಯಕ್ತಪಡಿಸಿ, ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದೆ.

ಎಐಡಿಎಸ್ಓ ರಾಜ್ಯ ಖಚಾಂಚಿ ಸುಭಾಷ್ ಬೆಟ್ಟದ ಕೊಪ್ಪ ಮಾತನಾಡಿ, “ಇತ್ತೀಚೆಗಷ್ಟೆ ರಾಜ್ಯ ಸರ್ಕಾರವು ‘ ಹಬ್ ಅಂಡ್ ಸ್ಪೋಕ್’ ಅಡಿಯಲ್ಲಿ ಕಡಿಮೆ ಹಾಜರಾತಿ ಇರುವ ಸರ್ಕಾರಿ ಶಾಲೆಗಳನ್ನು ಇತರ ಶಾಲೆಗಳೊಂದಿಗೆ ಸಂಯೋಜಿಸುವ ನಿರ್ಧಾರವನ್ನು ಪ್ರಕಟಿಸಿದೆ. ಇದಕ್ಕಾಗಿ ಶಿಕ್ಷಣ ಸುಧಾರಣಾ ಸಮಿತಿಯನ್ನು ಸಹ ರಚಿಸಲಾಗಿದೆ. ಪತ್ರಿಕೆಗಳಲ್ಲಿ ವರದಿಯಾಗಿರುವಂತೆ ರಾಜ್ಯದಲ್ಲಿ 4 ಸಾವಿರಕ್ಕೂ ಅಧಿಕ ಶಾಲೆಗಳು 10 ಮಕ್ಕಳಿಗಿಂತ ಕಡಿಮೆ ದಾಖಲಾತಿಯನ್ನು ಹೊಂದಿವೆ. ಈ ಶಾಲೆಗಳ ಭವಿಷ್ಯದ ಕುರಿತು ಪಾಲಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕ ತಲೆದೋರಿದೆ. ಸರ್ಕಾರವು ರಾಜ್ಯದ ಬಡಜನರ ಮಕ್ಕಳ ಶಿಕ್ಷಣದ ಆಶಾಕಿರಣವಾಗಿರುವ ಸರ್ಕಾರಿ ಶಾಲೆಗಳನ್ನು ಬಲಪಡಿಸುವ ಬದಲು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಕೂಡಲೇ ಕ್ರಮವನ್ನು ಹಿಂತೆಗೆದುಕೊಂಡು ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಕ್ರಮವಹಿಸಬೇಕು” ಎಂದು ಆಗ್ರಹಿಸಿದರು.

ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕಲ್ಯಾಣ್ ಮಾತನಾಡಿ, “ಕರ್ನಾಟಕ ರಾಜ್ಯದಲ್ಲಿ 6,000ಕ್ಕಿಂತ ಹೆಚ್ಚು ಏಕೋಪಾಧ್ಯಾಯ ಶಾಲೆಗಳಿವೆ. 50,000ಕ್ಕಿಂತ ಹೆಚ್ಚು ಶಿಕ್ಷಕರನ್ನು ನೇಮಕ ಮಾಡಿಕೊಂಡಿಲ್ಲ. ಶಾಲೆಗಳಲ್ಲಿ ಕನಿಷ್ಟ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕ್ರಮಗಳನ್ನು ಕೈಗೊಳ್ಳದೆ, ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಮುಚ್ಚಲು ಸರ್ಕಾರ ಮುಂದಾಗಿರುವುದು ‘ನೆಗಡಿ ಬಂದರೆ ಮೂಗು ಕತ್ತರಿಸಿದಂತೆ’ ಎಂಬಂತಾಗಿದೆ. ಸರ್ಕಾರವು ತನ್ನ ಈ ಅವೈಜ್ಞಾನಿಕ ಮತ್ತು ಅಪ್ರಜಾತಾಂತ್ರಿಕ ಜನವಿರೋಧಿ ನಿರ್ಧಾರವನ್ನು ಕೂಡಲೇ ಕೈಬಿಡಬೇಕು” ಎಂದು ಒತ್ತಾಯಿಸಿದರು.

Advertisements

ಆದ್ಯತೆಯ ಮೇರೆಗೆ ಸರ್ಕಾರವು ಬಜೆಟ್‌ನಲ್ಲಿ ಶಿಕ್ಷಣಕ್ಕೆ ಅನುದಾನ ನಿಗದಿಪಡಿಸಬೇಕು. ಸರ್ಕಾರಿ ಶಾಲೆಗಳನ್ನು ಸಂಯೋಜನೆಗೊಳಿಸುವ ಬದಲು ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಅವಶ್ಯಕ ಸೌಲಭ್ಯ ನೀಡಿ ರಕ್ಷಿಸಬೇಕೆಂದು ಆಗ್ರಹಿಸಿದರು. ಮುಂದಿನ ದಿನಗಳಲ್ಲಿ ಶಾಲೆಗಳ ಮುಚ್ಚುವಿಕೆಯ ವಿರುದ್ಧ ಹೋರಾಟಗಳನ್ನು ಸಂಘಟಿಸುತ್ತೇವೆ. ಶಾಲೆಗಳಲ್ಲಿ ಹೋರಾಟದ ಸಮಿತಿಗಳನ್ನು ರಚಿಸಿ, ಪೋಷಕರ ಸಭೆಗಳನ್ನು ಸಂಘಟಿಸುತ್ತಿದ್ದೇವೆ. ಈ ಹೋರಾಟದಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ?: ಮೈಸೂರು | ಅಮಿತ್ ಶಾ ಹೇಳಿಕೆ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಬಂಧನಕ್ಕೆ ಆಗ್ರಹ

ಪ್ರತಿಭಟನೆಯಲ್ಲಿ ಎಐಡಿಎಸ್ಓ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್, ಮೈಸೂರು ಜಿಲ್ಲಾ ಅಧ್ಯಕ್ಷೆ ಚಂದ್ರಕಲಾ, ಕಾರ್ಯದರ್ಶಿ ನಿತಿನ್, ಉಪಾಧ್ಯಕ್ಷೆ ಸ್ವಾತಿ ಪದಾಧಿಕಾರಿಗಳಾದ ಹೇಮ, ಚಂದನ, ಅಂಜಲಿ, ಅಭಿಷೇಕ, ದಿಶಾ, ನಂದೀಶ್ ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X