ಉಡುಪಿಯ ಕುಂಜುಬೆಟ್ಟುವಿನಲ್ಲಿರುವ ಶಾರದಾ ರೆಸಿಡೆನ್ಸಿ ಶಾಲೆಯಲ್ಲಿ ಇವತ್ತು ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೆಲ ಹೊತ್ತು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಮನೆ ಮಾಡಿತ್ತು. ತಕ್ಷಣ ಆಗಮಿಸಿದ ಪೊಲೀಸರು ಮತ್ತು ಶ್ವಾನದಳ ತೀವ್ರ ತಪಾಸಣೆ ಕೈಗೊಂಡಿದೆ.
ಆದರೆ ಬಾಂಬ್ ನ ಯಾವುದೇ ಕುರುಹು ಕಂಡುಬಂದಿಲ್ಲ ಎಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಸ್ಪಷ್ಟಪಡಿಸಿದ್ದಾರೆ. ಅನಾಮಧೇಯನೊಬ್ಬ ಶಾಲೆಯ ಇ-ಮೇಲ್ ಗೆ ಬಾಂಬ್ ಬೆದರಿಕೆ ಈ ಮೇಲ್ ಕಳಿಸಿದ್ದಾನೆ.ಮೇಲ್ ಕಳಿಸಿದಾತನನ್ನು ಪತ್ತೆ ಹಚ್ಚಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಅರುಣ್ ತಿಳಿಸಿದರು.
