ಧಾರವಾಡ | ಅಖಂಡ ಜಿಲ್ಲೆಯ ಸ್ವಾತಂತ್ರ್ಯ ಹೋಟಾರಗಾರರ ಗ್ರಂಥ ಬಿಡುಗಡೆ

Date:

Advertisements

ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಆಶಯದಂತೆ ಮತ್ತು ಜಿಲ್ಲಾಧಿಕಾರಿ ದಿವ್ಯ ಪ್ರಭು ಸಲಹೆಯಂತೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸುರೇಶ ಕೆ. ಪಿ. ಮಾರ್ಗದರ್ಶನದಲ್ಲಿ 2024 ರ ಅಗಸ್ಟ ತಿಂಗಳಲ್ಲಿ ಅಖಂಡ ಧಾರವಾಡ ಜಿಲ್ಲೆಯ 77 ಸ್ವಾತಂತ್ರ್ಯ ಹೋರಾಟಗಾರರ ಕುರಿತಂತೆ ಆಯ್ದ 77 ಕಾಲೇಜುಗಳಲ್ಲಿ 77 ಉಪನ್ಯಾಸಗಳನ್ನು ಏರ್ಪಡಿಸಲಾಗಿತ್ತು.

ಆ ಹಿನ್ನೆಲೆಯಲ್ಲಿ 77 ಉಪನ್ಯಾಸ ಮಾಲಿಕೆ ಗ್ರಂಥವನ್ನು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಧಾರವಾಡ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಜ. 26ರಂದು ಬಿಡುಗಡೆಗೊಳಿಸಿದರು.

ಧಾರವಾಡದ ಪ್ರಮುಖ ಐತಿಹಾಸಿಕ ಸ್ಥಳಗಳಿಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಆ ಸ್ಥಳಗಳ ಐತಿಹಾಸಿಕ ಮಹತ್ವವನ್ನು ಉಪನ್ಯಾಸಕರು ತಿಳಿಸಿಕೊಟ್ಟರು. ನಂತರದಲ್ಲಿ 77 ಉಪನ್ಯಾಸ ಮಾಲಿಕೆಗಳನ್ನು ಒಳಗೊಂಡ ಗ್ರಂಥವನ್ನು ಗೌರವ ಸಂಪಾದಕರಾಗಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಪ್ರಧಾನ ಸಂಪಾದಕರಾಗಿ ಉಪನಿರ್ದೇಶಕ ಸುರೇಶ ಕೆ.ಪಿ., ಸಂಪಾದಕರಾಗಿ ಪ್ರೋ. ಪ್ರಕಾಶ ನಿಂ. ಸುಣಗಾರ, ಸಹ ಸಂಪಾದಕರಾಗಿ ಉದಯ ನಾಯಕ, ಅಶೋಕ ವಾಯ್.ಸವಣೂರ ಗ್ರಂಥ ರಚನೆಗೆ ಕಾರಣರಾಗಿದ್ದಾರೆ.

Advertisements

ಕಾರ್ಯಕ್ರಮದ ಆಯೋಜನೆಯಲ್ಲಿ ಮತ್ತು ಗ್ರಂಥ ರಚನೆಯಲ್ಲಿ ಧಾರವಾಡ ಜಿಲ್ಲಾ ಇತಿಹಾಸ ಉಪನ್ಯಾಸಕರ ಸಂಘದ ಪದಾಧಿಕಾರಿಗಳು ಮತ್ತು ಉಪನ್ಯಾಸಕರು ಉಪನ್ಯಾಸ ನೀಡಿ, ಲೇಖನ ಬರೆದುಕೊಟ್ಟ ಎಲ್ಲ ಇತಿಹಾಸ ಉಪನ್ಯಾಸಕರ ಪಾತ್ರ ಹಿರಿದಾದದು. ಎಲ್ಲಾ ಕಾಲೇಜುಗಳ ಪ್ರಾಚಾರ್ಯರು, ಆಡಳಿತ ಮಂಡಳಿಯವರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಸಕ್ರೀಯವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಗ್ರಂಥದಲ್ಲಿ 77 ಸ್ವಾತಂತ್ರ್ಯ ಹೋರಾಟಗಾರರು ಮಾತ್ರವಲ್ಲದೆ ಸಾವಿರಾರು ಹೋರಾಟಗಾರರ ತ್ಯಾಗ, ಬಲಿದಾನ, ಕೆಚ್ಛೆದೆಯ ಹೋರಾಟದ ಚರಿತ್ರೆಯನ್ನು ಮತ್ತೊಮ್ಮೆ ಎಲ್ಲರಿಗೂ ನೆನಪಿಸಿಕೊಡುವ ಅದ್ಭುತವಾದ ಕಾರ್ಯ ಮಾಡಲಾಗಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ್, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕ ಸುರೇಶ ಕೆ.ಪಿ, ಹಿಂದುಳಿದ ಮತ್ತು ಅಲ್ಪ ಸಂಖ್ಯಾಯತ ಇಲಾಖೆಯ ಜಿಲ್ಲಾ ಮುಖ್ಯಸ್ಥರು ಹಾಗೂ ಗ್ರಂಥ ಸಂಪಾದಕ ಪ್ರೋ. ಪ್ರಕಾಶ ನಿಂ. ಸುಣಗಾರ, ಅಧ್ಯಕ್ಷ ಉದಯ ನಾಯಕ, ಹಾಗೂ ಸಂಘದ ಎಲ್ಲ ಪದಾಧಿಕಾರಿಗಳು ಮತ್ತು ಗಣ್ಯ ನಾಗರೀಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಅಲ್‌ ವಫಾ ಟ್ರಸ್ಟ್‌ನಿಂದ 15 ಜೋಡಿಗಳಿಗೆ ಸರಳ ಸಾಮೂಹಿಕ ವಿವಾಹ

ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ 15 ಜೋಡಿಗಳ ಸರಳ...

ಚಿಕ್ಕಮಗಳೂರು l ಶೋ ರೂಮ್ ಸಿಬ್ಬಂದಿಯಿಂದಲೇ ಡೀಸೆಲ್ ಕಳ್ಳತನ

ಶೋ ರೂಂ ಸಿಬ್ಬಂದಿಯೇ ಹೊಸ ವಾಹನದ ಡೀಸೆಲ್‌ ಕಳ್ಳತನ ಮಾಡಿದ ಘಟನೆ...

ಗದಗ | ಒಳಮೀಸಲಾತಿ ಜಾರಿ, ಬಹುದಿನಗಳ ಕನಸು ನನಸು ಮಾಡಿದ ಎಲ್ಲರಿಗೂ ಅಭಿನಂದನೆ: ಎಸ್. ಎನ್. ಬಳ್ಳಾರಿ

ಪರಿಶಿಷ್ಟ ಜಾತಿಗಳ ಮೂರು ದಶಕಗಳ ಒಳಮೀಸಲಾತಿ ಹೋರಾಟವನ್ನು ಮಾನ್ಯ ಸುಪ್ರೀಂ ಕೋರ್ಟ್...

ಚಿಕ್ಕಮಗಳೂರು l ಅಕ್ರಮ ಪ್ಲಾಸ್ಟಿಕ್ ಮಾರಾಟ: ನಗರಸಭೆ ಅಧಿಕಾರಿಗಳು ದಾಳಿ

ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ...

Download Eedina App Android / iOS

X