ಬೀದರ್ | ನನ್ನ ರಾಜಕೀಯ ಮುಗಿದಿಲ್ಲ, ಹೊಸ ಅಧ್ಯಾಯ ಆರಂಭವಾಗಿದೆ: ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್

Date:

Advertisements

ನಮಗೆ ದೇವೇಗೌಡರು ಸ್ಪೂರ್ತಿಯಾಗಿದ್ದಾರೆ. 91ನೇ ವಯಸ್ಸಿನಲ್ಲೂ ಕೂಡ ನೀವು ಯಾರೂ ಹೆದರಬೇಡಿ ಎಂದು ನಮಗೆ ಧೈರ್ಯ ಹೇಳಿದ್ದಾರೆ. ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಸಾಗಬೇಕಾಗಿದೆ ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಹೇಳಿದರು.

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ತಮ್ಮ ನಿವಾಸದ ಆವರಣದಲ್ಲಿ ಜೆಡಿಎಸ್ ಮುಖಂಡರ ಹಾಗೂ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದರು.

“ಬಂಡೆಪ್ಪ ಅವರದ್ದು ರಾಜಕೀಯ ಮುಗಿತು ಎಂದುಕೊಳ್ಳಬೇಡಿ. ಈಗ ಹೊಸ ಅಧ್ಯಾಯ ಆರಂಭವಾಗಿದೆ. ಜನರಿಗೋಸ್ಕರ ನಾವು ಕೆಲಸ ಮಾಡುತ್ತೇವೆ. ರಾಜಕೀಯ ಉಲ್ಟಾ ಪಲ್ಟಾ ಆಗುತ್ತಿರುತ್ತದೆ. ನಾವೆಲ್ಲರೂ ಸೇರಿ ಜನರಿಗಾಗಿ ಕೆಲಸ ಮಾಡೋಣ” ಎಂದು ನುಡಿದರು.

Advertisements

“ನಮ್ಮದು ರಾಜಕೀಯ ಹಿನ್ನೆಲೆಯ ಕುಟುಂಬವಲ್ಲ. ನಮ್ಮ ತಂದೆಯವರ ಕಾಲದಿಂದಲೂ ದಾನ ಧರ್ಮ ಮಾಡಿಕೊಂಡು ಬಂದಿರುವ ಕುಟುಂಬವಾಗಿದೆ. ಅಂದಿನಿಂದ ಇಲ್ಲಿಯವರೆಗೂ ದಾನ ಧರ್ಮ ಮಾಡಿಕೊಂಡು ಸಾಗುತ್ತಿದ್ದೇವೆ. ಚುನಾವಣೆಗೆ ನಿಲ್ಲಬೇಕು, ಶಾಸಕ ಆಗಬೇಕು ಎಂಬ ಆಸೆಯಂತೂ ಅಂದು ನನಗೆ ಇರಲಿಲ್ಲ. ಜನರ ಪ್ರೀತಿ ವಿಶ್ವಾಸದಿಂದಾಗಿ ರಾಜಕೀಯಕ್ಕೆ ಬಂದಿದ್ದೇನೆ. ಜನರಿಗೆ ಒಳಿತು ಮಾಡುವ ಉದ್ದೇಶದಿಂದ ರಾಜಕೀಯದಲ್ಲಿ ಇದ್ದೇನೆ. ನಾನು ಸೋಲು ಗೆಲುವು ಎರಡನ್ನೂ ಕಂಡಿದ್ದೀನಿ. ರಾಜಕೀಯ ನದಿ ಇದ್ದಂತೆ, ಹರಿಯುತ್ತ ಸಾಗುತ್ತಿರುತ್ತದೆ. ನನ್ನ ಐದು ಚುನಾವಣೆಗಿಂತ ಹೆಚ್ಚಿನ ಬೆಂಬಲ ಈ ಚುನಾವಣೆಯಲ್ಲಿ ನನಗೆ ಸಿಕ್ಕಿತ್ತು. ಆದರೂ ಸೋಲಾಗಿದೆ” ಎಂದರು.

“ಈಗ ಚುನಾವಣೆ ಮುಗಿದಿದೆ. ನಾನು ಅಧಿಕಾರದಲ್ಲಿ ಇಲ್ಲದಿದ್ದಾಗಲೂ ಜನರ ಸೇವೆ ಮಾಡಿದ್ದೇನೆ. ಅಧಿಕಾರದಲ್ಲಿ ಇದ್ದಾಗಲೂ ಜನಪರ ಕೆಲಸ ಮಾಡಿದ್ದೇನೆ. ಪಕ್ಷ ಬದಲಾವಣೆ ಮಾಡುವುದಿಲ್ಲ. ಈ ಹಿಂದೆ ಸೋತ ಸಂದರ್ಭದಲ್ಲಿ ಕೂಡ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡಿದ್ದೇನೆ. ಈಗಲೂ ಮಾಡುತ್ತೇನೆ” ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಹೇಳಿದರು.

ಸ್ಥಳೀಯ ಚುನಾವಣೆಗಳಿಗೆ ಸಿದ್ದರಾಗೋಣ:

ಕೆಲವೇ ತಿಂಗಳಲ್ಲಿ ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ ಚುನಾವಣೆಗಳು ನಡೆಯಲಿವೆ. ಜೆಡಿಎಸ್ ಅಧಿಕಾರಕ್ಕೆ ಬರುವಂತೆ ನಾವೆಲ್ಲರೂ ಸೇರಿ ಕೆಲಸ ಮಾಡಬೇಕಾಗಿದೆ. ತಳಮಟ್ಟದಿಂದ ಪಕ್ಷ ಸಂಘಟಿಸುವುದನ್ನು ಪಕ್ಷದ ಮುಖಂಡರು, ಕಾರ್ಯಕರ್ತರು ಮಾಡಬೇಕಾಗಿದೆ. ಎಲ್ಲರೂ ಒಗ್ಗೂಡಿ ಪಕ್ಷ ಸಂಘಟನೆ, ಬಲವರ್ಧನೆ ಮಾಡೋಣ” ಎಂದು ಬೀದರ್ ದಕ್ಷಿಣ ಮಾಜಿ ಶಾಸಕ ಬಂಡೆಪ್ಪ ಖಾಶೆಂಪುರ್ ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ನಮ್ಮ ಪಕ್ಷದವರಿಂದಲೇ ನಮ್ಮ ತೇಜೋವಧೆಯಾಗುತ್ತಿದೆ; ಡಿವಿಎಸ್‌ ಆಕ್ರೋಶ

ಈ ವೇಳೆ ಜೆಡಿಎಸ್ ಪ್ರಮುಖರಾಗಿರುವ ಮಾರುತಿ ಖಾಶೆಂಪುರ್, ಸಂಜುರೆಡ್ಡಿ ನಿರ್ಣಾ, ವಿಜಯಕುಮಾರ್ ಖಾಶೆಂಪುರ್, ಶಾಂತಲಿಂಗ ಸಾವಳಗಿ, ದೇವೇಂದ್ರ ಸೋನಿ, ರಾಜು ಕಡ್ಯಾಳ, ಸಂತೋಷ ರಾಸೂರು, ಶಿವರಾಜ್ ಹುಲಿ, ಸಜ್ಜದ್ ಸಾಹೇಬ್, ಇಸ್ಮಾಯಿಲ್ ಕಮಠಾಣಾ, ರಾಜಶೇಖರ ಜವಳೆ, ಮನು ನಾಯ್ಕ್, ಪುಂಡಲೀಕ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X