ರಾಜ್ಯದ್ಯಂತ ತೀವ್ರ ಚಳಿ ಇದ್ದು, ಬೆಳಗ್ಗಿನ ಸಮಯದಲ್ಲಿ ಮನೆಯಿಂದ ಹೊರಬರುವುದೇ ಕಷ್ಟ ಎನ್ನುತ್ತಿದ್ದಾರೆ ಜನರು. ಆದರೂ, ದಿನನಿತ್ಯದ ಕೆಲಸಕ್ಕಾಗಿ, ಬದುಕಿನ ಬವಣೆ ನೀಗಿಸುವುದಕ್ಕಾಗಿ ಕೊರೆಯುವ ಚಳಿಯಲ್ಲೂ ತಮ್ಮ ಕೆಲಸ-ಕಾರ್ಯಗಳಲ್ಲಿ ತೊಡಗುತ್ತಿದ್ದಾರೆ. ಈ ನಡುವೆ, ರಾಜ್ಯದ 11 ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಫೆಬ್ರವರಿ 2ರಿಂದ ಕರ್ನಾಟಕದ 11 ಜಿಲ್ಲೆಗಳಲ್ಲಿ ಮತ್ತೆ ಮಳೆ ಸುರಿಯಲಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೆಳಿದೆ.
ಇನ್ನು, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ವಿಜಯನಗರ, ಬಳ್ಳಾರಿ, ಚಿತ್ರದುರ್ಗ ತುಮಕೂರು, ಶಿವಮೊಗ್ಗ, ಕೋಲಾರ, ದಾವಣಗೆರೆ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದ್ದು, ಚಳಿ ಹೆಚ್ಚಿರಲಿದೆ ಎಂದು ತಿಳಿಸಿದೆ.