ಒಡಿಶಾ ರೈಲು ದುರಂತ | ಸಂತ್ರಸ್ತರ ನೆರವಿಗೆ ಸಹಾಯವಾಣಿ ತೆರೆದ ಸೋನು ಸೂದ್‌

Date:

Advertisements

ಸಂತ್ರಸ್ತ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲು ಮುಂದಾದ ಸ್ಟಾರ್‌ ನಟ

ಸೋನು ಸೂದ್‌ ಸಾಮಾಜಿಕ ಕಳಕಳಿಗೆ ಸಾರ್ವಜನಿಕರಿಂದ ಮೆಚ್ಚುಗೆ

ಬಾಲಿವುಡ್‌ನ ಖ್ಯಾತ ನಟ ಸೋನು ಸೂದ್‌, ಒಡಶಾ ರೈಲು ದುರಂತದಲ್ಲಿ ಮೃತಪಟ್ಟ ಮತ್ತು ಗಾಯಗೊಂಡ ವ್ಯಕ್ತಿಗಳ ಕುಟುಂಬಗಳಿಗೆ ನೆರವಾಗಲು ಮುಂದಾಗಿದ್ದಾರೆ. ರೈಲು ದುರಂತ ಸಂಭವಿಸಿದ ಬಳಿಕ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ್ದ ಸೋನು ಸೂದ್‌, ಸಂತ್ರಸ್ತ ಕುಟುಂಬಗಳಿಗೆ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದರು. ಕೊಟ್ಟ ಮಾತಿನಂತೆ ನಡೆದುಕೊಂಡಿರುವ ನಟ, ಇದೀಗ ಸಂತ್ರಸ್ತರ ಕುಟುಂಬಗಳಿಗೆ ನೆರವಾಗುವ ಸಲುವಾಗಿ ಸಹಾಯವಾಣಿಯನ್ನು ಪ್ರಾರಂಭಿಸಿದ್ದಾರೆ.

Advertisements

ಈ ಬಗ್ಗೆ ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಸೂನು ಸೂದ್‌, “ಒಡಿಶಾ ರೈಲು ದುರಂತದಿಂದ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಗಳಿಗೆ ನೆರವಾಗಲು ನಮ್ಮ ʼಸೂದ್‌ ಚಾರಿಟಿ ಟ್ರಸ್ಟ್‌ʼ ವತಿಯಿಂದ ಸಹಾಯವಾಣಿಯನ್ನು ಆರಂಭಿಸಿದ್ದೇವೆ. ಅಪಘಾತದಲ್ಲಿ ಮನೆಗೆ ಆಧಾರವಾಗಿದ್ದ ವ್ಯಕ್ತಿಗಳನ್ನು ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬದ ಸದಸ್ಯರಿಗೆ ನೌಕರಿ ಕೊಡಿಸುವ ಅಥವಾ ಆ ಕುಟುಂಬ ಇರುವ ಊರಿನಲ್ಲೇ ಸಣ್ಣ ಪುಟ್ಟ ವ್ಯಾಪಾರ ನಡೆಸಲು ಹಣಕಾಸಿನ ಸಹಾಯ ಮಾಡುವ ಮತ್ತು ಸಂತ್ರಸ್ತ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುವ ಉದ್ದೇಶದಿಂದ ಈ ಸಹಾಯವಾಣಿ ಆರಂಭಿಸಿದ್ದೇವೆ. ಸಂತ್ರಸ್ತ ಕುಟುಂಬಗಳ ಸದಸ್ಯರು ಅಥವಾ ಅಂತಹ ಕುಟುಂಬಗಳ ಬಗ್ಗೆ ತಿಳಿದವರು ತಮ್ಮ ವಿವರಗಳನ್ನು ಸಂದೇಶದ ಮೂಲಕ ಸಹಾಯವಾಣಿಗೆ ರವಾನಿಸಬೇಕು” ಎಂದಿದ್ದಾರೆ.

ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟ ಅಥವಾ ಗಂಭೀರವಾಗಿ ಗಾಯಗೊಂಡವರ ಕುಟುಂಬ ಸದಸ್ಯರು ʼ+91 9967567520ʼ ಈ ಸಹಾಯವಾಣಿಗೆ ಸಂದೇಶ ಕಳುಹಿಸುವ ಮೂಲಕ ಅಗತ್ಯ ನೆರವುಗಳನ್ನು ಪಡೆಯಬಹುದಾಗಿದೆ. ಈ ಸಹಾಯವಾಣಿ ಕೇವಲ ಒಡಿಶಾ ರೈಲು ದುರಂತದ ಸಂತ್ರಸ್ತರಿಗೆ ನೆರವಾಗಲು ಮಾತ್ರ ಕಾರ್ಯ ನಿರ್ವಹಿಸಲಿದೆ.

ಈ ಸುದ್ದಿ ಓದಿದ್ದೀರಾ? ರೈಲು ದುರಂತಕ್ಕೆ ಸರ್ಕಾರ ಹೊಣೆಯಲ್ಲವೇ? ನಟ ಕಿಶೋರ್‌ ಪ್ರಶ್ನೆ

ಘಟನೆಯ ಬಳಿಕ ಸಂತಾಪ ಸೂಚಿಸಿ ಮಾತನಾಡಿದ್ದ ಸೋನು ಸೂದ್‌, “ಈ ಅಪಘಾತದಲ್ಲಿ ದುಡಿಮೆ ಅರಸಿ ಚೆನ್ನೈಗೆ ಹೊರಟಿದ್ದ ಬಿಹಾರದ ಕೂಲಿ ಕಾರ್ಮಿಕರು, ಕೆಲ ಕುಟುಂಬಗಳು ಹೀಗೆ ಹಲವರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಕ್ಕೆ ಮತ್ತು ಗಾಯಗೊಂಡವರಿಗೆ ಪರಿಹಾರ ಸಿಗತ್ತದೆ. ಆ ಪರಿಹಾರ ಮೂರ್ನಾಲ್ಕು ತಿಂಗಳುಗಳಿಗೆ ಖಾಲಿಯಾಗುತ್ತದೆ. ಮನೆಗೆ ಆಧಾರವಾಗಿದ್ದ ವ್ಯಕ್ತಿ ಶಾಶ್ವತವಾಗಿ ಗಾಯಗೊಂಡು ಹಾಸಿಗೆ ಹಿಡಿದರೆ ಅಂತಹ ಕುಟುಂಬಗಳು ಯಾವತ್ತಿಗೂ ಸುಧಾರಿಸಲು ಸಾಧ್ಯವೇ ಇಲ್ಲ. ಅಂತಹ ಕುಟುಂಬಗಳಿಗೆ ತಾತ್ಕಾಲಿಕ ಪರಿಹಾರ ಸಾಕಾಗುವುದಿಲ್ಲ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಾಶ್ವತ ಪರಿಹಾರ ನೀತಿಗಳನ್ನು ರೂಪಿಸಬೇಕು. ಈ ರೀತಿಯ ದುರಂತಗಳಿಗೆ ಬಲಿಯಾದ ವ್ಯಕ್ತಿ ಅಥವಾ ಕುಟುಂಬಗಳಿಗೆ ನೆರವಾಗಲು ಪಿಂಚಣಿಯ ಮಾದರಿಯಲ್ಲಿ ಮಾಸಿಕ ಪರಿಹಾರವನ್ನು ನೀಡುವಂತಾಗಬೇಕು” ಎಂದು ಆಗ್ರಹಿಸಿದ್ದರು.

ಒಡಿಶಾದ ಬಾಲಾಸೋರ್‌ ಬಳಿ ಶುಕ್ರವಾರ ತಡರಾತ್ರಿ ಸಂಭವಿಸಿದ್ದ ರೈಲು ಅಪಘಾತದಲ್ಲಿ 288 ಮಂದಿ ಮೃತಪಟ್ಟಿದ್ದು, ಸಾವಿರಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

Download Eedina App Android / iOS

X