ಮುಡಾ ಸೈಟ್ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಿದೆ. ಈವರೆಗಿನ ತನಿಖೆಯ ವರದಿಯನ್ನ ಲೋಕಾಯುಕ್ತ ಪೊಲೀಸರು ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಿದ್ದಾರೆ. ಆದ್ರೆ, ಲೋಕಾಯುಕ್ತ ತನಿಖೆಗೆ ಆಕ್ಷೇಪ ವ್ಯಕ್ತಪಡಿಸಿರೋ ದೂರುದಾರ ಸ್ನೇಹಮಯಿ ಕೃಷ್ಣ, ಪ್ರಕರಣವನ್ನ ಸಿಬಿಐಗೆ ನೀಡಬೇಕೆಂದು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಇನ್ನೊಂದೆಡೆ ಈ ಹಗರಣದಲ್ಲಿ ಇಡಿ ಪ್ರವೇಶ ಮಾಡಿದ್ದು, ತನಿಖೆ ನಡೆಸಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ವಿರುದ್ಧವೂ ಸಹ ಅಕ್ರಮವಾಗಿ 50:50 ಅನುಪಾತದಲ್ಲಿ ಸುಮಾರು 19 ನಿವೇಶನಗಳನ್ನು ಪಡೆದುಕೊಂಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಸಂಬಂಧ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ.
ಮುಡಾ ಸೈಟ್ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಿದೆ. ಇನ್ನೊಂದೆಡೆ ಹಗರಣದಲ್ಲಿ ಇ.ಡಿ ಪ್ರವೇಶ ಮಾಡಿದ್ದು, ತನಿಖೆ ನಡೆಸಿದೆ. ಮತ್ತೊಂದೆಡೆ ಪ್ರಕರಣವನ್ನು ಸಿಬಿಐಗೆ ನೀಡಬೇಕೆಂದು ಹೈಕೋರ್ಟ್‌ನಲ್ಲಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದಾರೆ. ಒಂದು ಹೆಜ್ಜೆ ಮುಂದೆ ಹೋಗಿ ಜಿಟಿ ದೇವೇಗೌಡ ವಿರುದ್ಧವೂ ಮೈಸೂರು ಲೋಕಾಯುಕ್ತ ಎಸ್ಪಿಗೆ ಲಿಖಿತ ದೂರು ನೀಡಿ, ಸಹೋದರಿಯ ಮಗ ಮಹೇಂದ್ರ ಹೆಸರಿನಲ್ಲಿ ಬೇನಾಮಿಯಾಗಿ ಪರಿಹಾರ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.
ಮುಡಾದಲ್ಲಿ ಅಕ್ರಮವಾಗಿ ಸಿದ್ದರಾಮಯ್ಯನವರು ಪತ್ನಿ ಪಾರ್ವತಿ ಅವರು ನಿವೇಶಗಳನ್ನು ಪಡೆದುಕೊಂಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಅವರು ದೂರು ನೀಡಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ.
“ದೂರಿನ ಜೊತೆ ಆರು ಪೋಟೋ ಸಾಕ್ಷಿ ನೀಡಿದ್ದಾರೆ. ದೇವನೂರು ಗ್ರಾಮದ ಸರ್ವೆ ನಂ.81/2 ರ ಮಾಲೀಕರೆಂದು ಹೇಳುವವರ ಮನೆಗೆ ಜಿ.ಟಿ.ದೇವೇಗೌಡ ಮತ್ತು ಅವರ ಮಗ ಜಿ.ಡಿ.ಹರೀಶ್ ಗೌಡರ ಮತ್ತು ಇತರರು ಹೋಗಿರುವ ಪೋಟೋವನ್ನು ದೂರಿನಲ್ಲಿ ಲಗತ್ತಿಸಿದ್ದಾರೆ. ಅಲ್ಲಿ ಮಾತುಕತೆಯನ್ನು ನಡೆಸಿ, ಚೆಕ್ಕುಗಳನ್ನು ನೀಡಿರುವುದು ಕಂಡು ಬರುತ್ತದೆ. ಆದ್ದರಿಂದ ಸದರಿ ಫೋಟೊಗಳನ್ನು ಆಧರಿಸಿ ವಿಚಾರಣೆ ಮಾಡಿ. ಫೋಟೊಗಳಲ್ಲಿ ಇರುವವರನ್ನು ವಿಚಾರಣೆಗೊಳಪಡಿಸಿ. ಯಾವ ವಿಚಾರದ ಸಲುವಾಗಿ ಅವರುಗಳು ವ್ಯವಹಾರ ನಡೆಸಿರುತ್ತಾರೆ? ಚೆಕ್ಕುಗಳನ್ನು ವಿತರಣೆ ಮಾಡಿಸಿರುತ್ತಾರೆ ? ಸದರಿ ಚೆಕ್ಕುಗಳು ಯಾರಿಗೆ ಸೇರಿದ್ದು? ಎಂಬ ಅಂಶಗಳ ಬಗ್ಗೆ ತನಿಖೆ ನಡೆಸಿ” ಎಂದು ಕೋರಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ ಬೆಳೆಸಿದ ಮಧ್ಯಮವರ್ಗ; ಮಧ್ಯಮವರ್ಗ ಮುಗಿಸಿದ ಮೋದಿ
“ಮಹೇಂದ್ರರವರ ಹೆಸರಿಗೆ 50:50 ಅನುಪಾತದ ಹೆಸರಿನಲ್ಲಿ ನಿವೇಶನಗಳನ್ನು ಪಡೆದಿರುತ್ತಾರೆ. ಈ ಎಲ್ಲಾ ಅಂಶಗಳ ಬಗ್ಗೆ ತನಿಖೆಯನ್ನು ನಡೆಸಿ. ಜಿ ಟಿದೇವೇಗೌಡ ರವರು ಬೇನಾಮಿ ಹೆಸರಿನಲ್ಲಿ ಅವರ ಸಹೋದರಿಯ ಮಗ ಮಹೇಂದ್ರರವರ ವ್ಯವಹಾರ ನಡೆಸಿರುವುದನ್ನು ಖಚಿತಪಡಿಸಿಕೊಂಡು ಬೇನಾಮಿ ಹೆಸರಿನಲ್ಲಿ ವ್ಯವಹಾರ ನಡೆಸಿರುವವರು. ಇವರಿಗೆ ಸಹಕರಿಸಿರುವವರ ವಿರುದ್ದ ಕ್ರಮ ಕೈಗೊಳ್ಳಿ” ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.
ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಜಿಟಿಡಿ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಹೆಸರು ಕೇಳಿಬರುತ್ತಿದ್ದಂತೆಯೇ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಟೀಕೆಗಳ ಸುರಿಮಳೆಗೈಯುತ್ತಿದ್ದಾರೆ. ಹಗರಣದಲ್ಲಿ ಸಿದ್ದರಾಮಯ್ಯ ಹೆಸರು ಕೇಳಿಬಂದಿದ್ದರಿಂದ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ವಿಪಕ್ಷಗಳು ಬಿಗಿಪಟ್ಟು ಹಿಡಿದಿವೆ. ಇದರ ಮಧ್ಯ ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ ಅವರು ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದಾರೆ. ಈ ಸಂಬಂಧ ಮೈಸೂರು ದಸರಾ ಕಾರ್ಯಕ್ರಮದಲ್ಲೇ ಬಹಿರಂಗವಾಗಿಯೇ ಜಿ ಟಿ ದೇವೇಗೌಡ ಅವರು ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದರು.