ಉಡುಪಿ | ನೂತನ ಗೃಹ ಸಚಿವರಿಗೆ ಅಹವಾಲು ಸಲ್ಲಿಸಿದ ದಲಿತ ಮುಖಂಡರು

Date:

Advertisements

ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡು ಪ್ರಥಮ ಬಾರಿಗೆ ಉಡುಪಿಗೆ ಆಗಮಿಸಿದ ಡಾ. ಜಿ ಪರಮೇಶ್ವರ್ ಅವರನ್ನು ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಸಮಿತಿ ಪದಾಧಿಕಾರಿಗಳು ಭೇಟಿ ಮಾಡಿದ್ದು, ಜಿಲ್ಲೆಗೆ ಸಂಬಂಧಿಸಿದಂತೆ ಅನೇಕ ಅಹವಾಲುಗಳನ್ನು ಸಲ್ಲಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಪಿಟಿಸಿಎಲ್‌ ಕಾಯ್ದೆ ನೆಪ ಮಾಡಿಕೊಂಡು ದಲಿತರಿಗೆ ಮಂಜೂರಾದ ಭೂಮಿಯನ್ನು ವಾಣಿಜ್ಯ ಉದ್ದೇಶಕ್ಕೆ ಪರಿವರ್ತನೆ ಮಾಡುವುದನ್ನು ನಿಲ್ಲಿಸಿದ್ದಾರೆ. ಇದರಿಂದಾಗಿ ಉದ್ಯಮ ನಡೆಸಲು ದಲಿತ ಸಮುದಾಯಕ್ಕೆ ತೀವ್ರ ಹಿನ್ನಡೆಯಾಗಿದೆ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ.

ಪಿಟಿಸಿಎಲ್‌ ಕಾಯ್ದೆಯಲ್ಲಿ ಭೂ ಪರಭಾರೆ ಬಗ್ಗೆ ವಿಶೇಷ ಶರತ್ತು ವಿಧಿಸಿರುವುದರಿಂದ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಪರಿಶಿಷ್ಟರಿಗೆ ಗೃಹ ನಿರ್ಮಾಣ ಸಾಲ ನೀಡುತ್ತಿಲ್ಲ ಎಂದು ತಿಳಿಸಿದ್ದಾರೆ.

Advertisements

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯಲ್ಲಿ ಎಸ್‌ಸಿ, ಎಸ್‌ಟಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ನಿಯಮದಂತೆ ನಿಗದಿತ ಅವಧಿಯೊಳಗೆ ಕುಂದು ಕೊರತೆ ಸಭೆ ಕರೆಯುತ್ತಿಲ್ಲ ಎಂದು ದೂರಿದ್ದಾರೆ.

ಜಿಲ್ಲೆಯ ವಿಭಾಗ ಮಟ್ಟದಲ್ಲಿ ಮತ್ತು ಪ್ರತಿ ಪೊಲೀಸ್‌ ಠಾಣೆಯಲ್ಲಿಯೂ ದಲಿತರ ಕುಂದುಕೊರತೆ ಸಭೆ ಕರೆಯುತ್ತಿಲ್ಲ. ಕಾಟಾಚಾರಕ್ಕೆ ಎಂಬಂತೆ ದಾಖಲೆಗಳಲ್ಲಿ ತೋರಿಸಲು ಠಾಣಾ ಮಟ್ಟದಲ್ಲಿ ಸಭೆಗಳನ್ನು ಕರೆದಂತೆ ದಾಖಲೆಗಳನ್ನು ತಯಾರಿಸಿ ಇಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ಎಲ್ಲ ಪೋಲಿಸ್ ಠಾಣೆಗಳಲ್ಲಿ ಎಸ್‌ಸಿ, ಎಸ್‌ಟಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅನ್ವಯ ಕೇಸು ದಾಖಲಾದಾಗ ಸ್ವತಃ ಠಾಣಾಧಿಕಾರಿಯೇ ಮುತುವರ್ಜಿ ವಹಿಸಿ ಪ್ರತಿದೂರು ದಾಖಲಿಸುತ್ತಿದ್ದಾರೆ ಎಂದು ದೂರಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾಸನ | ಊಟ ಸೇವಿಸಿದ ಬಳಿಕ 35 ಮಂದಿ ಸೈನಿಕರು ಅಸ್ಪಸ್ಥ; ಆಸ್ಪತ್ರೆಗೆ ದಾಖಲು

ಈ ವೇಳೆ ದಲಿತ ಸಂಘರ್ಷ ಸಮಿತಿ ಐಕ್ಯ ಹೋರಾಟ ಸಮಿತಿಯ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ್ ಗಿಳಿಯಾರು, ಸಂಚಾಲಕರಾದ ಸುಂದರ ಮಾಸ್ಟರ್, ಶ್ಯಾಮರಾಜ್ ಬಿರ್ತಿ, ವಾಸುದೇವ ಮುಧೂರು, ವಿಶ್ವನಾಥ ಬೆಣ್ಣಂಪಳ್ಳಿ, ಪರಮೇಶ್ವರ ಉಪ್ಪೂರು, ರಮೇಶ್ ಕೆಳಾರ್ಕಳಬೆಟ್ಟು, ಆನಂದ ಬ್ರಹ್ಮಾವರ, ಜಿಲ್ಲಾ ಪದಾಧಿಕಾರಿಳಾದ ಸಂಜೀವ ಬಳ್ಕೂರು, ಸುರೇಶ ಹಕ್ಲಾಡಿ, ಮಂಜುನಾಥ ಬಾಳ್ಕುದ್ರು, ಅರುಣ್ ಪಾಡಿಗಾರ, ಶಿವಾನಂದ ಬಿರ್ತಿ ಹಾಗೂ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X