ಭೂ ಪರಿವರ್ತನೆ ಪ್ರಕ್ರಿಯೆ ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು: ಸಿಎಂ ಸಿದ್ದರಾಮಯ್ಯ ಸೂಚನೆ

Date:

Advertisements

ಭೂ ಪರಿವರ್ತನೆ ಸಂಪೂರ್ಣ ಪ್ರಕ್ರಿಯೆ ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ಮಾಸ್ಟರ್‌ ಪ್ಲ್ಯಾನ್‌ ಆದ ಕಡೆ ಮತ್ತೆ ಭೂ ಪರಿವರ್ತನೆ ಅಗತ್ಯವಿಲ್ಲ ಎಂದು ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಈ ಕುರಿತು ಆದೇಶವನ್ನು ಆದಷ್ಟು ಬೇಗನೆ ಹೊರಡಿಸಲಾಗುವದು ಸಿಎಂ ಸಿದ್ದರಾಮಯ್ಯ ಹೇಳಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿಗಳು, “ಬರೀ ಕ್ವಾಂಟಿಟಿ ಲೇವಾರಿ ಸಾಲದು, ಕ್ವಾಲಿಟಿ ವಿಲೇವಾರಿ ಆದರೆ ಮಾತ್ರ ಮೇಲ್ಮನವಿಗಳಿಗೆ ಬ್ರೇಕ್ ಬೀಳುತ್ತದೆ. ಈ ದಿಕ್ಕಲ್ಲಿ ಹೆಚ್ಚಿನ ಗಮನ ಹರಿಸಿ ಎಂದು ಸಚಿವ ಕೃಷ್ಣ ಬೈರೇಗೌಡರಿಗೆ ಸಿಎಂ ಸೂಚನೆ ನೀಡಿದರು.

“ಖಾತೆ ಬದಲಾವಣೆ ಪ್ರಕ್ರಿಯೆಯನ್ನು ಶೇ.65 ಪ್ರಕರಣಗಳಲ್ಲಿ ಒಂದು ದಿನದ ಒಳಗಾಗಿ ಮಾಡಲಾಗುತ್ತಿರುವುದು ಒಳ್ಳೆಯ ಸಂಗತಿ. ಅಟೋ ಮ್ಯುಟೇಶನ್‌ ಮೂಲಕ ಇದು ಸಾಧ್ಯವಾಗಿದೆ. ನಗರ ಪ್ರದೇಶಗಳಲ್ಲಿ ಮಾಸ್ಟರ್‌ ಪ್ಲಾನ್‌ ಕಾಲದಿಂದ ಕಾಲಕ್ಕೆ ನವೀಕರಿಸಬೇಕು. ಮ್ಯುಟೇಶನ್‌, ಭೂ ಪರಿವರ್ತನೆ ಪ್ರಕರಣಗಳಲ್ಲಿ ಜನಸಾಮಾನ್ಯರಿಗೆ ಯಾವುದೇ ಕಿರುಕುಳ, ಅನಗತ್ಯ ವಿಳಂಬವಾಗದಂತೆ ಎಚ್ಚರಿಕೆ ವಹಿಸಿ” ಎಂದು ಅಧಿಕಾರಿಗಳಿಗೆ ಸೂಚಿಸಿದರು.

Advertisements

“ಕಂದಾಯ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ಆದ್ಯತೆ ಮೇರೆಗೆ ವಿಲೇವಾರಿ ಮಾಡಬೇಕು. ವಿಳಂಬಕ್ಕೆ ಅವಕಾಶ ಇರಬಾರದು. ತಹಶೀಲ್ದಾರ್‌ ನ್ಯಾಯಾಲಯಗಳಲ್ಲಿ ಮೂರು ತಿಂಗಳ ಒಳಗಾಗಿ ಪ್ರಕರಣಗಳ ವಿಲೇವಾರಿ ಮಾಡಬೇಕು. ನಮ್ಮ ಸರ್ಕಾರ ಬಂದಾಗ 10 ಸಾವಿರಕ್ಕೂ ಮಿಕ್ಕಿ ಅವಧಿ ಮೀರಿದ ಪ್ರಕರಣಗಳು ಇದ್ದವು. ಈಗ ಕೇವಲ 369 ಪ್ರಕರಣಗಳು ಮಾತ್ರ ತಹಶೀಲ್ದಾರ್‌ ನ್ಯಾಯಾಲಯಗಳಲ್ಲಿವೆ. ಪ್ರಕರಣಗಳ ವಿಲೇವಾರಿ ತ್ವರಿತಗೊಳಿಸುವ ಜತೆಗೆ ನ್ಯಾಯದಾನದ ಗುಣಮಟ್ಟ ಸಹ ಸುಧಾರಿಸಬೇಕು. ಜಿಲ್ಲಾಧಿಕಾರಿ ನ್ಯಾಯಾಲಯಗಳಲ್ಲಿ ಹತ್ತಾರು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಕರಣಗಳಲ್ಲಿ ಕೇವಲ ಒಂದು ವರ್ಷದಲ್ಲಿ ಶೇ.36 ರಷ್ಟು ಪ್ರಕರಣಗಳ ವಿಲೇವಾರಿ ಆಗಿದೆ. ಜಿಲ್ಲಾಧಿಕಾರಿ ನ್ಯಾಯಾಲಯಗಳಲ್ಲಿ 9,947 ಪ್ರಕರಣಗಳು ಒಂದು ವರ್ಷಕ್ಕೂ ಅಧಿಕ ಅವಧಿಯಿಂದ ಬಾಕಿಯಿತ್ತು. ಈಗ ಇದರ ಪ್ರಮಾಣ ಕೇವಲ 6 ಸಾವಿರಕ್ಕೆ ಇಳಿದಿದೆ” ಎಂದರು.

“ಬೆಂಗಳೂರು ವ್ಯಾಪ್ತಿಯಲ್ಲಿ ಪ್ರಕರಣಗಳ ತ್ವರಿತ ವಿಲೇವಾರಿಗೆ 18 ವಿಶೇಷ ಉಪವಿಭಾಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಜಮೀನು ಖಾತೆಗೆ ಆಧಾರ್ ಸೀಡಿಂಗ್‌ ಮಾಡಲಾಗುತ್ತಿದೆ. ರಾಜ್ಯದಲ್ಲಿ ಇದುವರೆಗೆ 2.22 ಕೋಟಿ ಖಾತೆಗಳಿಗೆ ಆಧಾರ ಸೀಡಿಂಗ್‌ ಮಾಡಲಾಗಿದ್ದು, ಇದರಿಂದ ನಕಲಿ ದಾಖಲೆ ಸೃಷ್ಟಿಸುವುದನ್ನು ತಡೆಯಲು ಸಾಧ್ಯವಾಗಿದೆ. ಭೂ ಪರಿವರ್ತನೆಯಾಗದೆ ವಾಣಿಜ್ಯ ಉದ್ದೇಶಗಳಿಗೆ ಜಮೀನು ಬಳಕೆ ಪ್ರಕರಣಗಳನ್ನು ಪತ್ತೆ ಹಚ್ಚಲು ಇದರಿಂದ ಸಾಧ್ಯವಾಗಿದೆ” ಎಂದು ಹೇಳಿದರು.

“ಅನಧಿಕೃತ ಬಡಾವಣೆಗಳಿಗೆ ಖಾತಾ ನೀಡುವುದನ್ನು ಸ್ಥಗಿತಗೊಳಿಸಲು ಈಗಾಗಲೇ ಸೂಚನೆ ನೀಡಿದ್ದೇವೆ. ಒಂದು ಅವಧಿಗೆ ಬಿ ಖಾತಾ ನೀಡುವ ಪ್ರಕ್ರಿಯೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ, ಇನ್ನು ಮುಂದೆ ಅನಧಿಕೃತ ಬಡಾವಣೆಗಳು ತಲೆ ಎತ್ತದಂತೆ ನೋಡಿಕೊಳ್ಳಬೇಕು. ರಾಜ್ಯದಲ್ಲಿ ಹಲವು ಪ್ರಕರಣಗಳಲ್ಲಿ ಜಮೀನುಗಳ ಖಾತೆ ಇನ್ನೂ ನಿಧನ ಹೊಂದಿದವರ ಹೆಸರಿನಲ್ಲಿಯೇ ಇದೆ. ಪೌತಿ ಖಾತೆ ಅಭಿಯಾನದ ಮೂಲಕ ಮಾಲಿಕರ ಹೆಸರಿಗೆ ಜಮೀನು ಮಾಡುವ ನೋಂದಣಿ ಮಾಡುವ ಕಾರ್ಯವನ್ನು ತ್ವರಿತಗೊಳಿಸಬೇಕು” ಎಂದು ಸಿಎಂ ಸೂಚನೆ ನೀಡಿದರು.

“ಭೂ ಸುರಕ್ಷಾ” ಪರಿಣಾಮಕಾರಿಯಾಗಿ ಜಾರಿ

“ಭೂ ದಾಖಲೆಗಳ ರಕ್ಷಣೆಗೆ, ವಂವಕರಿಂದ ದುರುಪಯೋಗ ಆಗದಂತೆ, ದಾಖಲೆ ತಿದ್ದಲು ಅವಕಾಶ ಆಗದಂತೆ “ಭೂ ಸುರಕ್ಷಾ” ಪರಿಣಾಮಕಾರಿಯಾಗಿ ಜಾರಿಯಾಗಲಿ” ಎಂದು ಸಿದ್ದರಾಮಯ್ಯ ಹೇಳಿದರು. ಈಗಾಗಲೇ 8 ಕೋಟಿ ಮೂಲ ದಾಖಲೆಗಳ ಕಂಪ್ಯೂಟರೀಕರಣ. ಖದೀಮರು ತಿದ್ದಲು ಅವಕಾಶ ಆಗದಂತೆ ದಾಖಲೆಗಳಿಗೆ ಡಿಜಿಟಲ್ ಭದ್ರತೆ ಕಲ್ಪಿಸಲಾಗಿದೆ ಎಂದು ಸಿಎಂಗೆ ಸಚಿವ ಕೃಷ್ಣ ಬೈರೇಗೌಡ ವಿವರಿಸಿದರು.

“ತಂತ್ರಾಂಶವನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಕಂದಾಯ ವ್ಯವಸ್ಥೆಯಲ್ಲಿ ಸುಧಾರಣಾ ಕಾರ್ಯ ಕೈಗೊಳ್ಳಲಾಗಿದೆ. ನಕ್ಷಾ ಯೋಜನೆ ಮೂಲಕ ನಗರ ಪ್ರದೇಶದಲ್ಲಿ ಡ್ರೋನ್‌ ಸರ್ವೆ ಮೂಲಕ ಪ್ರಾಪರ್ಟಿ ಕಾರ್ಡು ನೀಡುತ್ತಿದ್ದೇವೆ. 21 ಜಿಲ್ಲೆಗಳಲ್ಲಿ ಡ್ರೋನ್‌ ಮೂಲಕ ಸರ್ವೇ ಕಾರ್ಯವನ್ನು ಕೈಗೊಳ್ಳಲಾಗಿದೆ. ಉಳಿದ ಜಿಲ್ಲೆಗಳಲ್ಲೂ ಡ್ರೋನ್ ಸರ್ವೆ ಆರಂಭಿಸಬೇಕು” ಎಂದು ಸಿಎಂ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X