ಬೆಂಗಳೂರಿನ ಶೇಷಾದ್ರಿಪುರಂ ಬಳಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಸುಮಾರು 100ಕ್ಕೂ ಹೆಚ್ಚು ವಾಹನಗಳು ಸುಟ್ಟು ಭಸ್ಮವಾಗಿರುವ ಘಟನೆ ಬುಧವಾರ ನಡೆದಿದೆ.
ಶೇಷಾದ್ರಿಪುರಂನಲ್ಲಿರುವ ಜೆಡಿಎಸ್ ಕಚೇರಿ ಬಳಿಯ ಜಕ್ಕರಾಯನ ಕೆರೆ ಮೈದಾನದಲ್ಲಿ ಘಟನೆ ನಡೆದಿದೆ. ಪೊಲೀಸರು ಸೀಜ್ ಮಾಡಿದ್ದ ಹಲವಾರು ವಾಹನಗಳನ್ನು ಮೈದಾನದಲ್ಲಿ ನಿಲ್ಲಿಸಿದ್ದರು. ಮೈದಾನದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ವಾಹನಗಳು ಸುಟ್ಟುಹೋಗಿವೆ.
ಬೆಂಕಿ ಅವಘಡದಲ್ಲಿ ಸುಮಾರು 5 ಕಾರು, 5 ಆಟೋ, 50ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟುಹೋಗಿದ್ದು, ಹಲವಾರು ವಾಹನಗಳಿಗೂ ಬೆಂಕಿ ತಗುಲಿದೆ. ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ಮತ್ತು ಸಿಬ್ಬಂದಿ ಧಾವಿಸಿದ್ದು, ಬೆಂಕಿ ನಂದಿಸುತ್ತಿದ್ದಾರೆ.
ಸಾರ್ವಜನಿಕರಲ್ಲಿ ಯಾರೋ ಸಿಗರೇಟ್ ಹೊತ್ತಿಸಿಕೊಂಡು ಬೆಂಕಿಕಡ್ಡಿಯನ್ನು ಒಣ ಹುಲ್ಲಿನ ಎಸೆದಿದ್ದು, ಪರಿಣಾಮವಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ.