ಮಹಾ ಕುಂಭಮೇಳ ಸೇರಿ ಧಾರ್ಮಿಕ ಕೇಂದ್ರಗಳಲ್ಲಾದ ಭೀಕರ ದುರಂತಗಳು; ನೂರಾರು ಭಕ್ತರ ಬಲಿ

Date:

Advertisements

ಮಹಾ ಕುಂಭಮೇಳದಲ್ಲಿ ಬುಧವಾರ ನಡೆದ ಕಾಲ್ತುಳಿತದಲ್ಲಿ ಸುಮಾರು 17ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಹಾಗೆಯೇ ಹಲವು ಮಂದಿ ಗಾಯಗೊಂಡಿದ್ದಾರೆ. ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳುತ್ತಿದ್ದರೂ ಭಕ್ತರ ಸಾವು ನಿರಾಕರಿಸಲಾಗದು.

ಕಳೆದ ಹಲವು ವರ್ಷಗಳಿಂದ ಹೀಗೆಯೇ ನಡೆದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಕಾಲ್ತುಳಿತ ನಡೆದಿದೆ. ಹಲವು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ವರ್ಷ ಜುಲೈ 2ರಂದು ಹಾಥರಸ್ ಕಾಲ್ತುಳಿತವೂ ನೂರಾರು ಜನರನ್ನು ಬಲಿ ತೆಗೆದುಕೊಂಡಿದೆ. ಸ್ವಯಂ ಘೋಷಿತ ದೇವಮಾನವ ಬೋಲೆ ಬಾಬಾ ನಡೆಸಿದ ಸತ್ಸಂಗದಲ್ಲಿ ನಡೆದ ಕಾಲ್ತುಳಿತದಿಂದಾಗಿ 121 ಮಂದಿ ಜೀವ ಕಳೆದುಕೊಂಡಿದ್ದು, ಈ ಪೈಕಿ ಬಹುತೇಕರು ಮಹಿಳೆಯರಾಗಿದ್ದಾರೆ.

ಇದನ್ನು ಓದಿದ್ದೀರಾ? ಮಹಾ ಕುಂಭಮೇಳ ಕಾಲ್ತುಳಿತ | ಕೇಂದ್ರ, ಯೋಗಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

Advertisements

ಹೀಗೆಯೇ 2005ರಲ್ಲಿ ಮಹಾರಾಷ್ಟ್ರದ ಮಾಂದರ್‌ದೇವಿ ದೇವಾಲಯದಲ್ಲಿ ನಡೆದ ಕಾಲ್ತುಳಿತದಲ್ಲಿ 340 ಭಕ್ತರು ಸಾವನ್ನಪ್ಪಿದ್ದಾರೆ. 2008ರಲ್ಲಿ ರಾಜಸ್ಥಾನದ ಚಾಮುಂಡ ದೇವಿ ದೇವಾಲಯದಲ್ಲಿ ನಡೆದ ಕಾಲ್ತುಳಿತದಲ್ಲಿ 250 ಮಂದಿ ಮೃತಪಟ್ಟಿದ್ದಾರೆ. 2008ರಲ್ಲಿ ಹಿಮಾಚಲ ಪ್ರದೇಶದಲ್ಲಿ ನಡೆದ ಕಾಲ್ತುಳಿತದಲ್ಲಿ 162 ಮಂದಿ ಸಾವನ್ನಪ್ಪಿದ್ದಾರೆ. ಪ್ರಮುಖ ಕಾಲ್ತುಳಿತ ಪ್ರಕರಣಗಳು ಇಲ್ಲಿವೆ ನೋಡಿ.

2024ರ ಜುಲೈ 2: ಸ್ವಯಂ ಘೋಷಿತ ದೇವಮಾನವ ಬೋಲೆ ಬಾಬಾ ಉತ್ತರ ಪ್ರದೇಶದ ಹಾಥರಸ್‌ನಲ್ಲಿ ನಡೆಸಿದ ಸತ್ಸಂಗದಲ್ಲಿ ಕಾಲ್ತುಳಿತ ಉಂಟಾಗಿ ಬರೋಬ್ಬರಿ 121 ಮಂದಿ ಸಾವನ್ನಪ್ಪಿದ್ದಾರೆ.

2023ರ ಮಾರ್ಚ್ 31: ಇಂದೋರ್ ನಗರದ ರಾಮನವಮಿ ಸಂದರ್ಭದಲ್ಲಿ ಹವನ ನಡೆಯುತ್ತಿದ್ದ ವೇಳೆ ಗೋಡೆ ಕುಸಿದು ಸುಮಾರು 36 ಮಂದಿ ಮೃತಪಟ್ಟಿದ್ದಾರೆ.

2022ರ ಜನವರಿ 1: ಜಮ್ಮು ಮತ್ತು ಕಾಶ್ಮೀರದ ಮಾತಾ ವೈಷ್ಣೋ ದೇವಿ ಮಂದಿರದಲ್ಲಿ ನೂಕು ನುಗ್ಗಲು ಉಂಟಾಗಿ 12 ಮಂದಿ ಸಾವನ್ನಪ್ಪಿದರೆ, 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

2015ರ ಜುಲೈ 14: ಆಂಧ್ರಪ್ರದೇಶದ ರಾಜಮುಂಡ್ರಿಯಲ್ಲಿ ಪುಷ್ಕರಮ್ ಹಬ್ಬದ ಸಂದರ್ಭದಲ್ಲಿ ಗೋದಾವರಿ ನದಿ ತಟದಲ್ಲಿ ನಡೆದ ಕಾಲ್ತುಳಿತದಿಂದಾಗಿ ಒಟ್ಟು 27 ಯಾತ್ರಿಕರು ಸಾವನ್ನಪ್ಪಿದರೆ, 20 ಮಂದಿಗೆ ಗಾಯವಾಗಿದೆ.

ಇದನ್ನು ಓದಿದ್ದೀರಾ? ತಿರುಪತಿ ಕಾಲ್ತುಳಿತದಲ್ಲಿ ಬಳ್ಳಾರಿ ಮೂಲದ ಮಹಿಳೆ ಸಾವು: ಮೃತರ ಸಂಖ್ಯೆ 6ಕ್ಕೆ ಏರಿಕೆ

2014ರ ಅಕ್ಟೋಬರ್ 3: ಪಾಟ್ನಾದ ಗಾಂಧಿ ಮೈದಾನದಲ್ಲಿ ದಸರಾ ಸಂಭ್ರಮಾಚರಣೆ ಕೊನೆಯಾಗುತ್ತಿದ್ದಂತೆ ನಡೆದ ಕಾಲ್ತುಳಿತದಲ್ಲಿ 32 ಮಂದಿ ಮೃತಪಟ್ಟಿದ್ದು, 26ಕ್ಕೂ ಅಧಿಕ ಮಂದಿಗೆ ಗಾಯವಾಗಿದೆ.

2013ರ ಅಕ್ಟೋಬರ್ 13: ಮಧ್ಯಪ್ರದೇಶದ ದಾಟಿಯಾ ಜಿಲ್ಲೆಯ ರತ್ನಗಢ ಸಮೀಪದಲ್ಲಿ ನಡೆದ ನವರಾತ್ರಿ ಸಂಭ್ರಮದ ವೇಳೆ ಕಾಲ್ತುಳಿತ ಉಂಟಾಗಿ ಒಟ್ಟು 115 ಮಂದಿ ಸಾವನ್ನಪ್ಪಿ, ನೂರು ಮಂದಿ ಗಾಯಗೊಂಡಿದ್ದಾರೆ. ಸೇತುವೆ ಕುಸಿಯುತ್ತಿದೆ ಎಂಬ ವದಂತಿಯಿಂದಾಗಿ ಕಾಲ್ತುಳಿತ ಉಂಟಾಗಿದೆ.

2012ರ ನವೆಂಬರ್ 19: ಪಾಟ್ನಾದ ಗಂಗಾ ನದಿ ಸಮೀಪದಲ್ಲಿ ಛತ್ ಪೂಜೆ ಸಂದರ್ಭದಲ್ಲಿ ನಡೆದ ಕಾಲ್ತುಳಿತದಿಂದಾಗಿ ಒಟ್ಟು 20 ಮಂದಿ ಮೃತಪಟ್ಟಿದ್ದು ಹಲವು ಮಂದಿ ಗಾಯಗೊಂಡಿದ್ದಾರೆ.

2011ರ ನವೆಂಬರ್ 8: ಹರಿದ್ವಾರದಲ್ಲಿ ಹರ್‌-ಕಿ-ಪುರಿ ಘಾಟ್‌ನ ಸಮೀಪ ಗಂಗಾ ನದಿ ತಟದಲ್ಲಿ ಕಾಲ್ತುಳಿತ ಉಂಟಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

2011ರ ಜನವರಿ 14: ಕೇರಳದ ಇಡುಕ್ಕಿ ಜಿಲ್ಲೆಯ ಪುಲ್ಮೇಡುವಿನಲ್ಲಿ ಜೀಪು ಅಪಘಾತ ಸಂಭವಿಸಿದ ಕಾರಣ ನಡೆದ ಕಾಲ್ತುಳಿತದಲ್ಲಿ ಸುಮಾರು 104 ಶಬರಿಮಳೆ ಯಾತ್ರಿಕರು ಸಾವನ್ನಪ್ಪಿ, 40 ಮಂದಿ ಗಾಯಗೊಂಡಿದ್ದಾರೆ.

2010ರ ಮಾರ್ಚ್ 4: ಉತ್ತರ ಪ್ರದೇಶದ ರಾಮಜಾನಕಿ ದೇವಾಲಯದಲ್ಲಿ ನಡೆದ ಕಾಲ್ತುಳಿತದಲ್ಲಿ 36 ಮಂದಿ ಸಾವನ್ನಪ್ಪಿದ್ದಾರೆ. ಸ್ವಯಂ ಘೋಷಿತ ದೇವಮಾನವರೊಬ್ಬರು ಉಚಿತ ಆಹಾರ, ವಸ್ತ್ರ ವಿತರಿಸುತ್ತಿದ್ದಾಗ ಕಾಲ್ತುಳಿತ ಉಂಟಾಗಿದೆ.

ಇದನ್ನು ಓದಿದ್ದೀರಾ? ಹಾಥರಸ್ ಕಾಲ್ತುಳಿತ | ಸಾವು ಅನಿವಾರ್ಯ, ವಿಧಿಯಿಂದ ಯಾರೂ ತಪ್ಪಿಸಿಕೊಳ್ಳಲಾಗದು: ಭೋಲೆ ಬಾಬಾ!

2008ರ ಸೆಪ್ಟೆಂಬರ್ 30: ರಾಜಸ್ಥಾನದ ಜೋದಪುರ ನಗರದಲ್ಲಿ ಚಾಮುಂಡಿ ದೇವಿ ದೇವಾಲಯದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ವದಂತಿಯಿಂದಾಗಿ ಉಂಟಾದ ಕಾಲ್ತುಳಿತದಿಂದಾಗಿ ಒಟ್ಟು 250 ಮಂದಿ ಸಾವನ್ನಪ್ಪಿದ್ದು, 60 ಮಂದಿ ಗಾಯಗೊಂಡಿದ್ದಾರೆ.

2008ರ ಆಗಸ್ಟ್ 3: ಹಿಮಾಚಲ ಪ್ರದೇಶದ ಬೀಲಾಸ್ಪುರ ಜಿಲ್ಲೆಯ ನೈನಾ ದೇವಿ ದೇವಾಲಯದಲ್ಲಿ ಗುಡ್ಡೆ ಕುಸಿತ ಉಂಟಾಗಿದೆ ಎಂಬ ವದಂತಿಯಿಂದಾಗಿ ಉಂಟಾದ ಕಾಲ್ತುಳಿತದಿಂದಾಗಿ ಒಟ್ಟು 162 ಮಂದಿ ಮೃತಪಟ್ಟಿದ್ದು, 47 ಮಂದಿ ಗಾಯಗೊಂಡಿದ್ದಾರೆ.

2005ರ ಜನವರಿ 25: ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಮಾಂದರ್‌ದೇವಿ ದೇವಾಲಯದಲ್ಲಿ ನಡೆದ ಅವಘಡದಲ್ಲಿ 340 ಭಕ್ತರು ಸಾವನ್ನಪ್ಪಿದ್ದಾರೆ. ವಾರ್ಷಿಕವಾಗಿ ನಡೆಯುವ ತೀರ್ಥಯಾತ್ರೆಯ ಸಂದರ್ಭದಲ್ಲಿ ಈ ಕಾಲ್ತುಳಿತ ಉಂಟಾಗಿದೆ. ಮೆಟ್ಟಿಲುಗಳು ತೇವವಾಗಿ ಕೆಲವು ಭಕ್ತರು ಕಾಲುಜಾರಿ ಬಿದ್ದ ಕಾರಣದಿಂದಾಗಿ ಸುಮಾರು 340 ಮಂದಿ ಮೃತಪಟ್ಟಿದ್ದಾರೆ.

2003ರ ಆಗಸ್ಟ್ 27ರಂದು ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ನಡೆದ ಕುಂಭಮೇಳದಲ್ಲಿ ಪವಿತ್ರ ಸ್ನಾನದ ವೇಳೆ ಕಾಲ್ತುಳಿತ ಉಂಟಾಗಿ 39 ಮಂದಿ ಮೃತಪಟ್ಟಿದ್ದು, 140 ಮಂದಿಗೆ ಗಾಯವಾಗಿದೆ.

ಈ ಪೈಕಿ ಬಹುತೇಕ ಪ್ರಕರಣಗಳಲ್ಲಿ ಆಡಳಿತವು ಸರಿಯಾಗಿ ನಿರ್ವಹಣೆ ಮಾಡದಿರುವುದು, ಕಾರ್ಯಕ್ರಮ ಆಯೋಜಕರು ಹೆಚ್ಚುವರಿ ಪೊಲೀಸ್ ಭದ್ರತೆಗೆ ಮನವಿ ಮಾಡದಿರುವುದು, ವದಂತಿಗಳು ಕಾರಣವಾಗಿದೆ. ಮಹಾ ಕುಂಭಮೇಳದಲ್ಲಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿದ್ದರೂ ಕೂಡಾ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಸರಿಯಾಗಿ ನಿರ್ವಹಣೆ ಮಾಡುವಲ್ಲಿ ಎಡವಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X