ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಕಾಲ್ತುಳಿತದಿಂದ ಬೆಳಗಾವಿ ಮೂಲದ ನಾಲ್ವರು ಸಾವಿಗಿಡಾದ ಘಟನೆ ವರದಿಯಾಗಿದೆ.
ಬೆಳಗಾವಿ ನಗರದ ವಡಗಾವಿಯ ನಿವಾಸಿಗಳಾದ ಜ್ಯೋತಿ ಹತ್ತರವಾಠ , ಹಾಗೂ ಮೇಘಾ ಹತ್ತರವಾಠ, ಶೆಟ್ಟಿ ಗಲ್ಲಿಯ ಅರುಣ್ ಕೋರ್ಪಡೆ, ಶಿವಾಜಿನಗರ ನಿವಾಸಿ ಮಹಾದೇವಿ ಬಾವನೂರ ಕಾಲ್ತುಳಿತದಲ್ಲಿ ಸಾವಿಗಿಡಾಗಿದ್ದಾರೆ.
ಕುಂಭಮೇಳ ಕಾಲ್ತುಳಿತ ದುರ್ಘಟನೆಯಲ್ಲಿ ಬೆಳಗಾವಿ ಮೂಲದ ಕೆಲವರು ಕಾಣೆಯಾಗಿದ್ದು ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.