ಮಹಾ ಕುಂಭಮೇಳದಲ್ಲಿ ಕಾಲ್ತುಳಿತ; ಸಾವಿನ ಸಂಖ್ಯೆ 40ಕ್ಕೆ ಏರಿಕೆ

Date:

Advertisements

ಉತ್ತರ ಪ್ರದೇಶದ ಪ್ರಯಾಗರಾಜ್​ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಬುಧವಾರ ಉಂಟಾಗಿರುವ ಕಾಲ್ತುಳಿತದಲ್ಲಿ ಕರ್ನಾಟಕದ ನಾಲ್ವರು ಸೇರಿದಂತೆ 40 ಮಂದಿ ಮೃತಪಟ್ಟಿರುವ ವರದಿಯಾಗಿದೆ. 60 ಮಂದಿ ಗಾಯಗೊಂಡಿದ್ದು, 25 ಮೃತದೇಹಗಳ ಗುರುತು ಪತ್ತೆಹಚ್ಚಲಾಗಿದೆ ಎಂದು ಕುಂಭಮೇಳದ ಡಿಐಜಿ ವೈಭವ್ ಕೃಷ್ಣ ತಿಳಿಸಿದ್ದಾರೆ.

ಮುಂಜಾನೆ 3ಗಂಟೆಯ ಬ್ರಹ್ಮ ಮುಹೂರ್ತದಲ್ಲಿ ನೀರಿನಲ್ಲಿ ಸ್ನಾನ ಮಾಡಲೆಂದು ಅಖಾಡ ಕ್ಷೇತ್ರದಲ್ಲಿ ಸಾವಿರಾರು ಮಂದಿ ಮಲಗಿದ್ದರು. ಮುಹೂರ್ತದ ಸಮಯವಾಗುತ್ತಿದ್ದಂತೆ ಸಾವಿರಾರು ಸಂಖ್ಯೆಯ ಜನರು ಹಿಂದು ಮುಂದು ನೋಡದೆ ನುಗ್ಗಿದರು. ಬ್ಯಾರಿಕೇಡ್‌ಗಳನ್ನು ನೆಲಕ್ಕುರುಳಿಸಿ ಮಲಗಿದವರನ್ನು ತುಳಿದುಕೊಂಡು ಹೋಗಿದ್ದರಿಂದ ಈ ದುರಂತ ಸಂಭವಿಸಿದೆ.

ದುರಂತದ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಡಿಐಜಿ ವೈಭವ್ ಕೃಷ್ಣ, “ಪ್ರಯಾಗ್‌ರಾಜ್‌ ಕಾಲ್ತುಳಿತದ ಸಹಾಯವಾಣಿ ಸಂಖೆ 1920. ಮಹಾಕುಂಭ ಮೇಳಕ್ಕೆ ಬಂದಿದ್ದ ಕುಟುಂಬದವರು ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದು. ಇಂದು ಮೌನಿ ಅಮಾವಾಸ್ಯೆಯಾದ್ದರಿಂದ ಮಹಾಕುಂಭ ಮೇಳಕ್ಕೆ ಲಕ್ಷಾಂತರ ಮಂದಿ ಆಗಮಿಸಿದ್ದರು. ಯಾರಿಗೂ ವಿಐಪಿ, ವಿವಿಐಪಿ ವ್ಯವಸ್ಥೆ ಮಾಡಿರಲಿಲ್ಲ” ಎಂದು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಮಹಾ ಕುಂಭಮೇಳ ಕಾಲ್ತುಳಿತ | ಕೇಂದ್ರ, ಯೋಗಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

“ಮೃತಪಟ್ಟವರ ಪೈಕಿ ಕರ್ನಾಟಕದ ನಾಲ್ವರು, ಅಸ್ಸಾಂನ ಒಬ್ಬರು, ಗುಜರಾತ್‌ನ ಒಬ್ಬರು ಇದ್ದಾರೆ. ಗಾಯಗೊಂಡವರನ್ನು ಅವರ ಸಂಬಂಧಿಕರು ಕರೆದೊಯ್ದಿದ್ದಾರೆ. 36 ಮಂದಿ ಗಾಯಾಳುಗಳು ಸ್ಥಳೀಯ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೀರತ್ ಗಡಿಯಾರ ಗೋಪುರ ಹತ್ತಿ ವಿಡಿಯೋ ಮಾಡುವ ಸಾಹಸ ಮಾಡಿದ ‘ಸ್ಪೈಡರ್‌ಮ್ಯಾನ್’ ಬಂಧನ!

'ಸ್ಪೈಡರ್‌ಮ್ಯಾನ್' ವೇಷಭೂಷಣವನ್ನು ಧರಿಸಿ ಮೀರತ್‌ನ ಐತಿಹಾಸಿಕ ಗಡಿಯಾರ ಗೋಪುರವನ್ನು ಹತ್ತಿ ಅಪಾಯಕಾರಿ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

Download Eedina App Android / iOS

X